PM Modi BBC Documentary: ಪ್ರತಿಷ್ಠಿತ ವಿವಿ ಮುಂದೆ ಎಡಪಂಥೀಯ ಗುಂಪು ಜಮಾವಣೆ, 12 ಮಂದಿ ಬಂಧನ
ಪ್ರಧಾನಿ ನರೇಂದ್ರ ಮೋದಿ 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದ ಗಲಭೆ ಆಧರಿಸಿದ ಸಾಕ್ಷ್ಯಚಿತ್ರ ಇದಾಗಿದೆ ಎನ್ನಲಾಗಿದೆ. ಸದ್ಯ ಅದು ದೆಹಲಿಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಸಂಬಂಧ ನಡೆಯುತ್ತಿರುವ ಬೆಳೆವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ವಿದ್ಯಾರ
ನವದೆಹಲಿ, ಜನವರಿ 25: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ನಿಷೇದಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಎಡಪಂಥೀಯ ಗುಂಪಿನ ಸದಸ್ಯರು ಒಳಗೊಂಡಂತೆ ಬ್ಯಾನರ್ ಹಿಡಿದು ಘೋಷಣೆ ಕೂಗುತ್ತಿದ್ದ 12ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡೆದ ಬಳಿಕ ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ತರಗತಿ ಅಮಾನತು ಮಾಡಲಾಗಿದೆ.
ವಿದ್ಯಾರ್ಥಿಗಳು ಸೇರಿದಂತೆ ಎಡಪಂಥೀಯರು ಗುಂಪು ಗೂಡುತ್ತಿದ್ದಂತೆ ಪೊಲೀಸರು ಮತ್ತು ಅಶ್ರುವಾಯು ಫಿರಂಗಿ ಸಹಿತ ಆಗ್ನೇಯ ದೆಹಲಿಯಲ್ಲಿರುವ ವಿಶ್ವವಿದ್ಯಾಲಯದ ಕಾಲೇಜಿಗೆ ಧಾವಿಸಿದರು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಯಿತು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಯ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಫೇಸ್‌ಬುಕ್‌ನಲ್ಲಿ ಸ್ಕ್ರೀನಿಂಗ್ ಘೋಷಿಸಿದ ನಂತರ ಕ್ಯಾಂಪಸ್‌ನಲ್ಲಿ ಯಾವುದೇ ಅನಧಿಕೃತವಾಗಿ ಗುಂಪು ಸೇರದಂತೆ ಆದೇಶಿಸಲಾಗಿತ್ತು. ಇದರ ಹೊರತಾಗಿಯು ಕಾಲೇಜು ಬಳಿ ವಿದ್ಯಾರ್ಥಿಗಳು ಜಮಾಯಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದ ಗಲಭೆ ಆಧರಿಸಿದ ಸಾಕ್ಷ್ಯಚಿತ್ರ ಇದಾಗಿದೆ ಎನ್ನಲಾಗಿದೆ. ಸದ್ಯ ಅದು ದೆಹಲಿಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಹೀಗಾಗಿ ಸರ್ಕಾರವು ಚಿತ್ರದ ಮೇಲೆ ಹಿಡಿತ ಸಾಧಿಸಿದ್ದು, ಮತ್ತು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಚಿತ್ರದ ಲಿಂಕ್ ಗಳನ್ನು ತೆಗೆದುಹಾಕುವಂತೆ ತಿಳಿಸಿದೆ. ಇದಕ್ಕೆ ಸಾಕಷ್ಟು ಆಕ್ಷೇಪಗಳು ವ್ಯಕ್ತವಾಗಿವೆ.

ವಿವಿಯಲ್ಲಿ ಶಾಂತಿ ಕದಡಂತೆ ಆಡಳಿತ ಮಂಡಳಿ ಕ್ರಮ
ಮಂಗಳವಾರ ಸಂಜೆ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಕೆಲವು ವಿದ್ಯಾರ್ಥಿಗಳು ಇದೇ ರೀತಿ ಸ್ಕ್ರೀನಿಂಗ್ ವ್ಯವಸ್ಥೆ ಆಯೋಜಿಸಿದ್ದರು. ಕೂಡಲೇ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಇಂಟರ್ನೆಟ್ ಮತ್ತು ವಿದ್ಯುತ್ ಸ್ಥಗಿತಗೊಳಿಸಲಾಯಿತು. ಇದಾದ ಬಳಿಕ ನೂರಾರು ಮಂದಿ ಮೊಬೈಲ್‌ಗಳಲ್ಲಿ, ತಮ್ಮ ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಮುಂದಾಗಿದ್ದರು. ಇದರಿಂದ ಕ್ಯಾಂಪಸ್‌ನಲ್ಲಿ ಶಾಂತಿ ಕದಡಬಹುದು ಎಂದು ಜೆಎನ್‌ಯು ಅಧಿಕಾರಿಗಳು ಸಾಕ್ಷ್ಯಚಿತ್ರ ಪ್ರದರ್ಶಿಸಿದರೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದರು.
ಈ ಎಲ್ಲ ಬೆಳೆವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಎಫ್‌ಐ ಸದಸ್ಯರೊಬ್ಬರು, ವಿದ್ಯಾರ್ಥಿಗಳು ಕಾನೂನುಬಾಹಿರವಾಗಿ ಯಾವುದನ್ನು ಮಾಡಿಲ್ಲ. ಸಾಕ್ಷ್ಯಚಿತ್ರವನ್ನು ಔಪಚಾರಿಕವಾಗಿ ನಿಷೇಧಿಸಲಾಗಿಲ್ಲ. ಹೀಗಿದ್ದರು ಪ್ರದರ್ಶನಕ್ಕೆ ಅಡ್ಡಿಪಡಿಸಲಾಗುತ್ತಿದೆ. ಇದು ವಿದ್ಯಾರ್ಥಿಗಳು ಪ್ರಶ್ನಿಸಲು, ಟೀಕಿಸಲು, ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು, ವಿಶ್ವದ ಅತಿದೊಡ್ಡ ಭಾರತದ ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾರಿ ಸಂಗತಿ ಎಂದು ಅವರು ಕಿಡಿ ಕಾರಿದರು.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಯು, ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕ್ಯಾಂಪಸ್‌ನಲ್ಲಿ ಯಾವುದೇ ವಿದ್ಯಾರ್ಥಿಗಳ ಕೂಟ/ಸಭೆ ಇಲ್ಲವೇ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿಲ್ಲ. ಈ ನಿಯಮ ಉಲ್ಲಂಘನೆಯಾದರೆ ಸಂಘಟಕರ ವಿರುದ್ಧ ಕಠಿಣ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ. ವಿಶ್ವವಿದ್ಯಾನಿಲಯದ ಶಾಂತಿಯುತ ಶೈಕ್ಷಣಿಕ ವಾತಾವರಣದ ನಾಶಕ್ಕೆ ಕಾರಣವಾಗಲಿರುವ ಪಟ್ಟಭದ್ರ ಹಿತಾಸಕ್ತಿ ವಿರುದ್ಧ ಅಗತ್ಯ ಕ್ರಮ ಜರುಗಿಸಿದ್ದೇವೆ ಎಂದು ತಿಳಿಸಿದೆ.
ಪ್ರಧಾನಿ ಮೋದಿ ಆರೋಪ ಮುಕ್ತ
ಪ್ರಧಾನಿ ಮೋದಿಯವರ ಸರ್ಕಾರವು ಎರಡು ಭಾಗಗಳಲ್ಲಿ ಸಾಕ್ಷ್ಯಚಿತ್ರ ಮಾಡಲಾಗಿದೆ. ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರು ಆರೋಪ ಮುಕ್ತರಾಗಿದ್ದಾರೆ. ಈಗಾಗಲೇ ಅವರ ವಿರುದ್ಧ ಮೇಲ್ಮನವಿಯನ್ನೂ ಸಹ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. 2002ರಲ್ಲಿ ಗುಜರಾತ್ ರಾಜ್ಯದಲ್ಲಿ ಮೂರು ದಿನ ನಡೆದ ಹಿಂಸಾಚಾರದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಗೋಧ್ರಾದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ರೈಲು ಬೋಗಿ ಬೆಂಕಿ ಹಚ್ಚಲಾಯಿತು. ಇದನ್ನು ತಡೆಯುವಲ್ಲಿ ಪೊಲೀಸರು ವಿಫಲರಾದರು. ಈ ಕುರಿತು ಆರೋಪ ಪ್ರಧಾನಿ ಮೋದಿ ಎದುರಿಸಿದ್ದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications