ಅಜ್ಮೇರ್ ಸಂಸದ ಸನ್ವಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Posted By:
Subscribe to Oneindia Kannada

ನವದೆಹಲಿ, ಆಗಸ್ಟ್ 09: ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಜಲ ಸಂಪನ್ಮೂಲ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಸನ್ವರ್ ಲಾಲ್ ಜಾಟ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಅವರಿಗೆ 62 ವರ್ಷ ವಯಸ್ಸಾಗಿತ್ತು.

ಜಾಟ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

PM condoles the demise of MP Shri Sanwar Lal Jat

ಕೇಂದ್ರದ ಮಾಜಿ ರಾಜ್ಯ ಸಚಿವ ಹಾಗೂ ಅಜ್ಮೀರ್‍ ಸಂಸದ ಸನ್ವರ್ ಲಾಲ್ ಜಾಟ್ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಆಸ್ಪತ್ರೆಯಲ್ಲಿ ಕೆಲಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

"ಕೇಂದ್ರದ ಮಾಜಿ ಸಚಿವ ಹಾಗೂ ಸಂಸತ್ ಸದಸ್ಯ ಶ್ರೀ ಸನ್ವಾರ್ ಲಾಲ್ ಜಾಟ್ ನಿಧನದಿಂದ ದುಃಖಿತನಾಗಿದ್ದೇನೆ. ಇದು ಬಿಜೆಪಿಗೆ ಮತ್ತು ದೇಶಕ್ಕೆ ದೊಡ್ಡ ನಷ್ಟ. ನನ್ನ ಸಂತಾಪಗಳು.

Narendra Modi on Twitter requested people to build New India | Oneindia Kannada

ಸನ್ವಾರ್ ಲಾಲ್ ಜಾಟ್ ಅವರು ರೈತರ ಮತ್ತು ಗ್ರಾಮಗಳ ಒಳಿತಿಗಾಗಿ ಶ್ರಮಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ", ಎಂದು ಪ್ರಧಾನಿ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Prime Minister, Narendra Modi has condoled the demise of MP and former Union Minister, Shri Sanwar Lal Jat.
Please Wait while comments are loading...