TV9 Exit Poll Result 2024: ಐದು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್
ದೇಶದಲ್ಲಿ 18ನೇ ಲೋಕಸಭಾ ಚುನಾವಣೆಗಳು ಮುಗಿದಿವೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಇದಕ್ಕೂ ಮೊದಲು ಹಲವು ಸಮೀಕ್ಷೆಗಳು ತಮ್ಮ ವರದಿಯನ್ನು ಬಹಿರಂಗ ಪಡಿಸಿವೆ. ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ತಿಳಿಸಿದೆ.
ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಸುಲಭವಾಗಿ ಮ್ಯಾಜಿಕ್ ನಂಬರ್ ದಾಟುತ್ತದೆ ಎಂದು ಪೀಪಲ್ ಇನ್‌ಸೈಟ್ಸ್, ಪೋಲ್‌ಸ್ಟಾರ್ಟ್ ಹಾಗೂ ಟಿವಿ9 ಸಮೀಕ್ಷೆ ತಿಳಿಸಿದೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿ ಕೂಟ 340 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಸಮೀಕ್ಷೆ ತಿಳಿಸಿದೆ. ಇನ್ನು ಬಿಜೆಪಿ 305 ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೆ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ಕ್ರಮವಾಗಿ 65, 167 ಸ್ಥಾನ ಪಡೆಯಬಹುದು ಎಂದು ತಿಳಿಸಿದೆ.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಸಫಲವಾಗಿದ್ದ ಕಾಂಗ್ರೆಸ್ ಈ ಬಾರಿ ಮುಖಭಂಗ ಅನುಭವಿಸುವ ಸಾಧ್ಯತೆ ಇದೆ. ಕಳೆದ ಬಾರಿಯ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿ . ಪೀಪಲ್ ಇನ್‌ಸೈಟ್ಸ್, ಪೋಲ್‌ಸ್ಟಾರ್ಟ್ ಹಾಗೂ ಟಿವಿ9 ಸಮೀಕ್ಷೆಯಲ್ಲಿ ಕ್ಲೀನ್ ಸ್ವೀಪ್ ಮಾಡುವುದಾಗಿ ತಿಳಿಸಿದೆ.
ಇನ್ನು ನಿರೀಕ್ಷೆಯಂತೆ ಗುಜರಾತ್‌ನಲ್ಲಿ ಬಿಜೆಪಿ ಈ ಬಾರಿ ಎನ್‌ಡಿಎ ಮೈತ್ರಿ ಕೂಟ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸವನ್ನು ಟಿವಿ9 ಸಮಿಕ್ಷೆ ವ್ಯಕ್ತಪಡಿಸಿದೆ. ಈ ಸಮೀಕ್ಷೆಯಲ್ಲಿ ಛತ್ತೀಸ್‌ಗಢ್ ಸಹ ಎಲ್ಲ 11 ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಸಮೀಕ್ಷೆ ತಿಳಿಸಿದೆ. ಅಲ್ಲದೆ ಉತ್ತರಾಖಂಡ 5, ದೆಹಲಿ 7 ಸ್ಥಾನಗಳನ್ನು ಸಹ ಬಿಜೆಪಿ ಗೆಲ್ಲಬಹುದು ಎಂದು ಹೇಳಿದೆ.












Click it and Unblock the Notifications