ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

PM Modi BBC documentary: JNU ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸದಂತೆ ವಿದ್ಯಾರ್ಥಿ ಸಂಘಕ್ಕೆ ಎಚ್ಚರಿಕೆ

|
Google Oneindia Kannada News

ನವದೆಹಲಿ, ಜನವರಿ 23: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಭಿತ್ತಿಪತ್ರಗಳನ್ನು ಹಂಚಿತ್ತು. ಇದಕ್ಕೆ ಆಡಳಿತ ಮಂಡಲಿ ಆಕ್ಷೇಪ ವ್ಯಕ್ತಪಡಿಸಿದೆ.

ಜೆಎನ್‌ಯು ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಬಾರದು ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಸೋಮವಾರ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರವು ದೇಶದಲ್ಲಿ ಈ ಸಾಕ್ಷ್ಯಾಚಿತ್ರಕ್ಕೆ ನಿಷೇಧ ಹೇರಿದ್ದು, ಆದೇಶವನ್ನು ಧಿಕ್ಕರಿಸುವ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಮತ್ತೊಂದು ಜೆಎನ್‌ಯು ಮಾಡಲೊರಟಿದ್ದಾರೆ: ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಮತ್ತೊಂದು ಜೆಎನ್‌ಯು ಮಾಡಲೊರಟಿದ್ದಾರೆ: ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಮಂಗಳವಾರ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ಸೋಮವಾರ ಕ್ಯಾಂಪಸ್‌ನಲ್ಲಿ ಕರಪತ್ರವನ್ನು ಬಿಡುಗಡೆ ಮಾಡಿತ್ತು. ಇದರ ನಂತರ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

PM Modi BBC documentary: JNU admin warns against screening of BBC documentary

ಜೆಎನ್‌ಯು ಆಡಳಿತವು ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಿದೆ. ಇದನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸುವುದು "ಶಾಂತಿ ಮತ್ತು ಸಾಮರಸ್ಯವನ್ನು ಕದಡಬಹುದು" ಎಂದು ಹೇಳಿದ್ದಾರೆ.

"ಜೆಎನ್‌ಯುಎಸ್‌ಯು ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪು 24 ಜನವರಿ 2023 ರಂದು ರಾತ್ರಿ 9:00 ಗಂಟೆಗೆ "ಭಾರತ: ಮೋದಿ ಪ್ರಶ್ನೆ" ಎಂಬ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ. ಈ ಕಾರ್ಯಕ್ರಮಕ್ಕೆ ಜೆಎನ್‌ಯು ಆಡಳಿತದಿಂದ ಅನುಮತಿಯನ್ನು ತೆಗೆದುಕೊಳ್ಳಲಾಗಿಲ್ಲ. ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಬಹುದು" ಎಂದು ಹೇಳಿದೆ.

"ಸಂಬಂಧಿತ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸೂಚಿಸಲಾಗಿದೆ. ವಿಫಲವಾದರೆ ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಕಠಿಣ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ" ಎಂದು ಪ್ರಕಟಣೆ ತಿಳಿಸಿದೆ.

PM Modi BBC documentary: JNU admin warns against screening of BBC documentary

"ಭಾರತ: ಮೋದಿ ಪ್ರಶ್ನೆ" ಎಂಬ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರವು 2002 ರ ಗುಜರಾತ್ ಗಲಭೆಯ ನಂತರದ ಪರಿಣಾಮಗಳನ್ನು ವಿವರಿಸುತ್ತದೆ. ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗಲಭೆಗಳನ್ನು ನಿಭಾಯಿಸಿದ ರೀತಿಯನ್ನು ಪ್ರಶ್ನಿಸುತ್ತದೆ.

ಇನ್ನು, ಸರ್ಕಾರವು ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ಹಂಚಿಕೊಳ್ಳುವ ಯೂಟ್ಯೂಬ್ ವಿಡಿಯೋಗಳು ಮತ್ತು ಟ್ವಿಟರ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಿದೆ ಎಂದು ವರದಿಯಾಗಿದೆ.

English summary
Jawaharlal Nehru University (JNU) admin cancels screening of BBC documentary on Prime Minister Narendra Modi. screening was organised by Students Union. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X