Terror Attack: ಪಹಲ್ಗಾಮ್ ಉಗ್ರರ ದಾಳಿ; ಸೌದಿ ಅರೇಬಿಯಾ ಮೊಟಕುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಸ್

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ, ಕಳೆದ ಕೆಲವು ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದಲ್ಲಿದ್ದು, ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಕಾಶ್ಮೀರದ ಪ್ರಮುಖ ನಗರವಾದ ಶ್ರೀನಗರದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಹೀನ ಕೃತ್ಯ ನಡೆಸಲಾಗಿದೆ. ಏಕಾಏಕಿ ಬಂದೂಕುಗಳನ್ನು ಹಿಡಿದು ನುಗ್ಗಿದ ಉಗ್ರರು, ಪ್ರವಾಸಿಗರ ಧರ್ಮ ಯಾವುದು ಎಂದು ಪ್ರಶ್ನೆ ಮಾಡಿದ್ದು ಹಿಂದೂಗಳು ಎಂದು ಖಚಿತಪಡಿಸಿಕೊಂಡ ನಂತರವೇ ಹತ್ಯೆ ಮಾಡಿದ್ದಾರೆ.

pm modi cuts short saudi trip after jk terror attack return india

ಪ್ರಧಾನಿ ಮೋದಿ ಖಂಡನೆ

ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಇಂತಹ ಭಯೋತ್ಪಾದಕ ದಾಳಿಗಳಿಂದ ಅವರ ಉದ್ದೇಶ ಈಡೇರುವುದಿಲ್ಲ ಎಂದಿದ್ದಾರೆ. ಈ ಕೃತ್ಯದ ಹಿಂದಿರುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ಕೊಟ್ಟಿದ್ದಾರೆ.

ಅಮಿತ್ ಶಾ ಕೂಡ ಘಟನೆಯನ್ನು ಖಂಡಿಸಿದ್ದು ಅಧಿಕಾರಿಗಳ ಜೊತೆ ಸಭೆ ನಡೆಸಿ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ. ಬುಧವಾರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಅಮಿತ್ ಶಾ ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ, ಸೇನಾ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.

ಕರ್ನಾಟಕದಿಂದ ಕಾಶ್ಮಿರಕ್ಕೆ ವಿಶೇಷ ತಂಡ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+