ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ನಿಯಂತ್ರಣಕ್ಕಾಗಿ ಲಸಿಕೆ ವಿತರಣೆಗೆ ವೇಗ ನೀಡಲು ಪ್ರಧಾನಿ ಕರೆ

|
Google Oneindia Kannada News

ನವದೆಹಲಿ, ಏಪ್ರಿಲ್ 27: ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆ ವಿತರಣೆಗೆ ವೇಗ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೊರೊನಾವೈರಸ್ ನಮ್ಮಿಂದ ದೂರ ಹೋಗಿದೆ ಎನ್ನುವ ಮನೋಭಾವವನ್ನು ಜನರು ಬಿಡಬೇಕು ಎಂದು ಸಲಹೆ ನೀಡಿದ್ದಾರೆ.

ಕೋವಿಡ್-19: ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಕೋವಿಡ್-19: ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ವ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದರು. ಸಣ್ಣ ಮಕ್ಕಳು ಸೇರಿದಂತೆ ಎಲ್ಲರಿಗೂ ಲಸಿಕೆ ನೀಡುವತ್ತ ಗಮನ ಹರಿಸುವಂತೆ ಸೂಚನೆ ನೀಡಿದರು.

ಭಾರತದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಉಪ ಪ್ರಬೇಧವು ಹೊಸ ಸವಾಲನ್ನು ತಂದೊಡ್ಡಿದೆ. ಈ ಹಿಂದೆ ಮೂರು ಅಲೆಗಳನ್ನು ಯಶಸ್ವಿಯಾಗಿ ಎದುರಿಸಿದ್ದು, ಈಗ ನಾಲ್ಕನೇ ಅಲೆಯನ್ನೂ ಸಮರ್ಥವಾಗಿ ಎದುರಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತದ ಎದುರಿಗೆ ಓಮಿಕ್ರಾನ್ ಸವಾಲು

ಭಾರತದ ಎದುರಿಗೆ ಓಮಿಕ್ರಾನ್ ಸವಾಲು

ಕೋವಿಡ್-19 ಬಿಕ್ಕಟ್ಟು ನಿರ್ವಹಣೆಯಲ್ಲಿ ಭಾರತವು ಬಹುತೇಕ ಯಶಸ್ವಿಯಾಗಿತ್ತು. ವಿದೇಶಗಳಿಗೆ ಹೋಲಿಸಿದರೆ ಈಗ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಈ ಹಂತದಲ್ಲಿ ನಾವು ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಕೋವಿಡ್-19 ಎನ್ನುವುದು ನಮ್ಮ ಪಾಲಿಗೆ ಸರ್ಪ್ರೈಸ್ ಅಂತೂ ಆಗಿರಲಿಲ್ಲ. ನಾವು ಅದರ ಜೊತೆಗೆ ಬದುಕಬೇಕಿದೆ. ಓಮಿಕ್ರಾನ್ ರೂಪಾಂತರ ಮತ್ತು ಉಪ ಪ್ರಬೇಧಗಳ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಾಗಿದೆ.

ದೇಶದಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ ಮತ್ತಷ್ಟು ವೇಗ

ದೇಶದಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ ಮತ್ತಷ್ಟು ವೇಗ

ಭಾರತದಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ ಮತ್ತಷ್ಟು ವೇಗ ನೀಡಬೇಕಾಗಿದೆ. ದೇಶದ ಅರ್ಹ ಫಲಾನುಭವಿಗಳಲ್ಲಿ ಶೇ. 96ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆಯನ್ನು ನೀಡಿದ್ದಾರೆ. 15 ವರ್ಷಕ್ಕಿಂತ ಮೇಲ್ಪಟ್ಟ ಅರ್ಹರಲ್ಲಿ ಶೇ.85ರಷ್ಟು ಜನರು ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

5 ವರ್ಷ ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ

5 ವರ್ಷ ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ವಿತರಿಸುವುದಕ್ಕೆ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರ ಮಂಗಳವಾರ ಅನುಮೋದನೆ ನೀಡಿದೆ. ದೇಶದಲ್ಲಿ 6 ರಿಂದ 12 ವರ್ಷ ಮಕ್ಕಳನ್ನು ಕೋವಿಡ್-19 ಸೋಂಕಿನಿಂದ ರಕ್ಷಿಸವುದಕ್ಕಾಗಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಕೊವ್ಯಾಕ್ಸಿನ್ ಲಸಿಕೆಯ ಜೊತೆಗೆ ಮತ್ತೊಂದು ಲಸಿಕೆಗೂ ಅನುಮೋದನೆ ನೀಡಲಾಗಿದೆ. ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿಯು ಬಯೋಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯನ್ನು 5 ರಿಂದ 11 ವರ್ಷದ ಮಕ್ಕಳ ಮೇಲೆ ತುರ್ತು ಬಳಸುವುದಕ್ಕೆ ಅನುಮೋದನೆ ನೀಡಲಾಗಿದೆ. ಆ ಮೂಲಕ 5 ವರ್ಷ ಮೇಲ್ಪಟ್ಟ ಮಕ್ಕಳಿಗೂ ಕೋವಿಡ್-19 ಲಸಿಕೆಯನ್ನು ಸಮರೋಪಾದಿಯಲ್ಲಿ ನೀಡುವುದಕ್ಕೆ ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ.

'ವಸುಧೈವ ಕುಟುಂಬಕಂ' ಬಗ್ಗೆ ಉಲ್ಲೇಖಿಸಿದ ಪ್ರಧಾನಿ ಮೋದಿ

'ವಸುಧೈವ ಕುಟುಂಬಕಂ' ಬಗ್ಗೆ ಉಲ್ಲೇಖಿಸಿದ ಪ್ರಧಾನಿ ಮೋದಿ

ನವದೆಹಲಿ, ಏಪ್ರಿಲ್ 27: ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆ ವಿತರಣೆಗೆ ವೇಗ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೊರೊನಾವೈರಸ್ ನಮ್ಮಿಂದ ದೂರ ಹೋಗಿದೆ ಎನ್ನುವ ಮನೋಭಾವವನ್ನು ಜನರು ಬಿಡಬೇಕು ಎಂದು ಸಲಹೆ ನೀಡಿದ್ದಾರೆ.

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ವ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದರು. ಸಣ್ಣ ಮಕ್ಕಳು ಸೇರಿದಂತೆ ಎಲ್ಲರಿಗೂ ಲಸಿಕೆ ನೀಡುವತ್ತ ಗಮನ ಹರಿಸುವಂತೆ ಸೂಚನೆ ನೀಡಿದರು.

ಭಾರತದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಉಪ ಪ್ರಬೇಧವು ಹೊಸ ಸವಾಲನ್ನು ತಂದೊಡ್ಡಿದೆ. ಈ ಹಿಂದೆ ಮೂರು ಅಲೆಗಳನ್ನು ಯಶಸ್ವಿಯಾಗಿ ಎದುರಿಸಿದ್ದು, ಈಗ ನಾಲ್ಕನೇ ಅಲೆಯನ್ನೂ ಸಮರ್ಥವಾಗಿ ಎದುರಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

English summary
PM Modi Calls to Speed up Covid-19 Vaccination Across India Amid Fourth Wave Fear.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X