ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
Recommended Video
ರಾಂಚಿ, ಸೆಪ್ಟೆಂಬರ್ 23: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಯುಷ್ಮಾನ್ ಭಾರತ್ ಗೆ ಭಾನುವಾರ(ಸೆಪ್ಟೆಂಬರ್ 23) ಮಧ್ಯಾಹ್ನ ಚಾಲನೆ ನೀಡಿದರು.
ಆಯುಷ್ಮಾನ್ ಭಾರತ ಯೋಜನೆ : ಯಾರು ಫಲಾನುಭವಿ, ಯಾರು ಅರ್ಹರು?
WATCH NOW -
— Doordarshan National (@DDNational) September 23, 2018
The launch of #AyushmanBharat by PM @narendramodi on @DDNational & Live-Stream on https://t.co/0XJs5OBRLO#PMJAY #PradhanMantriJanArogyaYojana @AyushmanNHA @MoHFW_INDIA pic.twitter.com/dsDS6J8Jm1
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(PMJAY) ಮೂಲಕ ವಾರ್ಷಿಕವಾಗಿ ಫಲಾನುಭವಿ ಕುಟುಂಬಕ್ಕೆ 5 ಲಕ್ಷ ರು ತನಕ ಸಿಗಲಿದೆ. ಸುಮಾರು 10 ಕೋಟಿ ಬಡ ಕುಟುಂಬಗಳಿಗೆ ಇದರಿಂದ ನೆರವಾಗಲಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಪ್ರತಿಯೊಂದು ರೋಗಕ್ಕೂ ಒಂದು ದರ ನಿರ್ಧರಿಸಲಾಗಿದೆ. ಈ ದರ ಪಟ್ಟಿಯಂತೆ ನೇರವಾಗಿ ಆಸ್ಪತ್ರೆಗಳಿಗೆ ಹಣ ಪಾವತಿಯಾಗಲಿದೆ.
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸಹಾಯವಾಣಿ
ಸೆಪ್ಟೆಂಬರ್ 23ರಂದು ಪ್ರಧಾನಿ ಮೋದಿ ಅವರು ಜಾರ್ಖಂಡ್ ನಲ್ಲಿ ಈ ಮಹತ್ವದ ಆರೋಗ್ಯ ಯೋಜನೆಗೆ ಚಾಲನೆ ನೀಡಿದರು. ಆದರೆ, ಸೆಪ್ಟೆಂಬರ್ 25ರಂದು ಪಂಡಿತ್ ದೀನ ದಯಾಳ್ ಉಪಾಧ್ಯಾಯ್ ಹುಟ್ಟುಹಬ್ಬದ ಅಂಗವಾಗಿ ಜನ ಆರೋಗ್ಯ ಯೋಜನೆ ಸಂಪೂರ್ಣವಾಗಿ ಜಾರಿಗೆ ಬರಲಿದೆ.
ಮೋದಿ ಆರೋಗ್ಯ ಯೋಜನೆಯನ್ನು ಹಾಡಿಹೊಗಳಿದ ಬ್ರಿಟಿಷ್ ಪತ್ರಿಕೆ
#LIVE Maharashtra Government launched PM-JAY at Sahyadri Guest House today. @dev_fadnavis #PMJAYlaunch #AyushmanBharat@pmoindia@nitiaayog@jpnadda pic.twitter.com/hqz20u3CyE
— National Health Agency (NHA) (@AyushmanNHA) September 23, 2018
ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಮೊದಲ ಹಂತದಲ್ಲಿ ಈ ಯೋಜನೆ ಛತ್ತೀಸ್ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ದಮನ್ ಮತ್ತು ದಿಯು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜಾರಿಯಾಗಲಿದೆ.
ಆಯುಷ್ಮಾನ್ ಭಾರತ್ ಅಥವಾ ಮೋದಿಕೇರ್ ಎಂದರೇನು?
#AyushmanBharat to be World's largest Health Insurance Initiative: Provides comprehensive health coverage up to Rs 5 lakh per family per year, to around 50 crore people. pic.twitter.com/JhWWASud16
— PIB India (@PIB_India) September 23, 2018
ರಾಷ್ಟ್ರೀಯ ಆರೋಗ್ಯ ಸಂಸ್ಥೆ (ಎನ್ ಎಚ್ಎ) ಯು ಆಯುಷ್ಮಾನ್ ಭಾರತ್ ಯೋಜನೆ ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಾಗಿ ವೆಬ್ ಸೈಟ್ ರೂಪಿಸಿದೆ. ಈ ವೆಬ್ ಸೈಟ್ ಮೂಲಕ ಫಲಾನುಭವಿಗಳು ವಿವರ ಪಡೆಯಬಹುದು. ತಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೆ ಎಂದು ಪರಿಶೀಲಿಸಬಹುದು.
Today is a historic day for India! We are launching the Pradhan Mantri Jan Arogya Yojana (PMJAY), which is a big step towards providing good quality and accessible healthcare to the poor of India. Over 10 crore families will benefit from this scheme.
— Narendra Modi (@narendramodi) September 23, 2018