Viral Video: ಕರ್ನಾಟಕದಷ್ಟು ಕೀಳು ಮಟ್ಟದ ಚಿಂತನೆ ಮತ್ತೊಂದಿಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್

ನವದೆಹಲಿ: ಕನ್ನಡಿಗರ "ನಮ್ಮ ತೆರಿಗೆ ನಮ್ಮ ಹಕ್ಕು" ಅಭಿಯಾನವನ್ನು ಉಲ್ಲೇಖಿಸಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಕೀಳಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸಮರ್ಪಕ ತೆರಿಗೆ ಹಣ ನೀಡುತ್ತಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವು ವಿರೋಧ ವ್ಯಕ್ತಪಡಿಸಿತ್ತು. ಇದು ಕೇವಲ ಸರ್ಕಾರದ ಅಭಿಯಾನ ಆಗಿರದೆ ಕನ್ನಡಿಗರು ಸಹ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಸಿದ್ದರು. ಕರ್ನಾಟಕದಲ್ಲಿ ಪ್ರಾರಂಭವಾದ ಈ ಅಭಿಯಾನವು ಇಡೀ ದಕ್ಷಿಣ ಭಾರತಕ್ಕೆ ವ್ಯಾಪಿಸಿತ್ತು. ಇದೀಗ ದಕ್ಷಿಣ ಭಾರತದ ರಾಜ್ಯಗಳನ್ನು ಉಲ್ಲೇಖಿಸಿ, ಕೀಳು ಮಟ್ಟದ ಚಿಂತನೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನುದಾನದಲ್ಲಿ ತಾರತಮ್ಯವಾಗುತ್ತಿದೆ ಎನ್ನುವ ಗಂಭೀರ ಆರೋಪವು ಕಳೆದ ಒಂದು ದಶಕದಿಂದಲೂ ಚರ್ಚೆ ಆಗುತ್ತಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಕೊರತೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ಧ್ವನಿ ಎತ್ತುತ್ತಿದ್ದಾರೆ. ಇನ್ನು ತೆರಿಗೆ ಹಂಚಿಕೆ ಹಾಗೂ ಅನುದಾನದ ವಿಚಾರದಲ್ಲಿ ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಈಚೆಗೆ ನವದೆಹಲಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ಪಂಜಾಬ್ ಹಾಗೂ ದೆಹಲಿಯ (ಎಎಪಿ) ರಾಜಕೀಯ ನಾಯಕರು ಪ್ರತಿಭಟನೆ ನಡೆಸಿದ್ದರು.

Piyush Goyal s Choti Soch Remark on Karnataka Triggers Outrage Video Viral

ದಕ್ಷಿಣ ಭಾರತೀಯ ರಾಜ್ಯಗಳು ಒಂದೆಡೆ ಸೇರುವುದಕ್ಕೆ ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನ ಸಾಕ್ಷಿಯಾಗಿತ್ತು. ಆದರೆ ಕೇಂದ್ರ ಸರ್ಕಾರದ ಪ್ರಭಾವಿ ಸಚಿವರು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನವನ್ನು ಟೀಕಿಸುವುದರೊಂದಿಗೆ ದಕ್ಷಿಣ ಭಾರತೀಯ ರಾಜ್ಯಗಳ ಬಗ್ಗೆಯೂ ಟೀಕೆ ಮಾಡಿದ್ದಾರೆ. ಪಿಯೂಷ್ ಗೋಯಲ್ ಅವರ ಮಾತುಗಳಿಗೆ ಕನ್ನಡಿಗರು ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರಿದ್ದಾರೆ.

ಪಿಯೂಷ್ ಗೋಯಲ್ ಹೇಳಿದ್ದೇನು ?

ಸಮಾರಂಭವೊಂದರಲ್ಲಿ ಮಾತನಾಡುವಾಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಕರ್ನಾಟಕ, ತೆಲಂಗಾಣ ಹಾಗೂ ತಮಿಳುನಾಡು ಸೇರಿ ಕೆಲವು ರಾಜ್ಯಗಳು ಅವರವರಲ್ಲೇ ಕಿತ್ತಾಡಿಕೊಳ್ಳುತ್ತಿರುತ್ತಾರೆ. ಈ ರಾಜ್ಯಗಳು ನಾವು ಎಷ್ಟು ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡಿದ್ದೇವೆ ಅಷ್ಟು ನಮಗೆ ವಾಪಸ್ ಕೊಡಿ ಎಂದು ಕೇಳುತ್ತಿವೆ. ನಾನು ಅರ್ಥಮಾಡಿಕೊಂಡಿರುವಂತೆ ಇದಕ್ಕಿಂತ ಚೋಟಿ ಸೋಚ್ (Choti Soch - ಕೀಳು ಮಟ್ಟದ ಅಥವಾ ಕಡಿಮೆ ಚಿಂತನೆ) ಕೀಳು ಮಟ್ಟದ ಚಿಂತನೆ ಮತ್ತೊಂದಿಲ್ಲ. ಇದಕ್ಕಿಂತಲೂ ದೌರ್ಭಗ್ಯವಾದ ವಿಷಯ ಮತ್ತೊಂದಿಲ್ಲ ಎಂದೂ ಅವರು ಹೇಳಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪಿಯೂಷ್‌ ಗೋಯಲ್ ಅವರ ವಿಡಿಯೋ ವೈರಲ್ ಆಗುತ್ತಿದ್ದು, ಇದಕ್ಕೆ ಕನ್ನಡಿಗರು ಸೇರಿದಂತೆ ದಕ್ಷಿಣ ಭಾರತೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+