• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾರ್ಚ್ 19ರಂದು ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

|
Google Oneindia Kannada News

ನವದೆಹಲಿ, ಮಾರ್ಚ್ 19: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗುತ್ತಿದೆ. ಕಳೆದ 20 ದಿನಗಳಿಂದ ಇಂಧನ ದರದಲ್ಲಿ ಯಾವುದೇ ರೀತಿ ಬದಲಾವಣೆಗಳು ಕಂಡು ಬಂದಿಲ್ಲ. ಕೊನೆಯದಾಗಿ ಕಳೆದ ಫೆಬ್ರವರಿ.27ರಂದು ಪೆಟ್ರೋಲ್ ದರ 24 ಪೈಸೆ ಮತ್ತು ಡೀಸೆಲ್ ದರ 15 ಪೈಸೆ ಏರಿಕೆಯಾಗಿತ್ತು.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ದರ 91.17 ರೂಪಾಯಿ, ಡೀಸೆಲ್ ದರ 81.47 ರೂಪಾಯಿ ಇದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀ.ಗೆ 97.57 ಮತ್ತು ಡೀಸೆಲ್ ದರ ಪ್ರತಿ ಲೀ.ಗೆ 88.60 ರೂಪಾಯಿ ಇದೆ.

ಮಾರ್ಚ್18: ಕರ್ನಾಟಕದ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ? ಮಾರ್ಚ್18: ಕರ್ನಾಟಕದ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ?

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ವ್ಯಾಟ್ ನಿಂದಾಗಿ ಪೆಟ್ರೋಲ್ ದರವು ಶತಕ ಬಾರಿಸಿದೆ. ಮಧ್ಯಪ್ರದೇಶದ ಅನುಪ್ಪುರ್ ನಗರದಲ್ಲಿ ಪೆಟ್ರೋಲ್ ದರ ಪ್ರತಿ ಲೀ.ಗೆ 101.59 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀ.ಗೆ 91.97 ರೂಪಾಯಿ ಆಗಿತ್ತು. ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಪೆಟ್ರೋಲ್ ದರ ಪ್ರತಿ ಲೀ.ಗೆ 101.84 ರೂಪಾಯಿ ಹಾಗೂ ಡೀಸೆಲ್ ದರ ಪ್ರತಿ ಲೀ.ಗೆ 93.77 ರೂಪಾಯಿ ಆಗಿತ್ತು.


2021ನೇ ವರ್ಷದ ಮೊದಲ ಎರಡು ತಿಂಗಳಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರದ ಮೇಲೆ 4.87 ರೂಪಾಯಿ ಏರಿಕೆಯಾಗಿತ್ತು. ಡೀಸೆಲ್ ದರವು ಪ್ರತಿ ಲೀ.ಗೆ 4.99 ರೂಪಾಯಿ ಹೆಚ್ಚಳವಾಗಿತ್ತು. ಪ್ರಸ್ತುತ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎನ್ನುವುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.

ಯಾವ ನಗರದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?:

ನಗರ ಪೆಟ್ರೋಲ್ ದರ(ಪ್ರತಿ ಲೀ.ಗೆ) ಡೀಸೆಲ್ ದರ(ಪ್ರತಿ ಲೀ.ಗೆ)
ಶ್ರೀ ಗಂಗಾನಗರ 101.84 93.77
ಅನುಪ್ಪುರ್ 101.59 91.97
ನವದೆಹಲಿ 91.17 81.47
ಮುಂಬೈ 97.57 88.60
ಕೋಲ್ಕತ್ತಾ 91.35 84.35
ಚೆನ್ನೈ 93.11 86.45
ಬೆಂಗಳೂರು 94.22 86.37
ಹೈದ್ರಾಬಾದ್ 94.70 88.86
ಪಾಟ್ನಾ 93.48 86.73

English summary
Petrol, Diesel Rate Stable On 20th Day In India: Here’s What You Pay In Major City.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X