ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕ

ದೆಹಲಿ ಜನವರಿ 5: ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಪಾನಮತ್ತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿದೆ. ಸದ್ಯ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಡಿಸೆಂಬರ್ 6 ರಂದು ಪ್ಯಾರಿಸ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಹೊದಿಕೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಎನ್ನಲಾಗಿದೆ. ಬಳಿಕ ಪುರುಷ ಪ್ರಯಾಣಿಕ ಲಿಖಿತವಾಗಿ ಕ್ಷಮೆಯಾಚಿಸಿದ ಕಾರಣ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಆದರೂ ಪುರುಷ ಪ್ರಯಾಣಿಕನನ್ನು ಬಂಧಿಸಲಾಗಿದೆ.

ವಿಮಾನವು ಡಿಸೆಂಬರ್ 6 ರಂದು ಬೆಳಿಗ್ಗೆ 9:40 ರ ಸುಮಾರಿಗೆ ದೆಹಲಿಯಲ್ಲಿ ಇಳಿಯಿತು. ಪುರುಷ ಪ್ರಯಾಣಿಕರು "ಕುಡಿತದ ಅಮಲಿನಲ್ಲಿದ್ದರು ಮತ್ತು ಅವರು ಕ್ಯಾಬಿನ್ ಸಿಬ್ಬಂದಿಯ ಸೂಚನೆಗಳನ್ನು ಅನುಸರಿಸುತ್ತಿರಲಿಲ್ಲ. ನಂತರ ಪ್ರಯಾಣಿಕ ಮಹಿಳೆ ಹೊದಿಕೆಯ ಮೇಲೆ ಮೂತ್ರ ವಿಸರ್ಜಿಸಿದರು" ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

Passenger urinates on woman on plane

ಪುರುಷ ಪ್ರಯಾಣಿಕನು ವಿಮಾನದಿಂದ ಕೆಳಗಿಳಿದ ಕೂಡಲೇ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅವರನ್ನು ಬಂಧಿಸಿತು. ಆದರೆ ಇಬ್ಬರು ಪ್ರಯಾಣಿಕರು 'ಪರಸ್ಪರ ರಾಜಿ' ಮಾಡಿಕೊಂಡ ನಂತರ ಮತ್ತು ಆರೋಪಿ 'ಲಿಖಿತ ಕ್ಷಮೆಯಾಚನೆ' ಯನ್ನು ಸಲ್ಲಿಸಿದ ನಂತರ ಅವರನ್ನು ಬಿಡಲು ಅನುಮತಿಸಲಾಯಿತು. ಲಿಖಿತ ದೂರು ನೀಡಿದ ಮಹಿಳೆ ಪ್ರಯಾಣಿಕರು ಪೊಲೀಸ್ ಪ್ರಕರಣವನ್ನು ದಾಖಲಿಸಲು ನಿರಾಕರಿಸಿದರು ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+