ಭಯೋತ್ಪಾದಕರ ಗುಂಡಿಗೆ ಕಾಶ್ಮೀರದಲ್ಲಿ ಪಿಡಿಪಿ ನಾಯಕ ಘನಿ ಬಲಿ
ಪುಲ್ವಾಮ ಜಿಲ್ಲಾ ಪಿಡಿಪಿ ಅಧ್ಯಕ್ಷರಾಗಿದ್ದ ಅಬ್ದುಲ್ ಘನಿ ದಾರ್ ರ ಮೇಲೆ ಪಿಂಗ್ಲನ್ ಪ್ರದೇಶದಲ್ಲಿ ಹಿಜ್ಬುಲ್ಲಾ ಮುಜಾಹಿದ್ದೀನ್ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಗಂಭೀರ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪುಲ್ವಾಮ (ಜಮ್ಮು ಮತ್ತು ಕಾಶ್ಮೀರ), ಏಪ್ರಿಲ್ 24: ದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಗೃಹ ಸಚಿವ ರಾಜನಾಥ್ ಸಿಂಗ್ 'ಕಾಶ್ಮೀರ ಸಂಘರ್ಷ'ಕ್ಕೆ ಕೊನೆ ಹಾಡಲು ಸೇರಿದ್ದ ಸಭೆ ಮುಗಿಯುತ್ತಿದ್ದಂತೆ ಅತ್ತ ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.
ಹಿಜ್ಬುಲ್ಲಾ ಮುಜಾಹಿದ್ದೀನ್ ಬಂಡುಕೋರರು ಪಿಡಿಪಿ ನಾಯಕ ಅಬ್ದುಲ್ ಘನಿಯನ್ನು ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದಾರೆ.

ಪುಲ್ವಾಮ ಜಿಲ್ಲಾ ಪಿಡಿಪಿ ಅಧ್ಯಕ್ಷರಾಗಿದ್ದ ಅಬ್ದುಲ್ ಘನಿ ದಾರ್ ರ ಮೇಲೆ ಪಿಂಗ್ಲನ್ ಪ್ರದೇಶದಲ್ಲಿ ಹಿಜ್ಬುಲ್ಲಾ ಮುಜಾಹಿದ್ದೀನ್ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅವರು ಶ್ರೀನಗರ ಕಡೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘನಿ ಎದೆಗೆ ಗುಂಡು ಹೊಕ್ಕಿದ್ದರಿಂದ ಅವರು ಸಾವನ್ನಪ್ಪಿದ್ದಾರೆ.












Click it and Unblock the Notifications