ಮಧ್ಯಪ್ರದೇಶ ಚುನಾವಣೆ 2023; ಬಹುಮತ ಹೊಸ್ತಿಲಲ್ಲಿ ಎಡವಿದ ಬಿಜೆಪಿ!
ಭೋಪಾಲ್, ನವೆಂಬರ್ 30: ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಹೊಸ್ತಿಲಲ್ಲಿ ಎಡವಿ ಬೀಳಲಿದೆ. ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎಂದು Peoples Pulse ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ.
ಮಧ್ಯಪ್ರದೇಶ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 230. ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116. ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು.

ಗುರುವಾರ ಸಂಜೆ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟವಾಗಿವೆ. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ. 2024ರ ಲೋಕಸಭಾ ಚುನಾವಣೆಗೂ ಮೊದಲು ನಡೆಯುತ್ತಿರುವ ಚುನಾವಣೆಯ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
Peoples Pulse ನಡೆಸಿದ ಚುನಾವಣೋತ್ತರ ಸಮೀಕ್ಷೆ ರಾಜ್ಯದಲ್ಲಿ ಬಿಜೆಪಿ 91-113 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ. ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116. ಆದರೆ ಸರಳ ಬಹುಮತಕ್ಕೆ ಬಿಜೆಪಿಗೆ ಕೆಲವು ಸ್ಥಾನ ಕಡಿಮೆ ಇದೆ.
ಮಧ್ಯಪ್ರದೇಶ ರಾಜ್ಯದಲ್ಲಿ ಬಿಜೆಪಿ 91-113, ಕಾಂಗ್ರೆಸ್ 117-139, ಇತರರು 8 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಅಂದಾಜಿಸಿದೆ. ಬಿಜೆಪಿಗೆ ಸರಳ ಬಹುಮತಕ್ಕೆ ಮೂರು ಸ್ಥಾನದ ಕೊರತೆ ಉಂಟಾಗಲಿದೆ.
ಮಧ್ಯಪ್ರದೇಶ ರಾಜ್ಯದಲ್ಲಿ 2018ರ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. ಎಸ್ಪಿ, ಬಿಎಸ್‌ಪಿ ಜೊತೆ ಸೇರಿ ಪಕ್ಷ ಸರ್ಕಾರ ರಚನೆ ಮಾಡಿತ್ತು. ಆದರೆ 2020ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಿದ್ದರು.
ಆಗ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾಗಿದ್ದರು. ಈ ಬಾರಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದವು. ಆದರೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ.
ಮಧ್ಯಪ್ರದೇಶ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 230. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಬಿಜೆಪಿ ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆ ಎದುರಿಸಿದೆ. ಚುನಾವಣೋತ್ತರ ಸಮೀಕ್ಷೆಯಂತೆ ಕಾಂಗ್ರೆಸ್‌ಗೆ ಬಹುಮತ ಸಿಕ್ಕಿದರೆ ಮುಖ್ಯಮಂತ್ರಿ ಯಾರು? ಕಾದು ನೋಡಬೇಕಿದೆ.












Click it and Unblock the Notifications