Jobs: 3-4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿಸಲಾಗಿದೆ; ಪ್ರಧಾನಿ ಮೋದಿ

ಕಳೆದ 3-4 ವರ್ಷಗಳಲ್ಲಿ ದೇಶದಲ್ಲಿ 8 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ವಿಪಕ್ಷಗಳ ಟೀಕೆಗಳಿಗೆ ಉತ್ತರ ಕೊಟ್ಟಿದ್ದಾರೆ.

ನಕಲಿ ಸುದ್ದಿಗಳನ್ನು ಹರಡುವವರು ಅಭಿವೃದ್ಧಿ, ಹೂಡಿಕೆ ಮತ್ತು ಉದ್ಯೋಗದ ಶತ್ರುಗಳು ಎಂದು ಪ್ರಧಾನಿ ಮೋದಿ ಪ್ರತಿಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

PM Modi Announces Creation of 8 Crore Jobs in India in Last 3-4 Years

ಮುಂಬೈನಲ್ಲಿ ₹ 29,400 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, "ಇತ್ತೀಚೆಗೆ, ಆರ್‍ ಬಿಐ ಉದ್ಯೋಗಗಳಿಗೆ ಸಂಬಂಧಿಸಿದಂತೆ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ ಕಳೆದ 3-4 ವರ್ಷಗಳಲ್ಲಿ ದೇಶದಲ್ಲಿ ಸುಮಾರು 8 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ.

ಈ ಅಂಕಿಅಂಶಗಳು ಸುಳ್ಳು ನಿರೂಪಣೆಗಳನ್ನು ಹರಡುವವರನ್ನು ಮೌನಗೊಳಿಸಿವೆ. ಈ ವ್ಯಕ್ತಿಗಳು ಹೂಡಿಕೆ, ಮೂಲಸೌಕರ್ಯ ಮತ್ತು ದೇಶದ ಅಭಿವೃದ್ಧಿಯನ್ನು ವಿರೋಧಿಸುತ್ತಾರೆ ಮತ್ತು ಈಗ ಅದನ್ನು ಬಹಿರಂಗಪಡಿಸುತ್ತಿದ್ದಾರೆ. ದೇಶದ ನಾಗರಿಕರು ಅವರ ಪಿತೂರಿಗಳನ್ನು ತಿರಸ್ಕರಿಸುತ್ತಿದ್ದಾರೆ," ಎಂದು ಹೇಳಿದ್ದಾರೆ.

ವಿಪಕ್ಷಗಳ ವಿರುದ್ಧ ಟೀಕೆ

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ಮೋದಿ, ಅಟಲ್ ಸೇತು ರಸ್ತೆ ಬಿರುಕು ಬಿಟ್ಟಿದೆ ಎನ್ನುವ ಕಾಂಗ್ರೆಸ್ ಆರೋಪಗಳ ಬಗ್ಗೆ ಕೂಡ ಮಾತನಾಡಿ, "ನಮ್ಮ ಉದ್ದೇಶ ಮುಂಬೈನಲ್ಲಿ ಜೀವನದ ಗುಣಮಟ್ಟವನ್ನು ಉತ್ತಮಗೊಳಿಸುವುದು; ಆದ್ದರಿಂದ, ಮುಂಬೈ ಸುತ್ತಮುತ್ತಲಿನ ಸಂಪರ್ಕವನ್ನು ಸುಧಾರಿಸಲಾಗುತ್ತಿದೆ.

ಮುಂಬೈನಲ್ಲಿ ಕರಾವಳಿ ರಸ್ತೆ ಹಾಗೂ ಅಟಲ್ ಸೇತು ಕಾಮಗಾರಿ ಮುಗಿದಿದ್ದು, ಅಟಲ್ ಸೇತು ಬಗ್ಗೆ ಅಪಪ್ರಚಾರ ಮಾಡಿದ್ದು ನಿಮಗೆ ನೆನಪಿರಬಹುದು. ಅದನ್ನು ನಿಲ್ಲಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿತ್ತು, ಆದರೆ ಪ್ರತಿಯೊಬ್ಬರೂ ಅದರಿಂದ ಪ್ರಯೋಜನ ಪಡೆಯುತ್ತಿದ್ದಾರೆ" ಎಂದರು.

ಪ್ರತಿದಿನ ಸುಮಾರು 20,000 ವಾಹನಗಳು ಇದನ್ನು ಬಳಸುತ್ತಿವೆ ಎಂದು ನನಗೆ ಹೇಳಲಾಗಿದೆ. ಅಲ್ಲದೆ, ದಿನಕ್ಕೆ ಸುಮಾರು ₹20,000-25000 ಲಕ್ಷ ಮೌಲ್ಯದ ಇಂಧನ ಉಳಿತಾಯವಾಗುತ್ತಿದೆ ಎಂದರು.

ಮುಂಬೈ ನಗರವನ್ನು ಜಾಗತಿಕ ಫಿನ್‌ಟೆಕ್ ರಾಜಧಾನಿಯನ್ನಾಗಿ ಮಾಡಲು ಬಯಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.

"ಮಹಾರಾಷ್ಟ್ರವು ಭಾರತವನ್ನು ಸ್ವಾವಲಂಬಿ ಮಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುವ ರಾಜ್ಯವಾಗಿದೆ. ಮಹಾರಾಷ್ಟ್ರವು ಕೈಗಾರಿಕೆ, ಕೃಷಿ ಮತ್ತು ಹಣಕಾಸು ಕ್ಷೇತ್ರದ ಶಕ್ತಿಯನ್ನು ಹೊಂದಿದೆ ಮತ್ತು ಇದು ಮುಂಬೈ ಆರ್ಥಿಕ ಕೇಂದ್ರ ಆಗಲು ಸಹಾಯ ಮಾಡಿದೆ. ಈಗ, ಮಹಾರಾಷ್ಟ್ರವನ್ನು ವಿಶ್ವದ ದೊಡ್ಡ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ಮಾಡುವುದು ನನ್ನ ಗುರಿಯಾಗಿದೆ," ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+