ಪ್ಲಾಸ್ಮಾ ಚಿಕಿತ್ಸೆಯು ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಕಾರಿ ಅಲ್ಲ
ನವದೆಹಲಿ, ಸೆಪ್ಟೆಂಬರ್ 09: ಕಾನ್ವಲೆಸೆಂಟ್ ಪ್ಲಾಸ್ಮಾ ಚಿಕಿತ್ಸೆಯು ಕೊವಿಡ್ 19ನಿಂದ ಸಂಭವಿಸುವ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಕಾರಿಯಲ್ಲ ಎಂದು ಅಧ್ಯಯನವೊಂದು ತಿಳಿಸಿದೆ.
Recommended Video
ಈ ಕುರಿತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಶಗಳನ್ನು ಉಲ್ಲೇಖಿಸಲಾಗಿದೆ.ದೇಶದ ಒಟ್ಟು 39 ಆಸ್ಪತ್ರೆಗಳಲ್ಲಿ ಕೊವಿಡ್ 19 ರೋಗಿಗಳಿಗೆ ನೀಡುತ್ತಿರುವ ಪ್ಲಾಸ್ಮಾ ಚಿಕಿತ್ಸೆಯ ಕುರಿತು ಅಧ್ಯಯನ ನಡೆಸಲಾಗಿದೆ.
ಪ್ಲಾಸ್ಮಾ ಚಿಕಿತ್ಸೆಯನ್ನು ಕ್ಲಿನಿಕಲ್ ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾದಲ್ಲಿ ನೋಂದಣಿ ಮಾಡಲಾಗಿದೆ.1210 ಮಂದಿ ದೇಶದ 39 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 29 ಟೀಚಿಂಗ್ ಪಬ್ಲಿಕ್ ಆಸ್ಪತ್ರೆ 10 ಖಾಸಗಿ ಆಸ್ಪತ್ರೆಯಲ್ಲಿ ಅಧ್ಯಯನ ನಡೆಸಲಾಗಿದೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ ಮತ್ತು ಮಧ್ಯಮ ಅನಾರೋಗ್ಯದಿಂದ ಬಳಲುತ್ತಿರುವ 464 ಮಂದಿಯ ಅಧ್ಯಯನ ನಡೆಸಲಾಯಿತು.
ಒಟ್ಟಿನಲ್ಲಿ ಈ ಪ್ಲಾಸ್ಮಾ ಚಿಕಿತ್ಸೆಯು ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವುದಿಲ್ಲ, ಅಥವಾ ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವವರಿಗೂ ಕೂಡ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂಬುದು ಸಾಬೀತಾಗಿದೆ.












Click it and Unblock the Notifications