• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾರ್ಚ್ 1 ರಿಂದ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ: 60 ವರ್ಷ ಮೇಲ್ಪಟ್ಟವರಿಗೆ ಆದ್ಯತೆ

|

ನವದೆಹಲಿ,ಫೆಬ್ರವರಿ 24: ದೇಶದಲ್ಲಿ ಮಾರ್ಚ್ 1 ರಿಂದ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ.

ಈ ಕುರಿತು ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.ಸರ್ಕಾರದಿಂದ ನಡೆಸಲ್ಪಡುವ 10 ಸಾವಿರ ಕೇಂದ್ರಗಳು ಹಾಗೂ ಖಾಸಗಿಯ 20 ಸಾವಿರ ಕೇಂದ್ರಗಳಲ್ಲಿ ಕೊರೊನಾ ಲಸಿಕೆ ಲಭ್ಯವಿರಲಿದೆ.

ಕೊರೊನಾವೈರಸ್ ಹೆಚ್ಚುತ್ತಿರುವ 10 ರಾಜ್ಯಗಳಿಗೆ ಕೇಂದ್ರದ ತಜ್ಞರ ತಂಡಕೊರೊನಾವೈರಸ್ ಹೆಚ್ಚುತ್ತಿರುವ 10 ರಾಜ್ಯಗಳಿಗೆ ಕೇಂದ್ರದ ತಜ್ಞರ ತಂಡ

ಆದರೆ ಸರ್ಕಾರಿ ಕೇಂದ್ರಗಳಲ್ಲಿ ಲಸಿಕೆ ಉಚಿತವಾಗಿ ನೀಡಲಾಗುತ್ತಿದ್ದು, ಖಾಸಗಿ ಕೇಂದ್ರಗಳಲ್ಲಿ ಹಣ ಪಾವತಿಸಬೇಕಾಗುತ್ತದೆ, ಶುಲ್ಕವನ್ನು ಶೀಘ್ರವೇ ತಿಳಿಸಲಾಗುತ್ತದೆ ಎಂದಿದ್ದಾರೆ.

ಎರಡನೇ ಹಂತದ ಲಸಿಕಾ ವಿತರಣೆ ಕಾರ್ಯಕ್ರಮದಲ್ಲಿ ಅಂದಾಜು 27 ಕೋಟಿ ಮಂದಿಯನ್ನು ತಲುಪುವ ಗುರಿ ಹೊಂದಲಾಗಿದೆ.ಭಾರತೀಯ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ನ ಸಲಹೆಗಾರರಾದ ಡಾ. ಸುನೀತಾ ಗರ್ಗ್ ಮಾತನಾಡಿ, ರಾಷ್ಟ್ರೀಯ ಲಸಿಕೆ ವಿತರಣೆ ಕಾರ್ಯಕ್ರಮವು ಹೆಚ್ಚೆಚ್ಚು ಜನರನ್ನು ತಲುಪುವಂತಾಗಬೇಕು. ಆದರೆ ಮೊದಲು 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ದೊರೆಯಬೇಕು ಎಂದರು.

ಬಳಿಕ 50 ವರ್ಷ ಮೇಲ್ಪಟ್ಟವರು, ಬಳಿಕ ಅಸ್ವಸ್ಥರಾಗಿರುವವರು ಹೀಗೆ ಬೇರ್ಪಡಿಸಲಾಗುತ್ತದೆ. ದೀರ್ಘಕಾಲದ ಕಾಯಿಲೆಗಳನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಮಧುಮೇಹ, ಹೈಪರ್‌ಟೆನ್ಷನ್,ಪಾರ್ಶ್ವವಾಯು,ಕ್ಯಾನ್ಸರ್,ಉಸಿರಾಟದ ಸಮಸ್ಯೆ ಹೊಂದಿರುವವರಿಗೆ ಮೊದಲು ಲಸಿಕೆ ನೀಡಲಾಗುವುದು ಎಂದು ತಿಳಿಸಿದರು. ಭಾರತದಲ್ಲಿ ಕೊವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‌ಗೆ ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಅನುಮತಿ ನೀಡಲಾಗಿದೆ.

English summary
The second phase of the coronavirus vaccination drive will begin March 1, with priority given to people aged sixty and above, and those over 45 but with co-morbidities, Union Minister Prakash Javadekar said Wednesday afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X