ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿಯವರಿಂದ ಶಂಕುಸ್ಥಾಪನೆ, ಕ್ರಿಕೆಟ್‌ ಲೋಕದ ದಿಗ್ಗಜರು ಭಾಗಿ

ವಾರಣಾಸಿ, ಸೆಪ್ಟೆಂಬರ್‌, 23: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್‌ 23) ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕ್ರಿಕೆಟ್ ದಂತಕಥೆಗಳಾದ ರವಿಶಾಸ್ತ್ರಿ, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್ ಮತ್ತು ದಿಲೀಪ್ ವೆಂಗ್ಸರ್ಕರ್ ಮೆಗಾಭಾಗವಹಿಸಿದ್ದರು. ಪ್ರಧಾನಿ ಕಚೇರಿಯ ಪ್ರಕಟಣೆಯ ಪ್ರಕಾರ, ಕ್ರೀಡಾಂಗಣವನ್ನು 30 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದು.

international-cricket-stadium-in-varanasi

ಕ್ರಿಕೆಟ್ ಕ್ರೀಡಾಂಗಣದ ವಿನ್ಯಾಸವು ಶಿವನಿಂದ ಸ್ಫೂರ್ತಿ ಪಡೆದಿದ್ದು, ಅರ್ಧಚಂದ್ರಾಕಾರದ ಛಾವಣಿಯ ಕವರ್‌ಗಳು, ತ್ರಿಶೂಲ ಆಕಾರದ ಫ್ಲಡ್-ಲೈಟ್‌ಗಳು, ಘಾಟ್ ಮೆಟ್ಟಿಲುಗಳ ಆಧಾರಿತ ಆಸನಗಳು, ಮುಂಭಾಗದಲ್ಲಿ ಬಿಲ್ವಿಪಾತ್ರ ಆಕಾರದ ಲೋಹದ ಹಾಳೆಗಳನ್ನು ಹೊಂದಿದೆ. ಈ ಕ್ರೀಡಾಂಗಣವು 30,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ತಿಳಿಸಿದೆ.

ಆಧುನಿಕ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಪ್ರಧಾನಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಾರಣಾಸಿಯ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವು ಒಂದು ಹೆಜ್ಜೆಯಾಗಿದೆ. ಆಧುನಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ವಾರಣಾಸಿಯ ಗಂಜಾರಿ, ರಜತಲಾಬ್‌ನಲ್ಲಿ ನಿರ್ಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಭೇಟಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ನಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದರು. ಮತ್ತು ಈ ಯೋಜನೆಗಳು ವಾರಣಾಸಿ ಮತ್ತು ಇಡೀ ಉತ್ತರ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+