ರೈಲ್ವೆ ಪ್ಲಾಟ್‌ಫಾರ್ಮ್, ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಕಡ್ಡಾಯ ನಿಯಮ ವಿಸ್ತರಣೆ
ಬೆಂಗಳೂರು, ಅಕ್ಟೋಬರ್ 07: ರೈಲ್ವೆ ಪ್ಲಾಟ್‌ಫಾರ್ಮ್ ಅಥವಾ ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು ಎಂಬ ನಿಯಮವನ್ನು 6 ತಿಂಂಗಳವರೆಗೆ ರೈಲ್ವೆ ಇಲಾಖೆ ವಿಸ್ತರಣೆ ಮಾಡಿದೆ.
ಒಂದೊಮ್ಮೆ ನಿಯಮಗಳನ್ನು ಉಲ್ಲಂಘಸಿದರೆ 500 ರೂ. ದಂಡ ತೆರಬೇಕಾಗುತ್ತದೆ ಎಂದು ಹೇಳಿದೆ. ರೈಲ್ವೆ ಪ್ಲಾಟ್ ಫಾರ್ಮ್ ಹಾಗೂ ರೈಲುಗಳಲ್ಲಿ ಸಂಚಾರ ಮಾಡುವಾಗ ಮಾಸ್ಕ್ ಹಾಕದಿದ್ದರೆ 500 ರೂ. ದಂಡ ವಿಧಿಸುವ ನಿಯಮ ಈಗಾಗಲೇ ರೈಲ್ವೆ ಇಲಾಖೆಯಿಂದ ನಿಯಮ ಜಾರಿಯಲ್ಲಿದ್ದು, ಮುಂದಿನ ಆರು ತಿಂಗಳ ಕಾಲ ಈ ಮಾನದಂಡ ಮುಂದುವರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 22,431 ಹೊಸ ಸೋಂಕಿತ ಪ್ರಕರಣ ದಾಖಲಾಗಿದ್ದು, 318 ಜನರು ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕಿನ (ಕೋವಿಡ್ -19) ವಿರುದ್ಧ ಕೇಂದ್ರ ಕೈಗೊಂಡ ತಡೆಗಟ್ಟುವ ಕ್ರಮಗಳಿಗೆ ಅನುಗುಣವಾಗಿ, ರೈಲುಗಳು ಮತ್ತು ನಿಲ್ದಾಣಗಳ ಆವರಣದಲ್ಲಿ ಫೇಸ್ ಮಾಸ್ಕ್ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಮಾಸ್ಕ್ ಧರಿಸದೇ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಓಡಾಡುವ ಜನರಿಗೆ 500 ರೂ. ದಂಡ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.
ಕಳೆದ ಏಪ್ರಿಲ್ ತಿಂಗಳಲ್ಲಿ ಕೇಂದ್ರ ರೈಲ್ವೆ ಇಲಾಖೆಯಿಂದ ಕೋವಿಡ್ ನಿಯಮ ಜಾರಿಯಾಗಿದ್ದ ಸಂದರ್ಭದಲ್ಲಿ ರೈಲ್ವೆ ಪ್ಲಾಟ್ ಫಾರ್ಮ್, ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಕಡ್ಡಾಯಗೊಳಿಸಿತ್ತು.
ಒಂದು ವೇಳೆ ಈ ನಿಯಮ ಪಾಲನೆ ಮಾಡುವಲ್ಲಿ ವಿಫಲಗೊಂಡರೆ ಅಂತವರಿಗೆ 500 ರೂ. ದಂಡ ವಿಧಿಸಲಾಗುವುದು ಎಂದು ಹೇಳಿತ್ತು. ಈ ನಿಯಮ ರೈಲ್ವೆ ಇಲಾಖೆಯಿಂದ ಮುಂದುವರಿಕೆಯಾಗಲಿದ್ದು, 2022ರ ಏಪ್ರಿಲ್ 17ರವರೆಗೆ ಜಾರಿಯಲ್ಲಿರಲಿದೆ. ಇದರ ಜೊತೆಗೆ ರೈಲ್ವೆ ಸ್ಟೇಷನ್ಗಳಲ್ಲಿ ಉಗುಳುವವರಿಗೆ 500 ರೂ ದಂಡ ವಿಧಿಸುವ ನಿಯಮ ಕೂಡ ಮುಂದುವರೆಯಲಿದೆ.
ಕೊರೊನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,94,312ಕ್ಕೆ ತಲುಪಿದ್ದು, 4,49,856ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,44,198ಕ್ಕೆ ತಲುಪಿದೆ. 2020ರ ಏಪ್ರಿಲ್ 16ರವರೆಗೆ ವಿಸ್ತರಿಸಲಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 29,639 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,32,00,258ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 11,41,642 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 57,53,94,042 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಮೆಟ್ರೋ ನಿಲ್ದಾಣ ಹಾಗೂ ರೈಲಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸುವರಿಗೆ 250 ರು. ದಂಡ ವಿಧಿಸಲಾಗುತ್ತದೆ. ನಿಯಮ ಉಲ್ಲಂಘಿಸುವರ ಮೇಲೆ ಕಣ್ಗಾವಲಿಸಲು ವಿಶೇಷ ತಂಡ ರಚನೆ ಮಾಡಲಾಗಿದ್ದು, ಕಳೆದ ಒಂದು ವಾರದಿಂದಲೂ ಪ್ರಯಾಣಿಕರ ಮೇಲೆ ನಮ್ಮ ಮೆಟ್ರೋ ದಂಡಾಸ್ತ್ರ ಪ್ರಯೋಗ ಮಾಡುತ್ತಿದೆ.
ಮೆಟ್ರೋದಲ್ಲಿ ಶೇ 100 ರಷ್ಟು ಪ್ರಯಾಣಿಕರಿಗೆ ಅನುಮತಿ ನೀಡಿದ ಬಳಿಕ ದಂಡ ಪ್ರಕ್ರಿಯೆ ಜಾರಿ ಮಾಡಲಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications