Jammu & Kashmir Exit Poll: ಅತಂತ್ರ ಫಲಿತಾಂಶ ನಿರೀಕ್ಷೆ; ಪಿಡಿಪಿ ಕಿಂಗ್ ಮೇಕರ್ ಆಗುವ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಬಾರಿ ಅತಂತ್ರ ಫಲಿತಾಂಶ ಬರಬಹುದು ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ. ಕಾಂಗ್ರೆಸ್-ಎನ್‌ಸಿ ಮೈತ್ರಿ ಕೂಟ ಹೆಚ್ಚಿನ ಸ್ಥಾನ ಗೆದ್ದರು, ಸರ್ಕಾರ ರಚನೆ ಮಾಡಲು ಬೇಕಾದ ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಕಡಿಮೆ ಇದ್ದು, ಪಿಡಿಪಿ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ. ಆದರೆ ಎಕ್ಸಿಟ್ ಪೋಲ್ ಅಂಕಿ ಅಂಶಗಳು ಕೆಲವೊಮ್ಮೆ ತಪ್ಪಾಗುವ ಸಾಧ್ಯತೆ ಕೂಡ ಇದ್ದು, ಕಾಂಗ್ರೆಸ್-ಎನ್‌ಸಿ ಸರಳ ಬಹುಮತ ಪಡೆದರೂ ಅಚ್ಚರಿ ಪಡಬೇಕಾಗಿಲ್ಲ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆನಯಲ್ಲಿ 90 ಸ್ಥಾನಗಳಲ್ಲಿದ್ದು, ಸರ್ಕಾರ ರಚನೆಗೆ 46 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ. ಆದರೆ ದೈನಿಕ್ ಭಾಸ್ಕರ್ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ 20-25 ಸ್ಥಾನಗಳನ್ನು ಪಡೆಯಲಿದ್ದು, ಕಾಂಗ್ರೆಸ್ ಮತ್ತು ಎಸ್‌ಪಿ ಮೈತ್ರಿಕೂಟ 35-40 ಸ್ಥಾನಗಳನ್ನು ಪಡೆಯಲಿದ್ದು, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) 4-7 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಇತರ ಪಕ್ಷಗಳು 12-16 ಸ್ಥಾನಗಳಲ್ಲಿ ಗೆಲ್ಲು ಸಾಧ್ಯತೆ ಇದೆ.

PDP s Potential Impact on Jammu and Kashmir Elections

ಪೀಪಲ್ಸ್ ಪಲ್ಸ್‌ನ ಎಕ್ಸಿಟ್ ಪೋಲ್‌ ಪ್ರಕಾರ ಬಿಜೆಪಿ 23-27, ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 46-50, ಪಿಡಿಪಿ 7-11 ಮತ್ತು ಇತರ ಪಕ್ಷಗಳು 4-6 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ. ಇಂಡಿಯಾ ಟುಡೇ-ಸಿ ವೋಟರ್ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿಗೆ 27-32, ಕಾಂಗ್ರೆಸ್ ಮತ್ತು ಎನ್‌ಸಿ 40-48, ಪಿಡಿಪಿ 6-12 ಮತ್ತು ಇತರ ಪಕ್ಷಗಳಿಗೆ 6-11 ಸ್ಥಾನಗಳು ಬರುವ ಸಾಧ್ಯತೆ ಇದೆ.

ಪ್ರಮುಖ ಚುನಾವಣೋತ್ತರ ಸಮೀಕ್ಷೆಗಳನ್ನು ಗಮನಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಒಂದು ವೇಳೆ ಯಾವುದೇ ಪಕ್ಷಗಳಿಗೂ ಸ್ಪಷ್ಟ ಬಹುಮತ ಸಿಗದೇ ಇದ್ದರೆ, ಪಿಡಿಪಿ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ.

ಪಿಡಿಪಿ ಬಹುತೇಕ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟಕ್ಕೆ ಬೆಂಬಲ ಕೊಡುವ ಸಾಧ್ಯತೆ ಇರುವುದರಿಂದ, ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿಕೂಟ ಸರ್ಕಾರ ರಚಿಸುವ ಸಾಧ್ಯತೆ ಇದೆ. ಒಂದು ವೇಳೆ ಬಿಜೆಪಿ ಏನಾದರೂ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಉಳಿದ ಶಾಸಕರನ್ನು ಸೆಳೆಯಲು ಪ್ರಯತ್ನಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+