ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಥಿಕ ಬೆಳವಣಿಗೆ ಹೆಚ್ಚಿಸಲು 100 ಲಕ್ಷ ಕೋಟಿ ರೂ. ಮೊತ್ತದ 'ಗತಿ ಶಕ್ತಿ' ಯೋಜನೆ ಘೋಷಣೆ

|
Google Oneindia Kannada News

ನವದೆಹಲಿ, ಆಗಸ್ಟ್ 15: ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಗತಿ ಶಕ್ತಿ ಯೋಜನೆಗೆ 100 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲ್ಯಾನ್ ಹೊಸ ಭವಿಷ್ಯದ ಆಥಿಕ ವಲಯಗಳ ಸಾಧ್ಯತೆಗಳನ್ನು ಅಭಿವೃದ್ಧಿಪಡಿಸುತ್ತದೆ. ಹಾಗೂ ಭಾರತವನ್ನು ಹಸಿರು ಜಲಜನಕ ಹಾಗೂ ಅತಿ ದೊಡ್ಡ ರಫ್ತುದಾರ ಹೊಸ ಜಾಗತಿಕ ಕೇಂದ್ರವನ್ನಾಗಿಸಲು ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಸ್ಥಾಪಿಸುವುದಾಗಿ ಹೇಳಿದರು.

ಸೈನಿಕ ಶಾಲೆಗಳಲ್ಲಿ ಇನ್ನುಮುಂದೆ ಬಾಕಿಯರಿಗೂ ಪ್ರವೇಶ: ಪ್ರಧಾನಿ ಮೋದಿಸೈನಿಕ ಶಾಲೆಗಳಲ್ಲಿ ಇನ್ನುಮುಂದೆ ಬಾಕಿಯರಿಗೂ ಪ್ರವೇಶ: ಪ್ರಧಾನಿ ಮೋದಿ

ಭಾರತದ ಬಡ ವಂಚಿತರು, ದೇಶದ ರೈತರು ಹಾಗೂ ವಿಭಜನೆಯ ನೋವು ಸೇರಿದಂತೆ ಹಲವಾರು ವಿಷಯಗಳ ಕುರಿತು ಸುಮಾರು 90 ನಿಮಿಷಗಳ ಭಾಷಣದಲ್ಲಿ ಮೋದಿ ಮಾತನಾಡಿದರು.

PM Modi Announces Rs 100 Lakh Crore Gati Shakti Plan For Economic Growth

ಇನ್ನು ಗತಿ ಶಕ್ತಿಯು ಸ್ಥಳೀಯ ಉತ್ಪಾದಕರಿಗೆ ಜಾಗತಿಕವಾಗಿ ಸ್ಪರ್ಧಾತ್ಮಕವಾಗಲು ಸಹಾಯ ಮಾಡುತ್ತದೆ. ಹೊಸ ಭವಿಷ್ಯದ ಆರ್ಥಿಕ ವಲಯಗಳ ಸಾಧ್ಯತೆಗಳನ್ನು ಅಭಿವೃದ್ಧಿಪಡಿಸಲಿದೆ.

100 ಲಕ್ಷ ಕೋಟಿ ಗತಿಶಕ್ತಿ ಉಪಕ್ರಮವು ಯುವಕರಿಗೆ ಉದ್ಯೋಗ ಅವಕಾಶಗಳನ್ನು ತರಲಿದೆ, ಸಮಗ್ರ ಮೂಲಸೌಕರ್ಯ ಬೆಳವಣಿಗೆಗೆ ಇದು ಸಹಾಯ ಮಾಡುತ್ತದೆ ಎಂದು ಮೋದಿ ನೂತನ ಯೋಜನೆ ಬಗ್ಗೆ ವರ್ಣಿಸಿದರು.

ಭಾರತ ಸರ್ಕಾರವು ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಶುರು ಮಾಡಲಿದ್ದು, ಹಳ್ಳಿಯ ಕರಕುಶಲಗಾರರಿಗೆ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ ಎಂದು ಮೋದಿಯವರು ಹೇಳಿದ್ದಾರೆ.

ಭಾರತ ಸರ್ಕಾರವು ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಶುರು ಮಾಡಲಿದ್ದು, ಹಳ್ಳಿಯ ಕರಕುಶಲಗಾರರಿಗೆ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ. ಹಳ್ಳಿಯ ಅಭಿವೃದ್ಧಿ ಪಥವು ಹೊಸ ಆಯಾಮವನ್ನು ಪಡೆಯುತ್ತಿದೆ. ಹಳ್ಳಿಗಳಲ್ಲಿ ವಿದ್ಯುತ್‌ ಮತ್ತು ನೀರಿನ ಸಂಪರ್ಕ ಮಾತ್ರವೇ ಇಲ್ಲ, ಡಿಜಿಟಲ್‌ ಉದ್ಯಮಿಗಳೂ ರೂಪುಗೊಳ್ಳುತ್ತಿದ್ದಾರೆಂದು ತಿಳಿಸಿದರು.

ಸಬ್‌ಕಾ ಸಾತ್‌ ಸಬ್‌ಕಾ ವಿಕಾಸ್‌- ಸಬ್‌ಕಾ ವಿಶ್ವಾಸ್‌'ನಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿದ್ದೇವೆ. ನಮ್ಮ ಎಲ್ಲರ ಗುರಿಯನ್ನು ಸಾಧಿಸಲು 'ಸಬ್‌ಕಾ ಸಾತ್‌ ಸಬ್‌ಕಾ ವಿಕಾಸ್‌-ಸಬ್‌ಕಾ ವಿಶ್ವಾಸ್‌ ಮತ್ತು ಸಬ್‌ಕಾ ಪ್ರಯಾಸ್‌ - ಎಲ್ಲರ ಜೊತೆ, ಎಲ್ಲರ ಏಳ್ಗೆ- ಎಲ್ಲರ ಪ್ರಯತ್ನ' ಅತ್ಯಗತ್ಯವಾಗಿದೆ ಎಂದು ನಾನು ಈಗ ಘೋಷಣೆ ಮಾಡುತ್ತಿದ್ದೇನೆಂದು ತಿಳಿಸಿದ್ದಾರೆ.

ಬಡವರಿಗೆ ಪೌಷ್ಟಿಕಾಂಶಯುಕ್ತ ಅಕ್ಕಿಯನ್ನು ಸರ್ಕಾರ ನೀಡಲಿದೆ. ಪಡಿತರ ಅಂಗಡಿಯಲ್ಲಿ ಸಿಗುವ ಅಕ್ಕಿ ಇರಲಿ, ಮಧ್ಯಾಹ್ನ ಊಟಕ್ಕೆ ಲಭ್ಯವಾಗುವ ಅಕ್ಕಿ ಇರಲಿ, ಪ್ರತಿ ಯೋಜನೆಯಿಂದ ಲಭ್ಯವಾಗುವ ಅಕ್ಕಿಯ ಗುಣಮಟ್ಟವನ್ನೂ 2024ರ ವೇಳೆಗೆ ಹೆಚ್ಚಿಸಲಾಗುವುದು ಎಂದರು.

ದೇಶದ 75ನೇ ಸ್ವಾತಂತ್ರೋತ್ಸವದ 75 ವಾರಗಳ ಆಚರಣೆಗೆ ಪಣತೊಟ್ಟಿದ್ದೇವೆ. 2021ರ ಮಾರ್ಚ್‌ 12ರಿಂದ 2023ರ ಆಗಸ್ಟ್‌ 15ರವರೆಗೂ 'ಅಮೃತ ಮಹೋತ್ಸವ' ನಡೆಯಲಿದೆ.

ಭಾರತೀಯ ರೈಲ್ವೆ ಸಹ ದೇಶದ ಜೊತೆಗೆ ಮಹತ್ತರ ಪರಿವರ್ತನೆಯನ್ನು ಕಂಡಿದೆ. 75 ವಂದೇ ಭಾರತ್ ರೈಲುಗಳು ಸ್ವಾತಂತ್ರ್ಯದ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ 75 ವಾರಗಳಲ್ಲಿ ಭಾರತದ ಮೂಲೆ ಮೂಲೆಯನ್ನು ಸಂಪರ್ಕಿಸಲಿದೆ.

ಮುಂದಿನ 25 ವರ್ಷಗಳಲ್ಲಿ ಭಾರತ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಲಾಗುತ್ತದೆ. ಅಲ್ಲಿಯವರೆಗೆ ನಮ್ಮ ಗುರಿ ಭಾರತದ ನಿರ್ಮಾಣ ಆಗಿರಬೇಕು. ಯಾವ ರಾಷ್ಟ್ರಕ್ಕೂ ನಾವು ಕಡಿಮೆ ಇಲ್ಲ ಎನ್ನುವಂತೆ ಬೆಳೆಯಬೇಕು. ನಮ್ಮ ಎಲ್ಲಾ ಗುರಿಗಳ ಸಾಧನೆಗೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಬಹಳ ಮುಖ್ಯವಾಗಿದೆ.

ಇನ್ನುಮುಂದೆ ಸೈನಿಕ ಶಾಲೆಗಳು ಬಾಲಕರಿಗೆ ಮಾತ್ರ ಸೀಮಿತವಾಗಿರದೆ ಬಾಲಕಿಯರಿಗೂ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರಸ್ತುತ 33 ಸೈನಿಕ ಶಾಲೆಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಮಿಜೊರಾಮ್ ನಲ್ಲಿ ಎರಡುವರೆ ವರ್ಷಗಳ ಹಿಂದೆ ಸೈನಿಕ ಶಾಲೆಗಳಲ್ಲಿ ಬಾಲಕಿ/ಯರಿಗೆ ಪ್ರವೇಶ ನೀಡುವ ಪ್ರಥಮ ಪ್ರಯೋಗವನ್ನು ನಡೆಸಲಾಗಿತ್ತು ಎಂಬುದನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, ಈಗ ಭಾರತ ಸರ್ಕಾರ ಎಲ್ಲಾ ಸೈನಿಕ ಶಾಲೆಗಳಲ್ಲಿಯೂ ಬಾಲಕಿ/ಯುವತಿಯರಿಗೆ ಪ್ರವೇಶ ಲಭ್ಯವಿರಲಿದೆ ಎಂದು ಹೇಳಿದ್ದಾರೆ.

English summary
Prime Minister Modi in his address to the nation from the ramparts of Red Fort on the 75th Independence Day announced the launch of the PM Gati Shakti Plan in the coming days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X