ಸೋಮವಾರವೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ, ಮಾರ್ಚ್ 28; ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸೋಮವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಿವೆ. ಒಂದು ವಾರದಲ್ಲಿ 6ನೇ ಬಾರಿಗೆ ತೈಲ ದರ ಏರಿಕೆಯಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸೋಮವಾರ ಪೆಟ್ರೋಲ್ ದರ ಲೀಟರ್‌ಗೆ 30 ಪೈಸೆ ಮತ್ತು ಡೀಸೆಲ್ ದರ ಲೀಟರ್‌ಗೆ 35 ಪೈಸೆ ಏರಿಕೆಯಾಗಿದೆ. ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್‌ಗೆ 50 ಪೈಸೆ ಏರಿಕೆ ಕಂಡಿತ್ತು.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 99.41 ರೂ. ಆಗಿದೆ. ಡಿಸೇಲ್ ದರ ಪ್ರತಿ ಲೀಟರ್‌ಗೆ 90.77 ರೂ. ಆಗಿದೆ.

petrol

ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 31 ಪೈಸೆ ಏರಿಕೆಯಾಗಿದ್ದು, ಲೀಟರ್‌ಗೆ 114.19 ರೂ. ದರವಿದೆ. ಡೀಸೆಲ್ ದರ 37 ಪೈಸೆ ಏರಿಕೆ ಕಂಡಿದ್ದು, ಲೀಟರ್‌ಗೆ 98.50 ರೂ. ಇದೆ.

ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 28 ಪೈಸೆ ಏರಿಕೆ ಕಂಡಿದೆ. ಈಗ ಪೆಟ್ರೋಲ್‌ ದರ 105.18 ರೂ. ಆಗಿದೆ. ಲೀಟರ್ ಡಿಸೇಲ್ ದರ 33 ಪೈಸೆ ಏರಿಕೆಯಾಗಿದ್ದು, ದರ 95. 33 ರೂ.ಗೆ ಏರಿಕೆ ಕಂಡಿದೆ.

ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ಸೋಮವಾರ ಪ್ರತಿ ಲೀಟರ್ ಪೆಟ್ರೋಲ್ ದರ 32 ಪೈಸೆ ಏರಿಕೆ ಕಂಡಿದೆ. ಇದರಿಂದಾಗಿ ದರ 108.85 ಲೀಟರ್‌ ಆಗಿದೆ. ಡೀಸೆಲ್ ದರ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದ್ದು ಲೀಟರ್ ದರ 93.92 ರೂ. ಆಗಿದೆ.

ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.46 ರೂ. ಆಗಿದೆ. ಡೀಸೆಲ್ ದರ 88.67 ರೂ.ಗೆ ಏರಿಕೆ ಕಂಡಿದೆ. ಕರ್ನಾಟಕ ಎಲ್ಲಾ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್ ದರ 104 ರಿಂದ 105 ರೂ. ಆಗಿದೆ. ಲೀಟರ್‌ಗೆ 88 ರಿಂದ 89 ರೂ. ಆಗಿದೆ.

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರಗಳಲ್ಲಿ ಏರಿಕೆಯಾಗಿದೆ. ಸ್ಥಳೀಯ ರಾಜ್ಯಗಳ ತೆರಿಗೆಯ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ತೈಲ ಉತ್ಪನ್ನಗಳ ದರಗಳಲ್ಲಿ ಬದಲಾವಣೆ ಆಗುತ್ತದೆ. ಸುಮಾರು ನಾಲ್ಕೂವರೆ ತಿಂಗಳ ಬಳಿಕ ಮಾರ್ಚ್ 22ರಂದು ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿತ್ತು. ಬಳಿಕ 6 ಬಾರಿ ದರದಲ್ಲಿ ಏರಿಕೆಯಾಗಿದೆ.

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಅಂದರೆ ನವೆಂಬರ್ 4ರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರಲಿಲ್ಲ. ಮಾರ್ಚ್ 10ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು.

ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಪೆಟ್ರೋಲ್, ಡೀಸೆಲ್ ದರಗಳ ಏರಿಕೆಯನ್ನು ನಿರೀಕ್ಷೆ ಮಾಡಲಾಗಿತ್ತು. ಮತ್ತೊಂದು ಕಡೆ ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಪರಿಣಾಮದಿಂದಲೂ ಬೆಲೆಗಳಲ್ಲಿ ಏರಿಕೆಯಾಗುತ್ತಿದೆ.

Recommended Video

      ಎಚ್ಚೆತ್ತುಕೊಂಡ ಡಿಕೆಶಿ,ತಗ್ಲಾಕೊಂಡ ಸಿದ್ದರಾಮಯ್ಯ: ಸಿದ್ದು ಕೈ ಬಿಟ್ಟ ಕಾಂಗ್ರೆಸ್ | Oneindia Kannada

      ಭಾರತ ಶೇ 85ರಷ್ಟು ತೈಲ ಆಮದಿನ ಮೇಲೆ ಅವಲಂಬಿತವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದಾಗ ಅನಿವಾರ್ಯವಾಗಿ ದೇಶದಲ್ಲಿಯೂ ತೈಲ ಉತ್ಪನ್ನಗಳ ಬೆಲೆಗಳಲ್ಲಿ ಏರಿಕೆಯಾಗುತ್ತದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+