Delhi-Mumbai Expressway: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ 246 ಕಿಮೀ ಮಾರ್ಗಕ್ಕೆ ಚಾಲನೆ ನೀಡಿದ ಪ್ರಧಾನಿ
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ 1,386 ಕಿಮೀ ಉದ್ದವಿದ್ದು, ಭಾರತದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಆಗಿದೆ.
ಜೈಪುರ, ಫೆಬ್ರವರಿ. 12: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ರಾಜಸ್ಥಾನದ ದೌಸಾದಿಂದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ 246 -ಕಿಮೀ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗವನ್ನು ಉದ್ಘಾಟಿಸಿದ್ದಾರೆ.
ರಾಷ್ಟ್ರ ರಾಜಧಾನಿಯಿಂದ ಜೈಪುರಕ್ಕೆ ಪ್ರಯಾಣದ ಸಮಯವನ್ನು ಐದು ಗಂಟೆಯಿಂದ ಸುಮಾರು ಮೂರೂವರೆ ಗಂಟೆಗೆ ಈ ಮಾರ್ಗ ಇಳಿಸಲಿದೆ. ಪ್ರಧಾನಿ ಮೋದಿ ವರ್ಚುವಲ್ ಆಗಿ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗದ ಉದ್ಘಾಟನೆಯನ್ನು ಮಾಡಿದ್ದಾರೆ.
12,150 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಅಭಿವೃದ್ಧಿಪಡಿಸಲಾಗಿದ್ದು, ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಈ ಮೊದಲ ವಿಭಾಗವು ಇಡೀ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಉತ್ತೇಜನವನ್ನು ನೀಡುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ 1,386 ಕಿಮೀ ಉದ್ದವಿದ್ದು, ಭಾರತದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಆಗಿದೆ. ಇದು ದೆಹಲಿ ಮತ್ತು ಮುಂಬೈ ನಡುವಿನ ಪ್ರಯಾಣದ ದೂರವನ್ನು 1,424 ಕಿಮೀ ನಿಂದ 1,242 ಕಿಮೀ ಅಂದರೆ ಶೇಕಡಾ 12 ರಷ್ಟು ಕಡಿಮೆ ಮಾಡುತ್ತದೆ. ಆದರೆ ಪ್ರಯಾಣದ ಸಮಯವನ್ನು ಶೇಕಡಾ 50 ರಷ್ಟು ಕಡಿತಗೊಳಿಸುತ್ತದೆ. ಪ್ರಸ್ತುತ ದೆಹಲಿ ಮತ್ತು ಮುಂಬೈ ನಡುವಿನ ಪ್ರಯಾಣದ ಸಮಯ 24 ಗಂಟೆಗಳಿದ್ದು, ಈ ದೂರವನ್ನು 12 ಗಂಟೆಗಳಿಗೆ ಇಳಿಸುತ್ತದೆ.
ಈ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಆರು ರಾಜ್ಯಗಳ ಮೂಲಕ ಹಾದುಹೋಗುತ್ತದೆ. ಜೊತೆಗೆ ಕೋಟಾ, ಇಂದೋರ್, ಜೈಪುರ, ಭೋಪಾಲ್, ವಡೋದರಾ ಮತ್ತು ಸೂರತ್‌ನಂತಹ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ.
ಇದು 93 ಪಿಎಂ ಗತಿ ಶಕ್ತಿ ಆರ್ಥಿಕ ನೋಡ್‌ಗಳು, 13 ಬಂದರುಗಳು, ಎಂಟು ಪ್ರಮುಖ ವಿಮಾನ ನಿಲ್ದಾಣಗಳು ಮತ್ತು ಎಂಟು ಬಹು-ಮಾದರಿ ಲಾಜಿಸ್ಟಿಕ್ಸ್ ಪಾರ್ಕ್‌ಗಳು ಜೊತೆಗೆ ಮುಂಬರುವ ಹೊಸ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳಾದ ಜೆವಾರ್ ಏರ್‌ಪೋರ್ಟ್, ನವಿ ಮುಂಬೈ ಏರ್‌ಪೋರ್ಟ್ ಮತ್ತು ಜೆಎನ್‌ಪಿಟಿ ಪೋರ್ಟ್‌ಗಳಿಗೆ ಸಹ ಸೇವೆ ಸಲ್ಲಿಸುತ್ತದೆ.

ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ದೌಸಾದಿಂದ 18,100 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ 5,940 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಿರುವ 247 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಪ್ರಧಾನಿ ಕಚೇರಿಯ ಪ್ರಕಾರ, ನವ ಭಾರತದಲ್ಲಿ ಬೆಳವಣಿಗೆ, ಅಭಿವೃದ್ಧಿ ಮತ್ತು ಸಂಪರ್ಕದ ಎಂಜಿನ್‌ನಂತೆ ಅತ್ಯುತ್ತಮ ರಸ್ತೆ ಮೂಲಸೌಕರ್ಯವನ್ನು ನಿರ್ಮಿಸಲು ಮೋದಿಯವರು ಒತ್ತು ನೀಡಿದ್ದು, ದೇಶಾದ್ಯಂತ ನಡೆಯುತ್ತಿರುವ ಹಲವಾರು ವಿಶ್ವ ದರ್ಜೆಯ ಎಕ್ಸ್‌ಪ್ರೆಸ್‌ವೇಗಳ ನಿರ್ಮಾಣದಿಂದ ಅದು ಸಾಕಾರಗೊಳ್ಳುತ್ತಿದೆ ಎಂದಿದೆ.
ಇನ್ನು ಈ ಕಾರ್ಯಕ್ರಮದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಸಚಿವ ವಿಕೆ ಸಿಂಗ್, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಮತ್ತು ಇತರ ನಾಯಕರು ಸಮಾರಂಭದಲ್ಲಿ ವೇದಿಕೆಯಲ್ಲಿದ್ದರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ವಿಡಿಯೋ ಲಿಂಕ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಜೈಪುರದ ಮುಖ್ಯಮಂತ್ರಿ ನಿವಾಸದಿಂದ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದು, ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ನುಹ್ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಿಂದ ಜೊತೆಯಾಗಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications