ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ

Posted By:
Subscribe to Oneindia Kannada

ನವದೆಹಲಿ, ಡಿಸೆಂಬರ್ 15: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗಿರುವುದರಿಂದ ಭಾರತದಲ್ಲಿ ತೈಲ ಕಂಪನಿಗಳು ಗುರುವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡುವ ಸಾಧ್ಯತೆಗಳಿವೆ. ಡಿಸೆಂಬರ್ 15ರಂದು ಸಭೆ ನಡೆಸಿದ ನಂತರ ಏರಿಕೆ ಘೋಷಿಸುವ ಸಾಧ್ಯತೆಗಳಿವೆ.

ಪ್ರತಿ ತಿಂಗಳ 15 ಮತ್ತು 30/31ರಂದು ತೈಲ ಕಂಪನಿಗಳು ಬೆಲೆ ಏರಿಕೆ-ಇಳಿಕೆಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯ ಬೆಲೆ ಅನುಸಾರವಾಗಿ ಮಾಡುತ್ತವೆ. ಇದರಲ್ಲಿ ಅಮೆರಿಕಾದ ಡಾಲರ್ ವಿರುದ್ಧ ರುಪಾಯಿ ಮೌಲ್ಯ ಎಷ್ಟಿದೆ ಎಂಬ ಅಂಶ ಕೂಡ ಮುಖ್ಯ ಪಾತ್ರ ವಹಿಸುತ್ತದೆ.

Petrol, diesel prices likely to be hiked

ಡಾಲರ್ ವಿರುದ್ಧ ಭಾರತದ ರುಪಾಯಿ ಮೌಲ್ಯ 67 ತಲುಪಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 55 ಅಮೆರಿಕನ್ ಡಾಲರ್ ಇದೆ. ಆದ್ದರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುವ ಎಲ್ಲ ಸಾಧ್ಯತೆಗಳು ಗೋಚರಿಸುತ್ತಿವೆ. ಕ್ರಿಸಿಲ್ ನ ಪ್ರಕಾರ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಪೆಟ್ರೋಲ್ ಬೆಲೆ ಶೇ 5ರಿಂದ 8ರಷ್ಟು, ಡೀಸೆಲ್ ಶೇ 6ರಿಂದ 8ರಷ್ಟು ಏರಿಕೆ ಸಾಧ್ಯತೆ ಇದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
With oil prices at the international market hitting $55 a barrel, oil companies in India are likely to hike the prices of petrol and diesel on Thursday.
Please Wait while comments are loading...