ಯೋಗದಿನ: ಡೆಹ್ರಾಡೂನ್ ನಲ್ಲಿ ನರೇಂದ್ರ ಮೋದಿ ಯೋಗಾಚರಣೆ
ಡೆಹ್ರಾಡೂನ್, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಚರಣೆಯೊಂದಿಗೆ ಸಂಭ್ರಮ ಆಚರಿಸುತ್ತಿದ್ದಾರೆ.
ಡೆಹ್ರಾಡೂನಿನ ಫಾರೆಸ್ಟ್ ರೀಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಸುಮಾರು 55 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿರುವುದು ವಿಶೇಷ.
#WATCH: PM Modi leads #InternationalYogaDay2018 celebrations at Forest Research Institute in Dehradun, Uttarakhand. https://t.co/Egy1o14OBD
— ANI (@ANI) June 21, 2018
ಪ್ರಧಾನಿಗಳೂ ಈ ಕಾರ್ಯಕ್ರಮದಲ್ಲಿ ಆಗಮಿಸಿರುವ ಕಾರಣ 6 ಸಾವಿರ ಪೊಲೀಸರನ್ನು ನಿಯೋಜಿಸಿ, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

2015 ಜೂನ್ 21 ರಿಂದ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜೂನ್ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಗುರುತಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ಮಾಡಿದ್ದ ಮನವಿಯನ್ನು ವಿಶ್ವಸಂಸ್ಥೆ ಒಪ್ಪಿಕೊಂಡಿತ್ತು. ಈ ಕಾರಣ ಜೂನ್ 21 ರಂದು ವಿಶ್ವದಾದ್ಯಂತ ಯೋಗದಿನ ಆಚರಿಸಲಾಗುತ್ತಿದೆ.












Click it and Unblock the Notifications