Breaking: ಕಾಶ್ಮೀರ: ಸರ್ಕಾರಿ ನಿವಾಸ ತೋರಿಯುವಂತೆ ಮೊಹಬೂಬಾ ಮುಫ್ತಿಗೆ ನೋಟಿಸ್
ಶ್ರೀನಗರ, ಅಕ್ಟೋಬರ್ 21: ಕಾಶ್ಮೀರದ ಫೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಸರ್ಕಾರಿ ಬಂಗಲೆ ತೊರೆಯುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ'ಗೆ ಸ್ಪಷ್ಟಪಡಿಸಿರುವ ಅವರು, 'ನಾನು ವಾಸವಾಗಿದ್ದ ಸರ್ಕಾರಿ ನಿವಾಸವನ್ನು ತೊರೆಯುವಂತೆ ನೋಟಿಸ್ ನೀಡಲಾಗಿದೆ' ಎಂದು ಹೇಳಿದ್ದಾರೆ.
ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿರುವ ಫೇರ್‌ವ್ಯೂ ನಿವಾಸವನ್ನು ತೊರೆಯಲು ಮುಫ್ತಿ ಅವರಿಗೆ ತಿಳಿಸಲಾಗಿದೆ.
ಬಿಜೆಪಿ ವಿರುದ್ಧ ಮುಫ್ತಿ ಅಸಮಾಧಾನ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಮೆಹಬೂಬಾ ಮುಫ್ತಿ ಟೀಕಿಸುತ್ತಲೇ ಬಂದಿದ್ದಾರೆ. 'ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟರೆ, ಅದು ಸ್ವಾತಂತ್ರ್ಯ ಹೋರಾಟಕ್ಕಿಂತ ದೊಡ್ಡದು' ಎಂಬ ಹೇಳಿಕೆ ನೀಡಿದ್ದರು.
ಕಾಶ್ಮೀರ ಪ್ರತ್ಯೇಕವಾದಿ ನಾಯಕ ಯಾಸಿನ್ ಭಟ್ಕಳ್‌ಗೆ ಜೈಲು ಶಿಕ್ಷಿ ವಿಧಿಸಿದ್ದನ್ನು ಮುಫ್ತಿ ಖಂಡಿಸಿದ್ದರು. ಕಾಶ್ಮೀರ್ ಫೈಲ್ಸ್‌ನಂತಹ ಚಿತ್ರದಿಂದ ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಲಿದೆ ಎಂದು ಹೇಳಿದ್ದರು. ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಫ್ತಿ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಶಂಕೆಗಳು ವ್ಯಕ್ತವಾಗಿದೆ.

ಮೆಹಬೂಬಾ ಮುಫ್ತಿ ಗೃಹ ಬಂಧನ
ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಕೆಲ ತಿಂಗಳ ಕಾಲ ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಆರ್ಟಿಕಲ್ 370 ರದ್ದಾದ ನಂತರ ಈ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿತ್ತು. ಕೇಂದ್ರ ಸರ್ಕಾರವು ನಮ್ಮ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ ಎಂದು ಮುಫ್ತಿ ಆರೋಪಿಸಿದ್ದರು.
ಪಂಡಿತರ ಹತ್ಯೆಗೆ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದಿದ್ದ ಮುಫ್ತಿ
ಕೆಲ ತಿಂಗಳಿಂದ ಕಾಶ್ಮೀರದಲ್ಲಿ ಪಂಡಿತರ ಹತ್ಯೆಗಳು ಹೆಚ್ಚಾಗುತ್ತಿವೆ. ಆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದ ಮುಫ್ತಿ, 'ಕಾಶ್ಮೀರದಲ್ಲಿ ಪಂಡಿತರ ಹತ್ಯೆಗಳು ಹೆಚ್ಚಾಗುತ್ತಿವೆ. ಇದಕ್ಕೆಲ್ಲ ಕೇಂದ್ರ ಸರ್ಕಾರದ ದುರುಳ ನೀತಿಗಳೇ ಕಾರಣ. ನಮ್ಮನ್ನು ಕಾಶ್ಮೀರಿ ಪಂಡಿತರ ಶತ್ರುಗಳೆಂದು ಬಿಂಬಿಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಗೃಹಬಂಧನದಲ್ಲಿ ಇರಿಸುವ ಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕಾಶ್ಮೀರಿ ಪಂಡಿತರ ಸಂಕಷ್ಟಗಳನ್ನು ಮುಚ್ಚಿಡಲು ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ' ಎಂದು ಆರೋಪಿಸಿದ್ದರು.












Click it and Unblock the Notifications