Lok Sabha Election 2024 Phase 3: ಮತ ಚಲಾಯಿಸಿದ ಪ್ರಧಾನಿ ಮೋದಿ: ದಾಖಲೆಯ ಮತದಾನಕ್ಕೆ ಮನವಿ
ಭಾರತದಲ್ಲಿ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದೆ. ಇಂದು 98 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದಲ್ಲಿ ಸುಮಾರು 1300 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ. ರಾಜ್ಯದಲ್ಲೂ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಚುರುಕು ಪಡೆದುಕೊಂಡಿದೆ. ಇನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಸಹ ಇಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮೂರನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್‌ನ ರಾನಿಪ್‌ನಲ್ಲಿರುವ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಸರತಿ ಸಾಲಿನಲ್ಲಿ ನಿಂತ ಪ್ರಧಾನಿ ಸಾಮನ್ಯ ಜನ ಮತ ಚಲಾಯಿಸುವ ರೀತಿಯಲ್ಲಿ ಮತದಾನ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಹಿರಿಯ ಸಹೋದರ ಸೋಮಾಭಾಯಿ ಮೋದಿ ಅವರು ರಾನಿಪ್‌ನಲ್ಲಿ ವಾಸಿಸುತ್ತಿದ್ದಾರೆ. ಪಿಎಂ ಮೋದಿ ಇಲ್ಲಿಯ ಮತದಾರ. ಪ್ರಧಾನಿ ಮೋದಿ ಅವರು ರಾನಿಪ್ ನಿಶಾನ್ ಶಾಲೆಗೆ ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಮೋದಿ ನೋಡಲು ಭಾರಿ ಜನ
ಪ್ರಧಾನಿ ಮೋದಿ ಅವರನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಸ್ತಲಾಘವ ಮಾಡುವ ಮೂಲಕ ಜನರ ಶುಭಾಶಯಗಳನ್ನು ಸ್ವೀಕರಿಸಿದರು. ಇದೇ ವೇಳೆ ಪ್ರಧಾನಿ ಮೋದಿ ಪುಟ್ಟ ಮಗಳನ್ನು ಪ್ರೀತಿಯಿಂದ ಮುದ್ದಿಸಿದರು.
#WATCH | Prime Minister Narendra Modi shares a light-hearted moment with a child as he greets people after casting his vote at a polling booth in Ahmedabad, Gujarat #LokSabhaElections2024 pic.twitter.com/h1QI7l1dDD
— ANI (@ANI) May 7, 2024
ಮತದಾನದ ಬಳಿಕ ಹೇಳಿದ್ದೇನು?
ಇಂದು ನಮ್ಮ ದೇಶದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಮತ್ತು ಅದೇ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತಚಾಲಾಯಿಸಿದ ಬಳಿಕ ಮನವಿ ಮಾಡಿದರು.
#WATCH | Prime Minister Narendra Modi casts his vote for #LokSabhaElections2024 at Nishan Higher Secondary School in Ahmedabad, Gujarat pic.twitter.com/i057pygTkJ
— ANI (@ANI) May 7, 2024
ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ಸರಳ ದಾನವಲ್ಲ. ನಮ್ಮ ದೇಶದಲ್ಲಿ ದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಮತ್ತು ಅದೇ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು. ಇಂದು ಮೂರನೇ ಹಂತದ ಮತದಾನ. ಮೂರು ವಾರಗಳ ಕಾಲ ಚುನಾವಣೆ ನಡೆಯಲಿದ್ದು, ನಾಲ್ಕು ಹಂತಗಳು ಬಾಕಿ ಉಳಿದಿವೆ ಎಂದು ತಿಳಿಸಿದರು.
ದೇಶದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲರೂ ಉತ್ಸಾಹದಿಂದ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದಾರೆ. ದೇಶದಲ್ಲಿ ಮೊದಲ ಎರಡು ಹಂತಗಳಲ್ಲಿ ಯಾವುದೇ ಹಿಂಸಾಚಾರದ ಘಟನೆಗಳು ವರದಿಯಾಗಿಲ್ಲ ಎಂದು ನಾನು ಚುನಾವಣಾ ಆಯೋಗವನ್ನು ಅಭಿನಂದಿಸುತ್ತೇನೆ. ಆಯೋಗವು ಚುನಾವಣಾ ವ್ಯವಸ್ಥೆಯನ್ನು ಕಾಲಕ್ಕೆ ತಕ್ಕಂತೆ ಆಧುನೀಕರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.
#WATCH | PM Narendra Modi asks media personnel to take care of their health while covering #LokSabhaElection2024
— ANI (@ANI) May 7, 2024
“You should drink more water and it will be good for your health and will also give you energy...," says PM Modi pic.twitter.com/mlW1Ez4HMI
ಮೇ 6ರಂದು ಗುಜರಾತ್‌ನಲ್ಲಿ ವಾಸ
ಪ್ರಧಾನಿ ಮೋದಿಯವರ ಹಿರಿಯ ಸಹೋದರ ಸೋಮಭಾಯಿ ಪಟೇಲ್ ಕೂಡ ನಿಶಾನ್ ಶಾಲೆಯ ಹೊರಗೆ ಹಾಜರಿದ್ದರು. ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಪ್ರಧಾನಿ ಮೋದಿ ನಂತರ, ಅವರ ಹಿರಿಯ ಸಹೋದರ ಸೋಮಾಭಾಯಿ ಮೋದಿ ಮತದಾನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಮಾಡಲು ಮೇ 6ರ ರಾತ್ರಿ ಗುಜರಾತ್‌ಗೆ ಆಗಮಿಸಿದ್ದರು. ರಾಜಭವನದಲ್ಲಿ ರಾತ್ರಿಯ ವಿಶ್ರಾಂತಿಯ ನಂತರ ಪ್ರಧಾನಿ ಮೋದಿ ಬೆಳಿಗ್ಗೆ ಅಹಮದಾಬಾದ್‌ನ ರಾನಿಪ್‌ನಲ್ಲಿರುವ ನಿಶಾನ್ ಶಾಲೆಯಲ್ಲಿ ಮತ ಚಲಾಯಿಸಿದರು.
ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು?
ರಾನಿಪ್ ಪ್ರದೇಶವು ಗಾಂಧಿನಗರ ಲೋಕಸಭೆಯ ಭಾಗವಾಗಿದೆ. ಗಾಂಧಿನಗರ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭ್ಯರ್ಥಿ. ಪ್ರಧಾನಿ ಮೋದಿ ರಾನಿಪ್ ಶಾಲೆಗೆ ತಲುಪುವ ಮೊದಲು, ಈ ಪ್ರದೇಶದ ಬಿಜೆಪಿ ಅಭ್ಯರ್ಥಿ ಮತ್ತು ಗೃಹ ಸಚಿವ ಅಮಿತ್ ಶಾ ಕೂಡ ಅಲ್ಲಿ ಹಾಜರಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಮಿತ್ ಶಾ, ಎರಡನೇ ಬಾರಿಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications