Jammu And Kashmir Elections: ಜಮ್ಮು-ಕಾಶ್ಮೀರದಲ್ಲಿ ಬುಲೆಟ್ ಬಿಟ್ಟು ಅಭಿವೃದ್ಧಿಯತ್ತ ಜನರ ಒಲವು: ಜೆಪಿ ನಡ್ಡಾ
ನವದೆಗಲಿ, ಸೆಪ್ಟೆಂಬರ್ 27: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ಮತ್ತು ಯಾವುದೇ ಹಿಂಸಾಚಾರವಿಲ್ಲದೆ ನಡೆಯುತ್ತಿದೆ. ಕೇಂದ್ರಾಡಳಿತ ಪ್ರದೇಶದ ಜನರು ಬುಲೆಟ್‌ಗಳನ್ನು ತಿರಸ್ಕರಿಸಿ, ಅಭಿವೃದ್ಧಿಯತ್ತ ಗಮನಹರಿಸಿದ್ದಾರೆ ಎಂದು ಜೆ ಪಿ ನಡ್ಡಾ ಹೇಳಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ ಅವರು, ಕಾಶ್ಮೀರದ ಯುವಕರು ರಾಷ್ಟ್ರೀಯ ಮುಖ್ಯವಾಹಿನಿಗೆ ಸೇರಿಕೊಂಡಿದ್ದಾರೆ ಮತ್ತು ಭಯೋತ್ಪಾದನೆ, ಹಿಂಸಾಚಾರವನ್ನು ತಿರಸ್ಕರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನರು ಬುಲೆಟ್‌ಗಳನ್ನು ತಿರಸ್ಕರಿಸಿ ಮತದಾನದ ಹಾದಿಯನ್ನು ಆರಿಸಿಕೊಂಡ ಐತಿಹಾಸಿಕ ಸಂದರ್ಭ ಇದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಬಿಜೆಪಿ ಅಧ್ಯಕ್ಷರಾದ ಜೆ ಪಿ ನಡ್ಡಾ ಹೇಳಿದ್ದಾರೆ.

ಇನ್ನೂ ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಹಂತದ ಚುನಾವಣೆ ನಡೆದಿದ್ದು, ಅಕ್ಟೋಬರ್ 1 ರಂದು ಮೂರನೇ ಹಂತದ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಜಮ್ಮುವಿಗೆ ಆಗಮಿಸಿದ ನಡ್ಡಾ, ಮೊದಲ ಎರಡು ಹಂತ ಮತದಾನ ಶಾಂತಿಯುತವಾಗಿ ನಡೆಯಿತು, ಹಿಂದಿನ ಚುನಾವಣೆಗಳಿಗಿಂತ ಭಿನ್ನವಾಗಿ ಯಾವುದೇ ಹಿಂಸಾಚಾರ, ಗುಂಡಿನ ದಾಳಿ, ಭಯೋತ್ಪಾದಕ ದಾಳಿ ನಡೆದಿಲ್ಲ. ಈ ಚುನಾವಣೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಅಭಿವೃದ್ಧಿಯ ಜಯ ಎಂದು ಬಣ್ಣಿಸಿದರು.
ಮೊದಲ ಎರಡು ಹಂತದ ಮತದಾನವು ಜಮ್ಮು ಮತ್ತು ಕಾಶ್ಮೀರದ ಜನರು ಶಾಂತಿ, ಸ್ಥಿರತೆ ಮತ್ತು ಅಭಿವೃದ್ಧಿಯನ್ನು ಬಯಸುತ್ತಾರೆ ಎಂಬುದನ್ನು ತೋರಿಸಿದೆ. ಈ ರೀತಿಯಾಗಿ ನಾವು ಈ ಚುನಾವಣೆಯನ್ನು ನೋಡುತ್ತಿದ್ದೇವೆ. ಕೇಂದ್ರಾಡಳಿತ ಪ್ರದೇಶದ ಯುವಕರು ರಾಷ್ಟ್ರೀಯ ಮುಖ್ಯವಾಹಿನಿಗೆ ಸೇರುವ ಇಚ್ಛೆಗಾಗಿ ಶ್ಲಾಘಿಸಿದ ನಡ್ಡಾ ಅವರು, ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದ್ದಾರೆ. ಜನರು ಸಹ ಅಭಿವೃದ್ಧಿಯ ಪರವಾಗಿ ಮತ ಹಾಕಿದ್ದಾರೆ ಎಂದು ಹೇಳಿದರು.
ಕಾಶ್ಮೀರದ ಯುವಕರು ಭಯೋತ್ಪಾದನೆಯನ್ನು ತಿರಸ್ಕರಿಸಿ, ರಾಷ್ಟ್ರೀಯ ಮುಖ್ಯವಾಹಿನಿಗೆ ಸೇರಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ "ಹಿಂಸಾಚಾರ ಮತ್ತು ರಕ್ತಪಾತದ ಯುಗವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ), ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಪಕ್ಷಗಳು ಭಾರತ ವಿರೋಧಿ ಅಂಶಗಳನ್ನು ಬೆಂಬಲಿಸುತ್ತಿವೆ ಎಂದು ಆರೋಪಿಸಿದರು.
ದೇಶದ ವಿರುದ್ಧ ಕೆಲಸ ಮಾಡುವ ಕಾರ್ಯಕರ್ತರನ್ನು ಅವರು ಬೆಂಬಲಿಸುತ್ತಿದ್ದಾರೆ. ಎನ್‌ಸಿಯ ಪ್ರಣಾಳಿಕೆಯಲ್ಲಿ ಭಯೋತ್ಪಾದಕರನ್ನು ಬಿಡುಗಡೆ ಮಾಡುವುದಾಗಿ (ಜೈಲಿನಿಂದ), ಗಡಿಯಾಚೆಗಿನ ವ್ಯಾಪಾರವನ್ನು ಪುನರಾರಂಭಿಸುವುದಾಗಿ ಮತ್ತು ಪಾಕಿಸ್ತಾನದೊಂದಿಗೆ ಮಾತುಕತೆಗಳನ್ನು ಪುನರಾರಂಭಿಸುವುದಾಗಿ ಉಲ್ಲೇಖಿಸಲಾಗಿದೆ. ಈ ರೀತಿ ಎನ್‌ಸಿ ವಿರೋಧಿ ಬೆಂಬಲವನ್ನು ನೀಡುತ್ತಿದೆ ಎಂದು ಜೆ ಪಿ ನಡ್ಡಾ ಅವರು ಆರೋಪಿಸಿದರು.
ಜಮ್ಮು ಮತ್ತು ಕಾಶ್ಮೀರ ಚುನಾವಣೆಗೆ ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟವನ್ನು ಟೀಕಿಸಿದ ಅವರು, ಎರಡು ಪಕ್ಷಗಳು ರಾಜಕೀಯ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದರು. ವಿಧಾನಸಭೆ ಚುನಾವಣೆಯ ಮೇಲ್ವಿಚಾರಣೆಗಾಗಿ ವಿವಿಧ ದೇಶಗಳ ಮಿಷನ್‌ಗಳ ಮುಖ್ಯಸ್ಥರ ಭೇಟಿಯನ್ನು ಉಲ್ಲೇಖಿಸಿದ ನಡ್ಡಾ, 16 ದೇಶಗಳ ಮಿಷನ್‌ಗಳ ಮುಖ್ಯಸ್ಥರು ಚುನಾವಣೆಯನ್ನು ವೀಕ್ಷಿಸಲು ಕಾಶ್ಮೀರಕ್ಕೆ ಭೇಟಿ ನೀಡಿದರು. ಚುನಾವಣೆ ಶಾಂತಿಯುತವಾಗಿ ನಡೆದಿದೆ. ಇದೊಂದು ಐತಿಹಾಸಿಕ ಸಂದರ್ಭ. ಜನರು ಬುಲೆಟ್‌ಗಳನ್ನು ತಿರಸ್ಕರಿಸಿದ್ದಾರೆ ಮತ್ತು ಮತಪತ್ರಗಳನ್ನು ಆಯ್ಕೆ ಮಾಡಿದ್ದಾರೆ. ಶಾಂತಿ, ಅಭಿವೃದ್ಧಿ ಮತ್ತು ಪ್ರಗತಿಗೆ ಮತ ಹಾಕಿದ್ದಾರೆ ಎಂದು ಅವರು ಹೇಳಿದರು.












Click it and Unblock the Notifications