ಹ್ಯಾಕರ್ಸ್ ಗಳ ಕಾಟ, ಸಂಪುಟ ಸಭೆಯಲ್ಲಿ ಮೊಬೈಲ್ ಬಳಕೆ ನಿಷೇಧ!

Written By: Ramesh
Subscribe to Oneindia Kannada

ನವದೆಹಲಿ, ಅಕ್ಟೋಬರ್. 21 : ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇನ್ಮುಂದೆ ಸ್ಮಾರ್ಟ್ ಮೊಬೈಲ್ ಫೋನ್ ಗಳನ್ನು ನಿಷೇಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ ಈ ಆದೇಶ ಹೊರಡಿಸಿದೆ.

ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ನಂತರ ಪಾಕ್ ಮತ್ತು ಚೈನೀಸ್ ಹ್ಯಾಕರ್ಸ್ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವ ಮಹತ್ವದ ವಿಷಯಗಳನ್ನು ಹ್ಯಾಕ್ ಮಾಡುವ ಮೂಲಕ ವಿಷಯಗಳು ಕದ್ದಾಲಿಕೆಯಾಗಬಹುದೆಂಬ ಅಘಾತಕಾರಿ ವಿಷಯವನ್ನು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಕಾರ್ಯಾಲಯ ಈ ಮಹತ್ವದ ತೀರ್ಮಾನ ಕೈಗೊಂಡಿದೆ.

Mobile

ಸಭೆಗೆ ಮೊಬೈಲ್ ಗಳನ್ನು ತರದಿರುವಂತೆ ಪ್ರಧಾನಿ ಕಾರ್ಯಾಲಯದಿಂದ ಎಲ್ಲ ಕೇಂದ್ರ ಸಚಿವರ ಕಾರ್ಯದರ್ಶಿಗಳ ಮೂಲಕ ಸಚಿವರಿಗೆ ಈ ಸೂಚನೆ ತಲುಪಿಸಲಾಗಿದೆ.

ಅಲ್ಲದೇ ಪ್ರಮುಖ ಹುದ್ದೆಯಲ್ಲಿರುವ ಅಧಿಕಾರಿಗಳು, ತಮ್ಮ ಸ್ಮಾರ್ಟ್ ಫೋನ್ ಗಳನ್ನು ಚಾರ್ಜ್ ಮಾಡಲು ಸರ್ಕಾರದ ಲ್ಯಾಪ್ ಟಾಪ್ ಹಾಗೂ ಕಂಪ್ಯೂಟರ್ ಗಳನ್ನು ಬಳಸದಂತೆ ನಿರ್ದೇಶಿಸಲಾಗಿದೆ.

ಮೇ 2010 ರಲ್ಲಿ ಬ್ರಿಟನ್ ಪ್ರಧಾನಿಯಾಗಿದ್ದ ಡೇವಿಡ್ ಕ್ಯಾಮರಾನ್ ಅವರು ಬ್ರಿಟನ್ ಹಾಗೂ ಫ್ರಾನ್ಸ್ ದೇಶಗಳಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಮೊಬೈಲ್ ಫೋನ್ ಗಳನ್ನು ನಿ‍ಷೇಧ ಮಾಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
To prevent leaking of sensitive information and policy decisions, the prime Minister's Office has banned use of mobile phones in cabinet meetings.
Please Wait while comments are loading...