ಕತುವಾ, ಉನ್ನಾವೋ ಅತ್ಯಾಚಾರದ ಬಗ್ಗೆ ಮೌನ ಮುರಿದ ಮೋದಿ

ನವದೆಹಲಿ, ಏಪ್ರಿಲ್ 13: ದೇಶದೆಲ್ಲೆಡೆ ಭಾರಿ ಚರ್ಚೆಗೊಳಗಾಗಿ, ಜನಾಕ್ರೋಶಕ್ಕೆ ಈಡಾಗಿರುವ
ಉನ್ನಾವೋ ಮತ್ತು ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಈ ಬಗ್ಗೆ ಮೋದಿ ಅವರು ಪ್ರತಿಕ್ರಿಯೆ ನೀಡಿಲ್ಲವೆಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ, ಪ್ರತಿಕ್ರಿಯೆಗಳು ಹರಿದು ಬಂದಿತ್ತು.

ಇಂತಹ ಯಾವುದೇ ಅಪರಾಧ ಪ್ರಕರಣಗಳನ್ನು ನಾವು ಸಹಿಸುವುದಿಲ್ಲ. ಆರೋಪಿಗಳು ಇದರಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

PM Modi breaks silence on Kathua, Unnao rape cases

ಕಳೆದ ಎರಡು ದಿನಗಳಿಂದ ಚರ್ಚೆಗೆ ಗ್ರಾಸವಾಗಿರುವ ಎರಡೂ ಘಟನೆಗಳು ನಾಗರಿಕ ಸಮಾಜ, ಈ ಘಟನೆಗಳಿಂದ ಒಂದು ರಾಷ್ಟ್ರವಾಗಿ, ಸಮಾಜವಾಗಿ ನಾವೆಲ್ಲ ತಲೆತಗ್ಗಿಸಬೇಕಾಗಿದೆ. ಇಡೀ ದೇಶವೇ ನಾಚಿಕೆ ಪಡುವಂತೆ ಮಾಡಿದೆ. ಯಾವುದೇ ಅಪರಾಧಿಯನ್ನು ಉಳಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ನಮ್ಮ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಯೇ ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳ ವಿರುದ್ಧ ಜನತೆ ಕೂಡ ಹೋರಾಟ ನಡೆಸಬೇಕಿದೆ ಮನೆಯಲ್ಲಿ ಹೆಣ್ಣು ಮಕ್ಕಳನ್ನು ಮಾತ್ರ ಪ್ರಶ್ನಿಸಬೇಡಿ. ಗಂಡು ಮಕ್ಕಳನ್ನೂ ಪ್ರಶ್ನಿಸಿ ಎಂದು ಕೆಂಪುಕೋಟೆಯ ಭಾಷಣದಲ್ಲಿ ಹೇಳಿದ್ದೆ.


ಅತ್ಯಾಚಾರದಂತಹ ಕೃತ್ಯಗಳ ವಿರುದ್ಧ ಹೋರಾಟ ನಡೆಸಲು ನಾವು ನಮ್ಮ ಕೌಟುಂಬಿಕ, ಸಾಮಾಜಿಕ ಮೌಲ್ಯಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಗೊಳಿಸಬೇಕಿದೆ ಎಂದು ಕರೆ ನೀಡಿದರು.

ಇತ್ತ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನನ್ನು ಬಂಧನವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+