ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

PM Modi on Siddeshwara Swamiji : ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ:

|
Google Oneindia Kannada News

ನವದೆಹಲಿ: ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ನಿಧನ ನಾಡಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ. ನಡೆದಾಡುವ ದೇವರೆಂದೇ ಪ್ರಸಿದ್ಧಿ ಪಡೆದಿದ್ದ ಸ್ವಾಮೀಜಿಗಳ ಸಾವಿಗೆ ದೇಶದಾದ್ಯಂತ ಪ್ರಮುಖ ಗಣ್ಯರು ಕಂಬನಿ ಮಿಡಿದಿದ್ದಾರೆ.

ಶ್ರೀ ಸಿದ್ಧೇಶ್ವರ ಶ್ರೀಗಳು ಸಮಾಜಕ್ಕೆ ನೀಡಿರುವ ಅಪಾರ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಕನ್ನಡದಲ್ಲಿ ಟ್ವೀಟ್‌ ಮಾಡಿರುವ ಮೋದಿ, ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

PM Modi condoles Siddheshwara Swamis death, hails his outstanding service to society

'ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ' ಎಂದು ತಿಳಿಸಿದ್ದಾರೆ. ಈ ಟ್ವೀಟ್‌ನೊಂದಿಗೆ ಸಿದ್ದೇಶ್ವರ ಸ್ವಾಮೀಜಿಗಳೊಂದಿಗೆ ಮೋದಿ ಅವರು ತೆಗೆಸಿಕೊಂಡಿದ್ದ ಫೋಟೊಗಳನ್ನೂ ಹಂಚಿಕೊಂಡಿದ್ದಾರೆ.

ಕಳೆದ ವರ್ಷದ ಕೊನೆಯಲ್ಲಿ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ತಾವು ಬರೆದ ಆದ್ಯಾತ್ಮಿಕ ಪುಸ್ತಕಗಳನ್ನು ಪ್ರಧಾನಿ ಮೋದಿ ಅವರಿಗೆ ಉಡುಗೊರೆಯಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನೀಡಿದ್ದರು.

PM Modi condoles Siddheshwara Swamis death, hails his outstanding service to society

ಸಿದ್ದೇಶ್ವರ ಶ್ರೀಗಳು ಅಪಾರ ಭಕ್ತರನ್ನು ಹೊಂದಿದ್ದು, ಇಂದು ಅವರ ಪಾರ್ಥಿವ ಶರೀರದ ಅಂತಿಮ ಮೆರವಣಿಗೆ ವಿಜಯಪುರದಲ್ಲಿ ನಡೆಯಲಿದೆ. ಲಕ್ಷಾಂತರ ಭಕ್ತರು ಸೇರುವ ಸಾಧ್ಯತೆ ಇದೆ.

ಇಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರಕ್ಕೆ ತೆರಳಿ ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

PM Modi condoles Siddheshwara Swamis death, hails his outstanding service to society

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಾಡಿನ ಪ್ರಮುಖ ನಾಯಕರು ಸಿದ್ದೇಶ್ವರ ಸ್ವಾಮೀಜಿಗಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಅವರ ಸಾವು ನಾಡಿಗೆ ತುಂಬಲಾರದ ನಷ್ಟವೆಂದು ಹೇಳಿದ್ದಾರೆ.

ಸಿದ್ದೇಶ್ವರ ಸ್ವಾಮೀಜಿಗಳು ಕಳೆದ ವಾರದಿಂದ ಅನಾರೋಗ್ಯಕ್ಕೆ ಈಡಾಗಿದ್ದರು. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ನಾಡಿನ ಪ್ರಮುಖ ರಾಜಕೀಯ ನಾಯಕರು ಸಿದ್ದೇಶ್ವರ ಸ್ವಾಮೀಜಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಸ್ವಾಮೀಜಿಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದರು. ಸ್ವಾಮೀಜಿಗಳ ಶೀಘ್ರ ಚೇತರಿಕೆಗೆ ಅವರ ಅಪಾರ ಸಂಖ್ಯೆಯ ಭಕ್ತರು ಪ್ರಾರ್ಥಣೆ ಸಲ್ಲಿಸಿದ್ದರು.

English summary
Prime Minister Narendra Modi tweeted that Shri Siddeshwar Shri will be remembered for his immense service to the society,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X