ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೂರತ್‌ನಲ್ಲಿ 3,400 ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

|
Google Oneindia Kannada News

ಸೂರತ್, ಸೆಪ್ಟೆಂಬರ್ 29: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗುಜರಾತ್‌ನ ಸೂರತ್‌ನಲ್ಲಿ 3,400 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು. ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿರುವ ಅವರು, ರಾಜ್ಯದಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಸೂರತ್‌ಗೆ ಆಗಮಿಸಿದ ಪ್ರಧಾನಿಯವರನ್ನು ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದರು. ನವರಾತ್ರಿಯ ಈ ಸಮಯದಲ್ಲಿ ಮೋದಿ ಆಗಮನ ಸೂರತ್‌ನಲ್ಲಿ ಮತ್ತಷ್ಟು ಹಬ್ಬದ ಕಳೆಯನ್ನು ಹೆಚ್ಚಿಸಿದೆ.

"ಗುಜರಾತ್‌ನಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆಯಾದ ನಂತರ, ಮನೆಗಳ ನಿರ್ಮಾಣವೂ ವೇಗಗೊಂಡಿದೆ. ಸೂರತ್‌ನಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು 4 ಕೋಟಿ ಬಡ ರೋಗಿಗಳು ಉಚಿತ ಚಿಕಿತ್ಸೆ ಪಡೆದಿದ್ದಾರೆ" ಎಂದು ಪ್ರಧಾನಿ ಮೋದಿ ಹೇಳಿದರು.

ನ್ಯಾಷನಲ್ ಗೇಮ್ಸ್ ಉದ್ಘಾಟನೆ: ಆಕರ್ಷಕ ಡ್ರೋನ್ ಶೋ ಬಗ್ಗೆ ಮೋದಿ ಟ್ವೀಟ್ನ್ಯಾಷನಲ್ ಗೇಮ್ಸ್ ಉದ್ಘಾಟನೆ: ಆಕರ್ಷಕ ಡ್ರೋನ್ ಶೋ ಬಗ್ಗೆ ಮೋದಿ ಟ್ವೀಟ್

4 ಕೋಟಿ ಜನರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ

ಭಾರತದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ 4 ಕೋಟಿಗೂ ಹೆಚ್ಚು ಜನರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾರೆ. ಈ ಪೈಕಿ 32 ಲಕ್ಷ ಗುಜರಾತ್‌ನವರು ಮತ್ತು 1.25 ಲಕ್ಷ ಸೂರತ್‌ನವರು ಎಂದು ಪ್ರಧಾನಿ ಮೋದಿ ಹೇಳಿದರು. ಗುಜರಾತ್ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿ ಬುಧವಾರ ಅಹಮದಾಬಾದ್‌ನಲ್ಲಿ ಡ್ರೋನ್ ಪ್ರದರ್ಶನದ ಚಿತ್ರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದು ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನೆಗೆ ಅಹಮದಾಬಾದ್ ಸಿದ್ಧವಾಗಿರುವುದನ್ನು ತೋರಿಸುತ್ತದೆ.

ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಗುಜರಾತ್‌ನಲ್ಲಿ ಮೂಲಸೌಕರ್ಯ, ಕ್ರೀಡೆ ಮತ್ತು ಆಧ್ಯಾತ್ಮಿಕ ತಾಣಗಳಿಗೆ ಅಡಿಪಾಯ ಹಾಕುವುದು ನನ್ನ ಗುರಿ. ಸೂರತ್ ಜನ ಏಕತೆಗೆ ಉತ್ತಮ ಉದಾಹರಣೆಯಾಗಿದ್ದಾರೆ. ಭಾರತದಾದ್ಯಂತ ಇಂತಹ ಜನರು ವಾಸಿಸುತ್ತಿದ್ದಾರೆ. ಸೂರತ್‌ ಈ ವಿಚಾರದಲ್ಲಿ ಮಿನಿ-ಇಂಡಿಯಾ ಆಗಿದೆ" ಎಂದರು.

ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ

ಸೂರತ್‌ನಲ್ಲಿ ಪ್ರಧಾನ ಮಂತ್ರಿ ಪ್ರಧಾನಮಂತ್ರಿ ಅವರು 3400 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಲೋಕಾರ್ಪಣೆಗೊಳಿಸಿದರು. ಇವುಗಳಲ್ಲಿ ನೀರು ಸರಬರಾಜು, ಒಳಚರಂಡಿ ಯೋಜನೆಗಳು, ಡ್ರೀಮ್ ಸಿಟಿ, ಜೀವವೈವಿಧ್ಯ ಉದ್ಯಾನವನ ಮತ್ತು ಸಾರ್ವಜನಿಕ ಮೂಲಸೌಕರ್ಯ, ಪಾರಂಪರಿಕ ಪುನರುಜ್ಜೀವನ, ಸಿಟಿ ಬಸ್/ ಬಿಆರ್ ಟಿಎಸ್ ಮೂಲಸೌಕರ್ಯ, ಎಲೆಕ್ಟ್ರಿಕ್ ವಾಹನ ಮೂಲಸೌಕರ್ಯ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಅಭಿವೃದ್ಧಿ ಕಾರ್ಯಗಳಂತಹ ಇತರ ಅಭಿವೃದ್ಧಿ ಕಾಮಗಾರಿಗಳು ಸೇರಿವೆ.

29,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿರುವ ಮೋದಿ29,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿರುವ ಮೋದಿ

ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ

ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡುತ್ತಿರುವ ಡೈನಾಮಿಕ್ ಸಿಟಿ ಸೂರತ್‌ನಲ್ಲಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು. ಗುರುವಾರ ಮತ್ತು ಶುಕ್ರವಾರದಂದು ಅಹಮದಾಬಾದ್, ಗಾಂಧಿನಗರ, ಸೂರತ್, ಭಾವನಗರ ಮತ್ತು ಅಂಬಾಜಿಗೆ ಪ್ರಧಾನಿ ಭೇಟಿ ನೀಡಲಿದ್ದು, ಅಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಸೂರತ್ ನಗರವು ಜನರ ಒಗ್ಗಟ್ಟು ಮತ್ತು ಸಾರ್ವಜನಿಕ ಸಹಭಾಗಿತ್ವ ಎರಡಕ್ಕೂ ಅದ್ಭುತ ಉದಾಹರಣೆಯಾಗಿದೆ. ಸೂರತ್‌ನ ಅಭಿವೃದ್ಧಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ, "ಸೂರತ್‌ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ನಗರದ ಸಂಸ್ಕೃತಿ, ಸಮೃದ್ಧಿ ಮತ್ತು ಆಧುನಿಕತೆಯನ್ನು ಪ್ರತಿಬಿಂಬಿಸುತ್ತದೆ. ಸೂರತ್‌ಗೆ ವಿಮಾನ ನಿಲ್ದಾಣ ಏಕೆ ಬೇಕು ಮತ್ತು ಈ ನಗರದ ಶಕ್ತಿ ಏನು ಎಂದು ಅಂದಿನ ದೆಹಲಿ ಸರ್ಕಾರಕ್ಕೆ ಹೇಳಲು ನಾವು ಸುಸ್ತಾಗಿದ್ದೇವೆ. ಇಂದು, ಇಲ್ಲಿಂದ ಹಲವಾರು ವಿಮಾನಗಳು ಹೊರಡುತ್ತವೆ" ಎಂದು ಮೋದಿ ಹೇಳಿದರು.

ಸೂರತ್ ಎಲೆಕ್ಟ್ರಿಕಲ್ ವಾಹನಗಳಿಗೆ ಹೆಸರುವಾಸಿ

ಸೂರತ್ ಎಲೆಕ್ಟ್ರಿಕಲ್ ವಾಹನಗಳಿಗೆ ಹೆಸರುವಾಸಿ

ಸೂರತ್ ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ ಎಂದು ಶ್ಲಾಘಿಸಿದ ಪ್ರಧಾನಿ ಮೋದಿ, "ಸೂರತ್ ಎಲೆಕ್ಟ್ರಿಕಲ್ ವಾಹನಗಳಿಗೆ ಹೆಸರುವಾಸಿಯಾಗಲಿದೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕೆಲಸ ಮಾಡುತ್ತಿದೆ. ಇಲ್ಲಿ 500 ಕ್ಕೂ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲಾಗುವುದು. ಇಲ್ಲಿ ನಾವು ಅಭಿವೃದ್ಧಿಯ ಈ ವೇಗವನ್ನು ಮುಂದುವರಿಸುತ್ತೇವೆ" ಎಂದು ಮೋದಿ ಹೇಳಿದ್ದಾರೆ.

ಡೈಮಂಡ್ ರಿಸರ್ಚ್ ಅಂಡ್ ಮರ್ಕೆಂಟೈಲ್ (ಡ್ರೀಮ್) ಸಿಟಿ ಯೋಜನೆಯು ಸೂರತ್ ಅನ್ನು ಜಗತ್ತಿನಾದ್ಯಂತ ಸುರಕ್ಷಿತ ಮತ್ತು ಅನುಕೂಲಕರ ವಜ್ರದ ವ್ಯಾಪಾರ ಕೇಂದ್ರವಾಗಿ ಹೊರಹೊಮ್ಮಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಡಿಸೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನವೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು ಭಾರೀ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿ ಸುಮಾರು ಮೂರು ದಶಕಗಳ ಕಾಲ ಆಡಳಿತ ನಡೆಸಿದೆ.

English summary
Inaugurating projects worth Rs 3,400 crore in Surat, PM Modi hails double engine Govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X