ತೈಲ ಬೆಲೆ ಏರಿಕೆಯ ಬಿಸಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ

Written By:
Subscribe to Oneindia Kannada

ನವದೆಹಲಿ, ಡಿ 16 : ಶುಕ್ರವಾರ (ಡಿ 16) ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ತೈಲೋತ್ಪನ್ನಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ತುಟ್ಟಿಯಾಗಲಿವೆ.

ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಗೆ ರೂ. 2.21 ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್ ಗೆ ರೂ. 1.79 ಏರಿಕೆ ಮಾಡಿ ಪೆಟ್ರೋಲಿಯಂ ಸಚಿವಾಲಯ ಆದೇಶ ಹೊರಡಿಸಿದೆ.

Petrol Price Hiked By Rs 2.21 A Litre, Diesel By Rs 1.79 A Litre

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡಲಾಗಿದೆ ಸಚಿವಾಲಯ ಸ್ಪಷ್ಟನೆ ನೀಡಿದೆ.

ಕಳೆದ ನವೆಂಬರ್ 30ರಂದು ಪೆಟ್ರೋಲ್ ಬೆಲೆಯಲ್ಲಿ 13 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 12 ಪೈಸೆ ಇಳಿಕೆಯಾಗಿತ್ತು.

ರೂಪಾಯಿ - ಡಾಲರ್ ಬೆಲೆಯಲ್ಲಿ ದಿನದಿಂದ ದಿನಕ್ಕೆ ವ್ಯತ್ಯಯ ಉಂಟಾಗುತ್ತಿರುವುದರಿಂದ ಬೆಲೆ ಏರಿಕೆ ಅನಿವಾರ್ಯವಾಗಿತ್ತು ಎಂದು ಐಓಸಿ (ಇಂಡಿಯನ್ ಆಯಿಲ್ ಕಾರ್ಪೋರೇಶನ್) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Petrol price was on Friday (Dec 16) hiked by Rs 2.21 per litre and diesel rate was raised by Rs 1.79 per litre following surge in crude oil price in international market.
Please Wait while comments are loading...