Jammu & Kashmir Election: 26 ಕ್ಷೇತ್ರಗಳಲ್ಲಿ ಮತದಾನ; ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಜಮ್ಮು ಮತ್ತು ಕಾಶ್ಮೀರದಲ್ಲಿ ದಶಕಗಳ ಬಳಿಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇಂದು 2ನೇ ಹಂತದ ಮತದಾನ ನಡೆಯುತ್ತಿದೆ. ಆರು ಜಿಲ್ಲೆಗಳಲ್ಲಿ 26 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 26 ಲಕ್ಷ ಮತದಾರರು ಕಣದಲ್ಲಿರುವ 239 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಪ್ರತ್ಯೇಕತಾವಾದಿಗಳ ಪ್ರಾಬಲ್ಯವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಒದಗಿಸಲಾಗಿದೆ.

ಸೆಪ್ಟೆಂಬರ್ 18 ರಂದು ಈಗಾಗಲೇ ಕಣಿವೆ ರಾಜ್ಯದಲ್ಲಿ ಯಶಸ್ವಿಯಾಗಿ ಮೊದಲ ಹಂತದ ಚುನಾವಣೆ ನಡೆದಿದೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಏಳು ಜಿಲ್ಲೆಗಳ 24 ಕ್ಷೇತ್ರಗಳಲ್ಲಿ 61.13% ರಷ್ಟು ಮತದಾನವಾಗಿತ್ತು. 2014ರಲ್ಲಿ ಇಲ್ಲಿ 66% ಮತದಾನವಾಗಿತ್ತು, ಮತದಾನದ ಪ್ರಮಾಣ ಕಡಿಮೆಯಾದರೂ, ಶಾಂತಿಯುತವಾಗಿ ಮತದಾನ ನಡೆದಿತ್ತು.

phase 2 voting in jammu and kashmir key candidates

ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳು

2ನೇ ಹಂತದ ಚುನಾವಣೆಯಲ್ಲಿ ರಿಯಾಸಿ, ಶ್ರೀ ಮಾತಾ ವೈಷ್ಣೋ ದೇವಿ, ಕಲಕೋಟೆ - ಸುಂದರ್‌ಬನಿ, ತನ್ನಮಂಡಿ (ಎಸ್‌ಟಿ), ಸುರನ್‌ಕೋಟೆ (ಎಸ್‌ಟಿ), ಪೂಂಚ್ ಹವೇಲಿ, ಮೆಂಧರ್ (ಎಸ್‌ಟಿ), ನೌಶೇರಾ, ರಾಜೌರಿ (ಎಸ್‌ಟಿ), ಬುಧಾಲ್ (ಎಸ್‌ಟಿ), ಚ್ರಾರ್-ಐ-ಶರೀಫ್, ಚದೂರ, ಚನ್ನಪೋರಾ, ಝಡಿಬಲ್, ಈದ್ಗಾ, ಸೆಂಟ್ರಲ್ ಶಾಲ್ತೆಂಗ್, ಹಜರತ್‌ಬಾಲ್, ಖಾನ್ಯಾರ್, ಹಬ್ಬಕದಲ್, ಕಂಗನ್ (ಎಸ್‌ಟಿ), ಗಂದರ್‌ಬಾಲ್, ಲಾಲ್ ಚೌಕ್, ಬುಡ್ಗಾಮ್, ಬೀರ್ವಾ, ಖಾನ್‌ಸಾಹಿಬ್ ಮತ್ತು ಗುಲಾಬ್‌ಗಢ್ (ಎಸ್‌ಟಿ) ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಗಂದರ್ಬಲ್ ಮತ್ತು ಬುದ್ಗಾಮ್ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ ಕಣಿವೆ ರಾಜ್ಯದ ಮಾಜಿ ಸಿಎಂ.

ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ನೌಶೇರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು, ಬಿಜೆಪಿಗೆ ಭದ್ರ ಬುನಾದಿ ಹಾಕುವ ವಿಶ್ವಾಸದಲ್ಲಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಸೆಂಟ್ರಲ್-ಶಾಲ್ತೆಂಗ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಪ್ರತ್ಯೇಕತಾವಾದಿಗಳ ಪ್ರಾಬಲ್ಯ

ಎರಡನೇ ಹಂತದ ಚುನಾವಣೆ ನಡೆಯುತ್ತಿರುವ ಹಲವು ಕ್ಷೇತ್ರಗಳಲ್ಲಿ ಪ್ರತ್ಯೇಕತಾವಾದಿಗಳು ಹಿಡಿತ ಹೊಂದಿದ್ದಾರೆ. 26 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 15 ಕ್ಷೇತ್ರಗಳು ಕೇಂದ್ರ ಕಾಶ್ಮೀರದಲ್ಲಿದ್ದು, ಪ್ರತ್ಯೇಕತಾವಾದಿಗಳ ಪ್ರಾಬಲ್ಯ ಹೊಂದಿವೆ.

ಖನ್ಯಾರ್, ಝೆಡ್ಬಾಲ್, ಲಾಲ್ ಚೌಕ್, ಈದ್ಗಾ ಹಜರತ್ಬಾಲ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ಬೆಳಗ್ಗೆ 9 ಗಂಟೆ ವೇಳೆಗೆ ಶ್ರೀನಗರದಲ್ಲಿ ಕೇವಲ 4.70% ಯಷ್ಟು ಮಾತ್ರ ಮತದಾನವಾಗಿದೆ. ಮೂರನೇ ಹಂತದ ಮತದಾನ ಅಕ್ಟೋಬರ್ 1ರಂದು ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+