ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಏರಿಕೆ

ನವದೆಹಲಿ, ಜೂನ್ 01 : ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ ಎಂದು ಜನರು ದೂರುತ್ತಿರುವಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬಂದಿದೆ.

ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 2.58 ಮತ್ತು ಡೀಸೆಲ್ ಬೆಲೆಯನ್ನು 2.26 ರೂ. ಏರಿಕೆ ಮಾಡಲಾಗಿದೆ. ಒಂದೇ ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಿದೆ. [ಪೆಟ್ರೋಲ್, ಡೀಸೆಲ್ ದರದಲ್ಲಿ ಕೊಂಚ ಇಳಿಕೆ]

petrol

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಳ ಏರಿಳಿತದ ಆಧಾರದ ಮೇಲೆ ತೈಲ ಕಂಪನಿಗಳು ತಿಂಗಳಿನಲ್ಲಿ ಎರಡು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚು ಕಡಿಮೆ ಮಾಡುತ್ತವೆ. ಮೇ 31ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿದೆ. [20 ರೂಪಾಯಿಗೆ ಲೀಟರ್ ಪೆಟ್ರೋಲ್ ನೀಡಿ : ಸಿದ್ದರಾಮಯ್ಯ]

ಮೇ 17ರಂದು ಪೆಟ್ರೋಲ್ ಲೀಟರ್‌ಗೆ 83 ಪೈಸೆ ಮತ್ತು ಡೀಸೆಲ್‌ 1.26 ರೂ. ಏರಿಕೆಯಾಗಿತ್ತು. ಮೇ 31ರಂದು 2 ರೂ. ಏರಿಕೆಯಾಗುವ ಮೂಲಕ ತಿಂಗಳಿನಲ್ಲಿ 2ನೇ ಬಾರಿ ಬೆಲೆ ಏರಿಕೆಯಾದಂತಾಗಿದೆ.

ಬೆಂಗಳೂರಲ್ಲಿ ಎಷ್ಟಾಗುತ್ತದೆ?
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ನಂತರ ಬೆಂಗಳೂರಲ್ಲಿ ಲೀಟರ್ ಪೆಟ್ರೋಲ್ ಗೆ 70.40 ರು ನೀಡಬೇಕು. ಡೀಸೆಲ್ ಗೆ 57.74 ರು, ನೀಡಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+