• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

|
   ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ | Oneindia Kannada

   ರಾಂಚಿ, ಸೆಪ್ಟೆಂಬರ್ 23: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಯುಷ್ಮಾನ್ ಭಾರತ್ ಗೆ ಭಾನುವಾರ(ಸೆಪ್ಟೆಂಬರ್ 23) ಮಧ್ಯಾಹ್ನ ಚಾಲನೆ ನೀಡಿದರು.

   ಆಯುಷ್ಮಾನ್ ಭಾರತ ಯೋಜನೆ : ಯಾರು ಫಲಾನುಭವಿ, ಯಾರು ಅರ್ಹರು?

   ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(PMJAY) ಮೂಲಕ ವಾರ್ಷಿಕವಾಗಿ ಫಲಾನುಭವಿ ಕುಟುಂಬಕ್ಕೆ 5 ಲಕ್ಷ ರು ತನಕ ಸಿಗಲಿದೆ. ಸುಮಾರು 10 ಕೋಟಿ ಬಡ ಕುಟುಂಬಗಳಿಗೆ ಇದರಿಂದ ನೆರವಾಗಲಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಪ್ರತಿಯೊಂದು ರೋಗಕ್ಕೂ ಒಂದು ದರ ನಿರ್ಧರಿಸಲಾಗಿದೆ. ಈ ದರ ಪಟ್ಟಿಯಂತೆ ನೇರವಾಗಿ ಆಸ್ಪತ್ರೆಗಳಿಗೆ ಹಣ ಪಾವತಿಯಾಗಲಿದೆ.

   ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸಹಾಯವಾಣಿ

   ಸೆಪ್ಟೆಂಬರ್ 23ರಂದು ಪ್ರಧಾನಿ ಮೋದಿ ಅವರು ಜಾರ್ಖಂಡ್ ನಲ್ಲಿ ಈ ಮಹತ್ವದ ಆರೋಗ್ಯ ಯೋಜನೆಗೆ ಚಾಲನೆ ನೀಡಿದರು. ಆದರೆ, ಸೆಪ್ಟೆಂಬರ್ 25ರಂದು ಪಂಡಿತ್ ದೀನ ದಯಾಳ್ ಉಪಾಧ್ಯಾಯ್ ಹುಟ್ಟುಹಬ್ಬದ ಅಂಗವಾಗಿ ಜನ ಆರೋಗ್ಯ ಯೋಜನೆ ಸಂಪೂರ್ಣವಾಗಿ ಜಾರಿಗೆ ಬರಲಿದೆ.

   ಮೋದಿ ಆರೋಗ್ಯ ಯೋಜನೆಯನ್ನು ಹಾಡಿಹೊಗಳಿದ ಬ್ರಿಟಿಷ್ ಪತ್ರಿಕೆ

   ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಮೊದಲ ಹಂತದಲ್ಲಿ ಈ ಯೋಜನೆ ಛತ್ತೀಸ್​​ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ದಮನ್ ಮತ್ತು ದಿಯು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜಾರಿಯಾಗಲಿದೆ.

   ಆಯುಷ್ಮಾನ್ ಭಾರತ್ ಅಥವಾ ಮೋದಿಕೇರ್ ಎಂದರೇನು?

   ರಾಷ್ಟ್ರೀಯ ಆರೋಗ್ಯ ಸಂಸ್ಥೆ (ಎನ್ ಎಚ್ಎ) ಯು ಆಯುಷ್ಮಾನ್ ಭಾರತ್ ಯೋಜನೆ ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಾಗಿ ವೆಬ್ ಸೈಟ್ ರೂಪಿಸಿದೆ. ಈ ವೆಬ್ ಸೈಟ್ ಮೂಲಕ ಫಲಾನುಭವಿಗಳು ವಿವರ ಪಡೆಯಬಹುದು. ತಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೆ ಎಂದು ಪರಿಶೀಲಿಸಬಹುದು.

   English summary
   PM Modi launches #AyushmanBharat–Pradhan Mantri Jan Aarogya Yojana #PMJAY in Ranchi
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X