Breaking; ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ; 4 ಸಾವು

ಮಿಜೋರಾಂ, ಅ. 30: ಶನಿವಾರ ತಡರಾತ್ರಿ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡ ಪರಿಣಾಮ ಕನಿಷ್ಠ 4 ಜನರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ಮಿಜೋರಾಂ ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿಯಿಂದ ಪೂರ್ವಕ್ಕೆ 18 ಕಿಲೋಮೀಟರ್ ದೂರದಲ್ಲಿರುವ ತುಯಿರಿಯಾಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಪೆಟ್ರೋಲ್ ಟ್ಯಾಂಕರ್ ಚಂಫೈಗೆ ಹೋಗುತ್ತಿದ್ದಾಗ ಟ್ಯಾಂಕರ್‌ಗೆ ಬೆಂಕಿ ಹತ್ತಿಕೊಂಡು ಸ್ಪೋಟ ಸಂಭವಿಸಿದೆ.

Petrol Tanker Catches Fire In Mizoram; 4 Killed, 18 Injured

ಟ್ಯಾಂಕರ್‌ನಿಂದ ಸೋರುತ್ತಿದ್ದ ಪೆಟ್ರೋಲ್ ಸಂಗ್ರಹಿಸಲು ಸ್ಥಳೀಯರು ಪ್ರಯತ್ನಿಸಿದಾಗ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಬೆಂಕಿ ಅವಘಡದಲ್ಲಿ ನಾಲ್ವರು ಸುಟ್ಟು ಕರಕಲಾಗಿದ್ದು, 18 ಮಂದಿ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಗಾಯಾಳುಗಳಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+