660 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ-ಎಲ್ಲಿ?-ಇಲ್ಲಿದೆ ಮಾಹಿತಿ
ರಾಂಚಿ, ಸೆಪ್ಟೆಂಬರ್, 15: ದೇಶದಲ್ಲಿ ಈಗಾಗಲೇ ಲೋಕಸಭಾ ಚುನಾವಣೆ ಮುಗಿದಿದ್ದು, ಇನ್ನು ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿಯವರು ಜಾರ್ಖಂಡ್‌ಗೆ ಆಗಾಗ ಭೇಟಿ ನೀಡುತ್ತಲೇ ಇದ್ದಾರೆ. ಇದೀಗ ಇದರ ನಡುವೆಯೇ ಇಂದು (ಸೆಪ್ಟೆಂಬರ್ 15) ರಾಜ್ಯದಲ್ಲಿ 660 ಕೋಟಿ ಮೊತ್ತದ ಯೋಜನೆಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಬಹುತೇಕ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದರ ನಡುವೆಯೇ ಈ ಡರಡು ರಾಜ್ಯಗಳಿಗೆ ಪ್ರಧಾನಿ ಮೋದಿ ಆಗಾಗ ಭೇಟಿ ನೀಡುತ್ತಲೇ ಇದ್ದು, ಇದು ಮತದಾರರನ್ನು ಸೆಳೆಯುವ ಬಿಜೆಪಿ ಪ್ಲಾನ್ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಇನ್ನು ಪ್ರಧಾನಮಂತ್ರಿ ಗ್ರಾಮೀಣ ಅವಾಸ್ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 15) ಜಾರ್ಖಂಡ್‌ನ ರಾಂಚಿಯಲ್ಲಿ 32,000 ಫಲಾನುಭವಿಗಳಿಗೆ ವರ್ಚುವಲ್ ಮೂಲಕ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ವಿತರಣೆ ಮಾಡಿದರು. ಇದೇ ವೇಳೆ ಮನೆಗಳ ನಿರ್ಮಾಣಕ್ಕೆ ನಿಡುವ ಮೊದಲ ಕಂತಿನ 32 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದರು.
#WATCH | PM Modi lays the foundation stone for the Madhupur Bye pass line in the Deoghar district and the Hazaribag Town Coaching Depot in the Hazaribag district of Jharkhand. pic.twitter.com/EI3QZxfGT4
— ANI (@ANI) September 15, 2024
ಆವಾಸ್ ಯೋಜನೆಯಡಿ ಜಾರ್ಖಂಡ್‌ನಲ್ಲಿ ಬಡವರಿಗೆ 1,13,400 ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಅನುಮೋದನೇ ನೀಡಿದೆ. ಇದೇ ಸಂದರ್ಭದಲ್ಲಿ ದೇಶಾದ್ಯಂತ ಯೋಜನೆಯ ಪ್ರಯೋಜನೆ ಪಡೆದ 46,000 ಫಲಾನುಭವಿಗಳಿಗೆ ಮನೆಗಳ ಕೀಗಳನ್ನು ವರ್ಚುವಲ್ ಮೂಲಕ ಹಸ್ತಾಂತರಿಸುವ ಪ್ರಕ್ರಿಯೆ ನಡೆಸಿದರು.
ಜಾರ್ಖಂಡ್‌ನಲ್ಲಿ ಒಟ್ಟು 660 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದರು. ದಿಯೋಘರ್ ಜಿಲ್ಲೆಯ ಮಧುಪುರ್ ಬೈಪಾಸ್ ಲೈನ್ ಮತ್ತು ಹಜಾರಿಬಾಗ್ ಟೌನ್ ಕೋಚಿಂಗ್ ಡಿಪೋದ ಶಂಕುಸ್ಥಾಪನೆ ಕೊ ಈ ಯೋಜನೆಯಲ್ಲಿ ಸೇರಿದೆ ಎಂದು ತಿಳಿದುಬಂದಿದೆ.
6 ವಂದೇ ಭಾರತ್ ರೈಲುಗಳಿಗೆ ಚಾಲನೆ: ಅಷ್ಟೇ ಅಲ್ಲದೆ, ನರೇಂದ್ರ ಮೋದಿ ಅವರು ಇಂದು ಜಾರ್ಖಂಟ್‌ನ ರಾಂಚಿಯಲ್ಲಿ 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಯಾವ್ಯಾವ ಮಾರ್ಗಗಳಿಗೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶದ ವಂದೇ ಭಾರತ್ ರೈಲುಗಳಿಗೆ ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು.
ಇದಕ್ಕೂ ಮುಂಚಿತವಾಗಿ ಟಾಟಾನಗರದಿಂದ ರೈಲುಗಳಿಗೆ ಚಾಲನೆ ನೀಡಲು ಪ್ರಧಾನಿ ನಿರ್ಧರಿಸಿದ್ದರು. ಆದರೆ ಅಸ್ಪಷ್ಟ ಗೋಚರ ಹಾಗೂ ಪ್ರತಿಕೂಲ ಹವಾಮಾನದ ಕಾರಣ ಅವರ ಹೆಲಿಕಾಪ್ಟರ್ ಅಲ್ಲಿ ಟೇಕ್ ಆಫ್ ಆಗಲಿಲ್ಲ. ಆದ್ದರಿಂದ ರಾಂಚಿಯಿಂದ ನೂತನ ರೈಲುಗಳ ಸಂಚಾರವನ್ನು ಉದ್ಘಾಟಿಸಿದರು.
ಈ ವೇಳೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಟಾಟಾನಗರ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.
ಹೊಸ ರೈಲುಗಳು ಟಾಟಾನಗರ-ಪಾಟ್ನಾ, ಬ್ರಹ್ಮಪುರ-ಟಾಟಾನಗರ, ರೂರ್ಕೆಲಾ-ಹೌರಾ, ದಿಯೋಘರ್-ವಾರಣಾಸಿ, ಭಾಗಲ್ಪುರ್-ಹೌರಾ ಮತ್ತು ಗಯಾ-ಹೌರಾ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ತಿಳಿಸದುಬಂದಿದೆ.
-
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Narendra Modi: ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ 18 ಅಂಶ: ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ












Click it and Unblock the Notifications