ವೇದಿಕೆ ಮೇಲೆಯೇ ಪವನ್ ಕಲ್ಯಾಣ್ ಬೇಡಿಕೆ ಈಡೇರಿಸಿದ ನರೇಂದ್ರ ಮೋದಿ!
ಬೆಂಗಳೂರು, ಜೂನ್ 11: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) ಸರ್ಕಾರ ರಚನೆ ಮಾಡಿದ್ದು, ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.
ವಿಜಯವಾಡದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಮೋದಿ ಸಮ್ಮುಖದಲ್ಲಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಸಹ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮ ವಿಶೇಷ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಬೇಡಿಕೆಯನ್ನು ನರೇಂದ್ರ ಮೋದಿ ವೇದಿಕೆಯಲ್ಲಿ ಈಡೇರಿಸುವ ಮೂಲಕ ಎನ್‌ಡಿಎ ಮೈತ್ರಿಕೂಟದ ಮಿತ್ರ ಪಕ್ಷದ ಬೇಡಿಕೆಗೆ ಮನ್ನಣೆ ನೀಡಿದರು.
ಪವನ್ ಕಲ್ಯಾಣ್ ಬೇಡಿಕೆ ಏನು?; ಪ್ರಮಾಣ ವಚನ ಕಾರ್ಯಕ್ರಮ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ವಾಪಸ್ ಹೊರಟರು. ಆಗ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಜೊತೆ ಮಾತುಕತೆ ನಡೆಸಿದರು. ಆಗ ಪವನ್ ಕಲ್ಯಾಣ್ ನರೇಂದ್ರ ಮೋದಿ ಅವರ ಬಳಿಕ ನಟ, ಸಹೋದರ ಚಿರಂಜೀವಿ ಭೇಟಿಯಾಗುವಂತೆ ಮನವಿ ಮಾಡಿದರು.
ಪವನ್ ಬೇಡಿಕೆಗೆ ಒಪ್ಪಿದ ನರೇಂದ್ರ ಮೋದಿ ಪವನ್ ಕಲ್ಯಾಣ್ ಕೈ ಹಿಡಿದುಕೊಂಡು ಅವರ ಜೊತೆಗೆ ಬಂದು ವೇದಿಕೆಯಲ್ಲಿ ಚಿರಂಜೀವಿ ಭೇಟಿ ಮಾಡಿದರು. ಅಲ್ಲದೇ ಇಬ್ಬರ ಕೈ ಹಿಡಿದು ಮೇಲೆತ್ತಿ ಫೋಟೋಗಳಿಗೆ ಫೋಸ್ ನೀಡಿದರು. ಅಲ್ಲದೇ ಇಬ್ಬರನ್ನು ಆತ್ಮೀಯವಾಗಿ ತಬ್ಬಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#WATCH | Prime Minister Narendra Modi meets Jana Sena chief Pawan Kalyan, actor and Padma Vibhushan awardee Konidela Chiranjeevi, Actor Rajinikanth, Actor-politician Nandamuri Balakrishna and other Union Ministers and TDP leaders at the swearing-in ceremony of Andhra Pradesh CM N… pic.twitter.com/sM5CtDvZTp
— ANI (@ANI) June 12, 2024
ಪ್ರಮಾಣ ವಚನ ಕಾರ್ಯಕ್ರಮ ಮುಗಿಸಿ ಹೊರಟ ನರೇಂದ್ರ ಮೋದಿ ವೇದಿಕೆಯಲ್ಲಿ ನಟ ರಜನಿಕಾಂತ್, ಬಾಲಯ್ಯ ಜೊತೆಯೂ ಆತ್ಮೀಯವಾಗಿ ಮಾತುಕತೆ ನಡೆಸಿದರು. ನರೇಂದ್ರ ಮೋದಿ, ಪವನ್ ಕಲ್ಯಾಣ್, ಚಿರಂಜೀವಿ, ರಜನಿಕಾಂತ್ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಉಂಟು ಮಾಡಿವೆ.
ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ 2024ರಲ್ಲಿ ಟಿಡಿಪಿ 135, ಜನಸೇನಾ ಪಕ್ಷ 21, ವೈಎಸ್‌ಆರ್‌ಸಿಪಿ 11, ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಗಳಿಸಿವೆ. ಚುನಾವಣೆಗೂ ಮೊದಲೇ
ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದ್ದವು.
ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಆಂಧ್ರ ಪ್ರದೇಶದಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೋಲಿಸಲು ಪಣ ತೊಟ್ಟಿದ್ದರು. ಆದ್ದರಿಂದ ಚುನಾವಣಾ ಪೂರ್ವ ಮೈತ್ರಿಮಾಡಿಕೊಂಡಿದ್ದರು. ಚುನಾವಣೆಯಲ್ಲಿ ಜನ ಬೆಂಬಲವೂ ಸಿಕ್ಕಿದ್ದು, ಸರ್ಕಾರ ರಚನೆಯಾಗಿದೆ.
27 ಸಚಿವರ ಜೊತೆ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅಧಿಕಾರವಹಿಸಿಕೊಂಡಿದ್ದಾರೆ. ಪವನ್ ಕಲ್ಯಾಣ್ ಸಹ ಸಂಪುಟ ಸೇರಿದ್ದು, ಉಪ ಮುಖ್ಯಮಂತ್ರಿಯಾಗಲಿದ್ದಾರೆಯೇ? ಕಾದು ನೋಡಬೇಕಿದೆ.
ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ 2024ರ ಜೊತೆ ಲೋಕಸಭೆ ಚುನಾವಣೆಯೂ ನಡೆದಿತ್ತು. ಟಿಡಿಪಿ ಪಕ್ಷ 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಯಲ್ಲಿ ಪ್ರಮುಖ ಪಕ್ಷವಾಗಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications