ಕತುವಾ ಪ್ರಕರಣ ಸಿಬಿಐಗೆ ಒಪ್ಪಿಸಿ: ಕಾಶ್ಮೀರದಲ್ಲಿ ಭುಗಿಲೆದ್ದ ಪ್ರತಿಭಟನೆ

ಕತುವಾ, ಏಪ್ರಿಲ್ 30: ಕತುವಾ ಅತ್ಯಾಚಾರ ಮತ್ತು ಕೊಲೆಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿ ಜಮ್ಮು-ಕಾಶ್ಮಿರದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭವಾಗಿದೆ. ಇಲ್ಲಿನ ಬುಧಿ, ಬರ್ನೋಟಿ, ನಾನನ್, ಪಂಧ್ರಾದ್ ಮತ್ತು ತಾನೂನ್ ಹಳ್ಳಿಗಳಲ್ಲಿ ನಿನ್ನೆ(ಏ.29) ಬೃಹತ್ ಪ್ರತಿಭಟನೆ ನಡೆದಿದೆ.

ಈ ಪ್ರಕರಣದ ನಿಜವಾದ ಆರೊಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಕೋರಿ ಜಮ್ಮು-ಕಾಶ್ಮೀರದ ಪ್ರಭಾವಿ ವ್ಯಕ್ತಿಗಳೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಾತ್ರವಲ್ಲ, ಲಿಂಗ ಅಲ್ಪಸಂಖ್ಯಾತರು ಸಹ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಿದ್ದು ವಿಶೇಷ.

ಜಮ್ಮು-ಕಾಶ್ಮೀರದ ಕತುವಾ ಎಂಬಲ್ಲಿ ಜನವರಿಯಲ್ಲಿ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಗೆ ಮತ್ತು ಬರುವ ಔಷಧ ನೀಡಿ, ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

People protest in Jammu, demand CBI inquiry in Kathua rape case

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 7 ರವರೆಗೆ ತಡೆಹಿಡಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+