ಭಾರತ್ ಬಂದ್‌ಗೆ ಕಿಮ್ಮತ್ತಿಲ್ಲ: ಮಂಗಳವಾರವೂ ತೈಲ ಬೆಲೆ ಏರಿಕೆ

Recommended Video

      Bharat Bandh : ಭಾರತ್ ಬಂದ್‌ಗೆ ಕಿಮ್ಮತ್ತಿಲ್ಲ: ಮತ್ತೆ ಏರಿಕೆಯಾಯ್ತು ತೈಲ ಬೆಲೆ | Oneindia Kannada

      ನವದೆಹಲಿ, ಸೆಪ್ಟೆಂಬರ್ 11: ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಸೋಮವಾರ ದೇಶದಾದ್ಯಂತ ಬಂದ್, ಪ್ರತಿಭಟನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮಂಗಳವಾರವೂ ಏರಿಕೆಯಾಗಿದೆ.

      ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 80.87 ರೂ. ಮುಟ್ಟಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 72.97 ರೂ. ತಲುಪಿದೆ.

      ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎರಡೂ 14 ಪೈಸೆಗಳಷ್ಟು ಹೆಚ್ಚಳವಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ 88.26 ಮತ್ತು 77.47 ರೂ.ಗೆ ಮುಟ್ಟಿದೆ.

      petrol and diesel price continue to hike on Tuesday

      ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಬದಲಾವಣೆಯಾಗುತ್ತಿದ್ದು, ದೇಶದಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಅಲ್ಲದೆ, ಡಾಲರ್ ಎದುರು ರೂಪಾಯಿ ಮೌಲ್ಯ ತೀವ್ರವಾಗಿ ಕುಸಿಯುತ್ತಿರುವುದರಿಂದ ಭಾರತ ಮತ್ತು ಅನೇಕ ದೇಶಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ.

      ತೈಲ ಬೆಲೆ ಏರಿಕೆ ಖಂಡಿಸಿ ಸೋಮವಾರ ಭಾರತ್ ಬಂದ್ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಇಂಧನ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಕಡಿತಗೊಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+