ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ನವೆಂಬರ್ ವರೆಗೂ 5 ಕೆಜಿ ಅಕ್ಕಿ, 1 ಕೆಜಿ ಬೇಳೆ ಉಚಿತ!

|
Google Oneindia Kannada News

ನವದೆಹಲಿ, ಜೂನ್.30: ಭಾರತದಲ್ಲಿ ಕೊರೊನಾವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಂದು ಸಂತಸದ ಸುದ್ದಿ ನೀಡಿದ್ದಾರೆ. ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ್ ಯೋಜನೆಯನ್ನು ಪ್ರಧಾನಿ ಮೋದಿ ಜಾರಿಗೊಳಿಸಿದ್ದಾರೆ.

Recommended Video

Siddaramaiah questioned to CM BSY |ಸರಕಾರದ ಮುಂದೆ ಸಿದ್ದರಾಮಯ್ಯ ಇಟ್ಟ ಹೊಸ ಡಿಮಾಂಡ್ | Oneindia Kannada

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿಯಲ್ಲಿ ಬಡವರು ಹಸಿವಿನಿಂದ ಕೊರಗಬಾರದು. ಈ ನಿಟ್ಟಿನದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದಿನ 5 ತಿಂಗಳವರೆಗೂ ಅಂದರೆ ನವೆಂಬರ್ ಅಂತ್ಯದವರೆಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಭಾಷಣ: ಅನ್‌ಲಾಕ್‌2ರಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಅಪಾಯಪ್ರಧಾನಿ ಮೋದಿ ಭಾಷಣ: ಅನ್‌ಲಾಕ್‌2ರಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ

ಕಳೆದ ಕೆಲವು ತಿಂಗಳುಗಳಿಂದ ದೇಶದಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರು ಹಾಗೂ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರದಿಂದ ಹಣವನ್ನು ಜಮೆ ಮಾಡಲಾಗಿದೆ. ಅದಕ್ಕಾಗಿ 18,000 ಕೋಟಿ ಖರ್ಚು ಮಾಡಲಾಗಿದೆ.

PM Gareeb Kalyan Anna Yojana Will Be Extended Till The End Of November


ಗರೀಬ್ ಕಲ್ಯಾಣ ಯೋಜನೆಯಲ್ಲಿ ಸಿಗುವುದೇನು?:

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ರೋಜಗಾರ್ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಬಡವರಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಮತ್ತು ಗೋಧಿ ಹಾಗೂ 1 ಕೆಜಿ ಬೇಳೆಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಪ್ರಮುಖವಾಗಿ ಪಂಚಮಿ, ಗಣೇಶ ಚತುರ್ಥಿ, ದಸರಾ ಹಾಗೂ ದೀಪಾವಳಿ ಹಬ್ಬಗಳು ಎದುರಾಗಲಿವೆ. ಈ ಸಂದರ್ಭದಲ್ಲಿ ಬಡವರಿಗೆ ಅನುಕೂಲವಾಗಲೆಂದು ಯೋಜನೆಯನ್ನು ವಿಸ್ತರಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಅಮೆರಿಕಾದ ಜನಸಂಖ್ಯೆಯ ಎರಡರಷ್ಟು ಜನರು ಹಾಗೂ ಬ್ರಿಟನ್ ಜನಸಂಖ್ಯೆಯ 12 ಪಟ್ಟು ಜನರಿಗೆ ಭಾರತದಲ್ಲಿ ಉಚಿತವಾಗಿ ಪಡಿತರವನ್ನು ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

English summary
PM Gareeb Kalyan Anna Yojana Will Be Extended Till The End Of November.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X