ಮೋದಿಯಿಂದ ಸಾರ್ವಜನಿಕರ ಸಂಪರ್ಕ 'ವೆಬ್ ತಾಣ'
ನವದೆಹಲಿ, ಜು.27: ಸಾಮಾಜಿಕ ಜಾಲ ತಾಣಗಳನ್ನು ಬಳಸಿಕೊಂಡು ಜನರಿಗೆ ಹತ್ತಿರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕುಂದು ಕೊರತೆ ಆಲಿಸಲು ಪ್ರತ್ಯೇಕ ವೆಬ್ ತಾಣ ವನ್ನು ಲೋಕಾರ್ಪಣೆ ಮಾಡಿದ್ದಾರೆ.
ಜನಪರ ಆಡಳಿತ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ಹೆಜ್ಜೆಯೊಂದನ್ನು ಇಟ್ಟಿದ್ದು, ಪ್ರಜೆಗಳ ಸಮಸ್ಯೆಗಳಿಗೆ ಸ್ಪಂದಿಸುವ ವಿಶೇಷ ವೇದಿಕೆ ಒದಗಿಸಿದ್ದಾರೆ. mygov.nic.in ಎಂಬ ವೆಬ್ಸೈಟ್ಗೆ ಶನಿವಾರ ಚಾಲನೆ ನೀಡಿ ಇದು ತಾಂತ್ರಿಕ ಸೇತುವೆ ಎಂದು ಘೋಷಿಸಿದ್ದಾರೆ.

ಸರ್ಕಾರದ ಮಹತ್ವದ ಯೋಜನೆಗಳ ಅನುಷ್ಠಾನಕ್ಕೆ ಜನರ ಸಲಹೆ, ಅನಿಸಿಕೆಗಳನ್ನು ಪಡೆಯಲು ನಿರ್ಧಾರ ಮಾಡಿದ್ದಾರೆ. ಮೋದಿ ಆಶಯದಂತೆ, ಈ ವೆಬ್ಸೈಟ್ಗೆ ಚಾಲನೆ ನೀಡಲಾಗಿದೆ. ಗಂಗಾ ನದಿ ಶುದ್ಧೀಕರಣ, ಕೌಶಲ್ಯಾಭಿವೃದ್ಧಿ ಮುಂತಾದ ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಜನರು ತಮ್ಮ ಅಭಿಪ್ರಾಯ, ಸಲಹೆಗಳನ್ನು ಈ ವೆಬ್ಸೈಟ್ನಲ್ಲಿ ದಾಖಲಿಸಬಹುದು. ಇದು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ನೆರವಾಗಲಿದೆ.
A democracy can't succeed without people's participation. 'MyGov' empowers the people of India to contribute towards Surajya.
— Narendra Modi (@narendramodi) July 26, 2014 ವೆಬ್ಸೈಟ್ ಅನ್ನು ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳು ಉಪಯೋಗಿಸಲು ಅನುಕೂಲವಾಗುವಂತೆ, ವಿನ್ಯಾಸಗೊಳಿಸಲಾಗಿದೆ. ವೆಬ್ಸೈಟ್ನ ಮುಖಪುಟದಲ್ಲಿ, ಸಾರ್ವಜನಿಕರ ಅಭಿಪ್ರಾಯ, ಸಲಹೆ ದಾಖಲಿಸಲು, 'ಡೂ' ಹಾಗೂ 'ಡಿಸ್ಕಸ್' ಎಂಬ ಎರಡು ವಿಭಾಗಗಳನ್ನು ನೀಡಲಾಗಿದೆ. 'ಡೂ' ವಿಭಾಗದಲ್ಲಿ, ಯೋಜನೆಗಳ ಬಗ್ಗೆ ಜನರು ತಮ್ಮ ಅನಿಸಿಕೆಗಳನ್ನು ನೀಡಬಹುದು. 'ಡಿಸ್ಕಸ್'ನಲ್ಲಿ ತಮ್ಮ ವಿಚಾರಧಾರೆಗಳನ್ನು ಉಲ್ಲೇಖಿಸಿ, ಚರ್ಚೆಯಲ್ಲಿ ಭಾಗವಹಿಸಬಹುದು.
We want to expand the nature & scope of 'MyGov' in the days to come. We also seek your feedback, suggestions & ideas for 'MyGov'.
— Narendra Modi (@narendramodi) July 26, 2014 -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications