ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೋಜ್‌ಗಾರ್ ಮೇಳದಲ್ಲಿ 71,000 ಆಫರ್‌ ಲೆಟರ್‌ ನೀಡಿದ ಪಿಎಂ ಮೋದಿ

|
Google Oneindia Kannada News

ನವದೆಹಲಿ, ನವೆಂಬರ್‌ 22: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ರೋಜ್‌ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 71,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಸ್ತಾಂತರಿಸಿದರು.

ಬಳಿಕ ಪ್ರಧಾನಿ ಮೋದಿ ಅವರು ಹೊಸದಾಗಿ ನೇಮಕಗೊಂಡವರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು. ಶಿಕ್ಷಕರು, ಉಪನ್ಯಾಸಕರು, ದಾದಿಯರು, ನರ್ಸಿಂಗ್ ಅಧಿಕಾರಿಗಳು, ವೈದ್ಯರು, ಔಷಧಿಗಾರರು, ರೇಡಿಯೋಗ್ರಾಫರ್‌ಗಳು ಮತ್ತು ಇತರ ತಾಂತ್ರಿಕ ಮತ್ತು ಅರೆವೈದ್ಯಕೀಯ ಹುದ್ದೆಗಳಂತಹ ಹಲವಾರು ವಿಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಯಿತು.

ಚಿತ್ರದುರ್ಗದಲ್ಲಿ ನವೆಂಬರ್‌ 4ರಂದು ಉದ್ಯೋಗ ಮೇಳ, ನೇರ ಸಂದರ್ಶನಚಿತ್ರದುರ್ಗದಲ್ಲಿ ನವೆಂಬರ್‌ 4ರಂದು ಉದ್ಯೋಗ ಮೇಳ, ನೇರ ಸಂದರ್ಶನ

ಇದು ಅಕ್ಟೋಬರ್‌ನಲ್ಲಿ ಸರ್ಕಾರದಿಂದ ನೀಡಲಾದ 75,000 ನೇಮಕಾತಿ ಪತ್ರಗಳಿಗೆ ಹೆಚ್ಚುವರಿ ನೇಮಕ ಪ್ರತಗಳಾಗಿದೆ. ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್‌) ಗೃಹ ವ್ಯವಹಾರಗಳ ಸಚಿವಾಲಯವು ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನ ಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳ ಒಂದು ಮಹತ್ವದ ಹೆಜ್ಜೆಯಾಗಿದೆ.

PM Modi gave 71,000 offer letters at Rozgar Mela

ಪ್ರಧಾನ ಮಂತ್ರಿಯವರು ಕರ್ಮಯೋಗಿ ಪ್ರಾರಂಭ್ ಮಾಡ್ಯೂಲ್ ಅನ್ನು ಪ್ರಾರಂಭಿಸಿದರು. ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಿಗಾಗಿ ಆನ್‌ಲೈನ್ ಓರಿಯಂಟೇಶನ್ ಕೋರ್ಸ್ ಆಗಿದೆ. ಪ್ರಾರಂಭ್ ಮಾಡ್ಯೂಲ್ ಸರ್ಕಾರಿ ಸೇವಕರಿಗೆ ನೀತಿ ಸಂಹಿತೆ, ಕಾರ್ಯಸ್ಥಳದ ನೈತಿಕತೆ ಮತ್ತು ಸಮಗ್ರತೆ, ಮಾನವ ಸಂಪನ್ಮೂಲ ನೀತಿಗಳು ಮತ್ತು ಇತರ ಪ್ರಯೋಜನಗಳು ಮತ್ತು ಭತ್ಯೆಗಳನ್ನು ಒಳಗೊಂಡಿದೆ. ಅದು ನೀತಿಗಳಿಗೆ ಒಗ್ಗಿಕೊಳ್ಳಲು ಮತ್ತು ಹೊಸ ಉದ್ಯೋಗಗಳಿಗೆ ಸರಾಗವಾಗಿ ಪರಿವರ್ತನೆಗೊಳ್ಳಲು ಸಹಾಯ ಮಾಡುತ್ತದೆ.

PM Modi gave 71,000 offer letters at Rozgar Mela

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಹೊರತುಪಡಿಸಿ, ದೇಶಾದ್ಯಂತ 45 ಸ್ಥಳಗಳಲ್ಲಿ ನೇಮಕಾತಿ ಪತ್ರಗಳ ಭೌತಿಕ ಪ್ರತಿಗಳನ್ನು ಹಸ್ತಾಂತರಿಸಲಾಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯ ಪ್ರಕಾರ ಅವರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಚಾಲನೆ ಒಂದು ಹೆಜ್ಜೆಯಾಗಿದೆ ಮತ್ತು ಇದು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅವಕಾಶಗಳನ್ನು ನೀಡುವಲ್ಲಿ ನೇರವಾಗಿ ವೇಗವರ್ಧಕವಾಗಿರುತ್ತದೆ ಎಂದು ಭಾವಿಸಲಾಗಿದೆ.

English summary
Prime Minister Narendra Modi on Tuesday handed over appointment letters to around 71,000 newly recruited candidates under the Rozgar Mela through video conferencing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X