ಭಾರತದಲ್ಲಿ 150 ಕೋಟಿ ಡೋಸ್ ಲಸಿಕೆ ವಿತರಣೆಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ, ಜನವರಿ 7: ಭಾರತದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಆತಂಕದ ನಡುವೆ 150 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
Recommended Video
"ನಮ್ಮ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿರುವ ಎಲ್ಲರಿಗೂ ಭಾರತ ಕೃತಜ್ಞವಾಗಿದೆ. ಜನರಿಗೆ ಲಸಿಕೆ ಹಾಕುತ್ತಿರುವ ನಮ್ಮ ವೈದ್ಯರು, ವಿಜ್ಞಾನಿಗಳು, ನಾವೀನ್ಯಕಾರರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ಎಲ್ಲಾ ಅರ್ಹರು ತಮ್ಮ ಹೊಡೆತಗಳನ್ನು ಪಡೆಯಲು ನಾನು ಒತ್ತಾಯಿಸುತ್ತೇನೆ. ಒಟ್ಟಾಗಿ, COVID-19 ವಿರುದ್ಧ ಹೋರಾಡೋಣ," ಎಂದು ಪ್ರಧಾನಮಂತ್ರಿ ಮೋದಿ ಟ್ವೀಟ್ ಮಾಡಿದ್ದಾರೆ.

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತ ಹೊಸ ದಾಖಲೆ ಬರೆದಿದೆ. ಜನವರಿ 7ರ ರಾತ್ರಿ 7 ಗಂಟೆ ವೇಳೆಗೆ 1,50,52,21,314 ಡೋಸ್ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 357 ದಿನಗಳಾಗಿದ್ದು, ಶುಕ್ರವಾರ ಮಧ್ಯಾಹ್ನ 7 ಗಂಟೆ ವೇಳೆಗೆ 81,50,982 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಲಸಿಕೆ ವಿತರಣೆಯಲ್ಲಿ ಗಮನಾರ್ಹ ದಿನ:
"ಇದು ಲಸಿಕೆ ವಿತರಣೆಯಲ್ಲಿ ಗಮನಾರ್ಹ ದಿನವಾಗಿದೆ. 150 ಕೋಟಿ ಮೈಲಿಗಲ್ಲನ್ನು ದಾಟಿದ ನಮ್ಮ ಸಹ ನಾಗರಿಕರಿಗೆ ಅಭಿನಂದನೆಗಳು. ನಮ್ಮ ಲಸಿಕೆ ವಿತರಣೆಯು ಅನೇಕ ಜೀವಗಳನ್ನು ಉಳಿಸಿದೆ ಎಂಬುದನ್ನು ದೃಢಪಡಿಸಿದೆ. ಇದೇ ವೇಳೆ ನಾವು ಎಲ್ಲಾ COVID-19 ಸಂಬಂಧಿತ ಶಿಷ್ಟಾಚಾರಗಳನ್ನು ಪಾಲಿಸೋಣ," ಎಂದು ಪ್ರಧಾನಮಂತ್ರಿ ಮೋದಿ ಟ್ವೀಟ್ ಮಾಡಿದ್ದಾರೆ.
150 ಕೋಟಿ ಡೋಸ್ ಲಸಿಕೆ ವಿತರಣೆ:
ಭಾರತದಲ್ಲಿ ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಒಂದೇ ದಿನ 81,50,982 ಡೋಸ್ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 1,50,52,21,314 ಡೋಸ್ ಲಸಿಕೆ ವಿತರಿಸಲಾಗಿದೆ. ಈ ಪೈಕಿ 878031738 ಜನರಿಗೆ ಮೊದಲ ಡೋಸ್ ಹಾಗೂ 627189576 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಕೊರೊನಾವೈರಸ್ ಲಸಿಕೆ ವಿತರಣೆ ಹಂತಗಳು:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.
ದೇಶದಲ್ಲಿ ಓಮಿಕ್ರಾನ್ ರೂಪಾಂತರ ಸೋಂಕಿನ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 3ರಿಂದ 15 ರಿಂದ 17 ವರ್ಷದ ಮಕ್ಕಳಿಗೂ ಕೊವಿಡ್-19 ಲಸಿಕೆ ವಿತರಿಸುವುದಕ್ಕೆ ಆರಂಭಿಸಲಾಗಿದೆ. ಇದರ ಜೊತೆಗೆ ಜನವರಿ 10ರಿಂದ ದೇಶದ ಆರೋಗ್ಯ ಕಾರ್ಯಕರ್ತರು ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.












Click it and Unblock the Notifications