ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ಕೊರೊನಾ ಲಸಿಕೆ ಪಡೆಯಬಹುದು

|
Google Oneindia Kannada News

ನವದೆಹಲಿ, ಮಾರ್ಚ್ 04: ಕೊರೊನಾ ಲಸಿಕೆ ಪಡೆಯಲು ಇದ್ದ ಸಮಯ ಮಿತಿಯನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ದಿನದ 24 ಗಂಟೆಯೂ ಕೊರೊನಾ ಲಸಿಕೆ ನೀಡಲು ಆಸ್ಪತ್ರೆಗಳಿಗೆ ಅವಕಾಶ ಮಾಡಿಕೊಟ್ಟಿದೆ.

ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಿಸಲು ಇದುವರೆಗೆ ಇದ್ದ ಸಮಯ ಮಿತಿಯನ್ನು ತೆಗೆದು ಹಾಕಲಾಗಿದೆ. ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ಜನರು ಬಂದು ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಹರ್ಷವರ್ಧನ್ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ 1.54 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ಭಾರತದಲ್ಲಿ 1.54 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ಸಾರ್ವಜನಿಕರು ಇನ್ನು ಮುಂದೆ ತಮ್ಮ ಅನುಕೂಲದ ಸಮಯದಲ್ಲಿ ಲಸಿಕೆ ಹಾಕಿಸಿಕೊಳ್ಳಬಹುದು. ಪ್ರಧಾನಿ ಮೋದಿಯವರು ಜನರ ಆರೋಗ್ಯ ಮತ್ತು ಸಮಯಕ್ಕೆ ಬೆಲೆ ನೀಡುತ್ತಾರೆ ಎಂದಿದ್ದಾರೆ.

ಮಾರ್ಚ್ 03 ರಂದು ಕೊರೊನಾ ಲಸಿಕೆ ಹಾಕಿಸಿಕೊಂಡವರು

ಮಾರ್ಚ್ 03 ರಂದು ಕೊರೊನಾ ಲಸಿಕೆ ಹಾಕಿಸಿಕೊಂಡವರು

ಈ ಮಧ್ಯೆ ಬುಧವಾರ ದೇಶದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಕ್ರಿಕೆಟಿಗ ಕಪಿಲ್ ದೇವ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಅವರ ಪತ್ನಿ, ಸಿಕ್ಕಿಂ ಗವರ್ನರ್ ಗಂಗಾ ಪ್ರಸಾದ್ ದಂಪತಿ ಸೇರಿದಂತೆ ಹಲವು ಪ್ರಮುಖರು ಲಸಿಕೆ ಹಾಕಿಸಿಕೊಂಡಿದ್ದಾರೆ.

ಕಾಲಮಿತಿ ರದ್ದು

ಕಾಲಮಿತಿ ರದ್ದು

ಸದ್ಯ, ಸರ್ಕಾರಿ, ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಲಸಿಕೆ ನೀಡಲಾಗುತ್ತಿದೆ. ಈ ಕಾಲಮಿತಿಯನ್ನು ಈಗ ರದ್ದುಪಡಿಸಲಾಗಿದೆ. ಜನರು ಈಗ 24 ಗಂಟೆಯಲ್ಲಿ ಯಾವಾಗ ಬೇಕಾದರೂ ತಮ್ಮ ಅನುಕೂಲಕ್ಕೆ ತಕ್ಕಂತೆ ಲಸಿಕೆ ಪಡೆಯಬಹುದಾಗಿದೆ.

ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಶೇ.81ರಷ್ಟು ಪರಿಣಾಮಕಾರಿಕೋವ್ಯಾಕ್ಸಿನ್ ಕೊರೊನಾ ಲಸಿಕೆ ಶೇ.81ರಷ್ಟು ಪರಿಣಾಮಕಾರಿ

15 ದಿನಕ್ಕೊಮ್ಮೆ ಪರೀಕ್ಷೆ

15 ದಿನಕ್ಕೊಮ್ಮೆ ಪರೀಕ್ಷೆ

ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಓಡಾಟ ಹೆಚ್ಚಿರುವ ಕಚೇರಿ, ಹೋಟೆಲ್‌ನಂತಹ ಮುಚ್ಚಿದ ಪ್ರದೇಶಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪ್ರತಿ 15 ದಿನಕ್ಕೊಮ್ಮೆ ಪರೀಕ್ಷೆ ನಡೆಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ.

ಸ್ವದೇಶಿ ಕೋವ್ಯಾಕ್ಸಿನ್ ಲಸಿಕೆ ಶೇ.81ರಷ್ಟು ಪರಿಣಾಮಕಾರಿ

ಸ್ವದೇಶಿ ಕೋವ್ಯಾಕ್ಸಿನ್ ಲಸಿಕೆ ಶೇ.81ರಷ್ಟು ಪರಿಣಾಮಕಾರಿ

ಹೈದರಾಬಾದ್‌ನ ಭಾರತ್ ಬಯೋಟೆಕ್ ಸಂಸ್ಥೆ ಕೇಂದ್ರ ಸರ್ಕಾರದ ಜತೆಗೂಡಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆ ಶೇ.81ರಷ್ಟು ಪರಿಣಾಮಕಾರಿ ಎಂಬುದು ಮೂರನೇ ಹಂತದ ಪ್ರಯೋಗದಲ್ಲಿ ಕಂಡು ಬಂದಿದೆ.

ವಿಶೇಷವೆಂದರೆ, ಬ್ರಿಟನ್‌ನ ಆಕ್ಸ್‌ಫರ್ಡ್ ವಿವಿಯ ಲಸಿಕೆ ಕೋವಿಶೀಲ್ಡ್ ಗಿಂತ ಸ್ವದೇಶಿ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿದೆ.

English summary
The government has lifted the time restriction on receiving Covid-19 vaccine jabs so as to increase the pace of immunisation, Union Health Minister Harsh Vardhan said on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X