Breaking: ಪಠಾಣ್ ವಿವಾದ: 'ಬೇಷರಂ ರಂಗ' ಹಾಡಿನಿಂದ ಕೆಲ ದೃಶ್ಯಗಳನ್ನು ತೆಗೆದ ಸಿಬಿಎಫ್‌ಸಿ
ಭಾರೀ ವಿವಾದಕ್ಕೆ ಕಾರಣವಾಗಿದ್ದ ಪಠಾಣ್ ಸಿನಿಮಾದ ದೀಪಿಕಾ ಪಡುಕೋಣೆ ಅವರ ಕೇಸರಿ ಈಜುಡುಗೆಯ ದೃಶ್ಯಗಳನ್ನು ಬೇಷರಂ ರಂಗ ಹಾಡಿನಿಂದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ತೆಗೆದುಹಾಕಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ 'ಪಠಾಣ್' ಚಿತ್ರದ 'ಬೇಷರಂ ರಂಗ್' ಹಾಡು ವಿವಾದಕ್ಕೆ ಕಾರಣವಾಗಿದ್ದು ಚಿತ್ರದಲ್ಲಿನ ಅಶ್ಲೀಲ ಉಡುಪು ವ್ಯಾಪಕ ಪರ-ವಿರೋಧ ಚರ್ಚೆಗೆ ಗ್ರಾಸವಾಗಿತ್ತು.
ಇದರಿಂದ ನಟಿ ದೀಪಿಕಾ ಪಡುಕೋಣೆ ಮತ್ತು ನಟ ಶಾರುಖ್ ಖಾನ್ ಅವರ ಪ್ರತಿಕೃತಿಗಳನ್ನು ದಹಿಸಲಾಗಿತ್ತು. ಉತ್ತರ ಪ್ರದೇಶದಲ್ಲಿ 'ಪಠಾಣ್' ಚಿತ್ರ ಪ್ರದರ್ಶನಗೊಳ್ಳುವ ಥಿಯೆಟರ್‌ಗಳಿಗೆ ಬೆಂಕಿ ಹಚ್ಚುವುದಾಗಿಯೂ ಹಿಂದೂ ಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದವು. ಬೇಷರಮ್ ರಂಗ್ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಉಡುಪು ಧರಿಸಿದ್ದಾಳೆ ಎನ್ನುವುದೇ ಹಿಂದೂವಾದಿಗಳ ಖ್ಯಾತೆಗೆ ಕಾರಣವಾಗಿತ್ತು. ಕೇಸರಿ ಬಿಕಿನಿಯು ಹಿಂದೂ ಧರ್ಮಕ್ಕೆ ಹಾನಿಯುಂಟು ಮಾಡುತ್ತದೆ ಎಂಬ ಆರೋಪದ ಮೇಲೆ ಹಾಡನ್ನು ನಿಷೇಧಿಸಬೇಕೆಂದು ಒತ್ತಾಯಿಸಲಾಗಿತ್ತು.

ಈ ಸಂಬಂಧ ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಗುರುವಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಮತ್ತೊಂದೆಡೆ, ಅಯೋಧ್ಯೆಯ ಮಹಂತ್ ಹನುಮಾನ್ ಗರ್ಹಿ ರಾಜು ದಾಸ್, ಚಲನಚಿತ್ರವನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಈ ಎಲ್ಲಾ ವಿವಾದದ ನಡುವೆ ಸಿಬಿಎಫ್‌ಸಿ ಹಾಡಿನಲ್ಲಿ ವಿವಾದಕ್ಕೆ ಕಾರಣವಾದ ದೃಶ್ಯವನ್ನು ತೆಗೆದು ಹಾಕಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.












Click it and Unblock the Notifications