Lok Sabha Election 2024: ತಮಿಳುನಾಡಿನ ಈ ಕ್ಷೇತ್ರದಿಂದ ಪ್ರಧಾನಿ ಮೋದಿ ಸ್ಪರ್ಧೆ?
ನವದೆಹಲಿ: ಭಾರತೀಯರು ಕಾಯುತ್ತಿರುವ ಆ ಸಮಯಕ್ಕೆ ಈಗ ದಿನಗಣನೆ ಶುರುವಾಗಿದೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ಕೇಂದ್ರದ ಬಿಜೆಪಿ ನಾಯಕರು ಸರ್ಪ್ರೈಸ್ ಮೇಲೆ ಸರ್ಪ್ರೈಸ್ ಕೊಡ್ತಾನೆ ಇದ್ದಾರೆ. ಇಷ್ಟೆಲ್ಲದರ ನಡುವೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು, ತಮಿಳುನಾಡು ಲೋಕಸಭೆ ಕ್ಷೇತ್ರದಿಂದ ಪ್ರಧಾನಿ ಮೋದಿ ಸ್ಪರ್ಧೆ ಮಾಡಲಿದ್ದಾರಂತೆ!
ಹೌದು ಪ್ರಧಾನಿ ನರೇಂದ್ರ ಮೋದಿ 2024ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧೆ ಮಾಡ್ತಾರೆ? ಅನ್ನೋ ಪ್ರಶ್ನೆ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಅದರಲ್ಲೂ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿನ ಸಂಸದರೊಬ್ಬರು ಮುಂದಿನ ಪ್ರಧಾನಿ ಆಗಲಿದ್ದಾರೆ ಅಂತಾ ಹೇಳಿದ್ದರು ಎನ್ನಲಾಗಿತ್ತು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಈಗ ಪಿಎಂ ಮೋದಿ ತಮಿಳುನಾಡು ರಾಜ್ಯದ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡೋದು ಬಹುತೇಕ ಪಕ್ಕಾ ಎನ್ನಲಾಗಿದೆ. ಹಾಗಾದರೆ ಪ್ರಧಾನಿ ಮೋದಿ ತಮಿಳುನಾಡಿನ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬಹುದು? ಅದರ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.

ಕನ್ಯಾಕುಮಾರಿ ಅಥವಾ ರಾಮನಾಥಪುರಂ?
ಈಗ ಓಡಾಡುತ್ತಿರುವ ಮಾಹಿತಿ ಪ್ರಕಾರ ತಮಿಳುನಾಡಿನ 2 ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಪಿಎಂ ಮೋದಿ ಸ್ಪರ್ಧೆ ಮಾಡಬಹುದು ಎನ್ನಲಾಗಿದೆ. ತಮಿಳುನಾಡು ಒಟ್ಟು 39 ಲೋಕಸಭಾ ಕ್ಷೇತ್ರಗಳನ್ನ ಹೊಂದಿದೆ. ಈ ಪೈಕಿ 32 ಸಾಮಾನ್ಯ ಹಾಗೂ 7 ಮೀಸಲು ಕ್ಷೇತ್ರಗಳು. ಆ ಲೆಕ್ಕಾಚಾರದಲ್ಲಿ ನೋಡುವುದಾದರೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ 32 ಕ್ಷೇತ್ರಗಳ ಪೈಕಿ 2 ಲೋಕಸಭೆ ಕ್ಷೇತ್ರಗಳ ಮೇಲೆ ಇದೀಗ ಗಮನ ಕೇಂದ್ರಿಕೃತವಾಗಿದೆ. ಕನ್ಯಾಕುಮಾರಿ ಇಲ್ಲವೇ ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ. ಹಾಗಾದರೆ ಈ ಎರಡು ಕ್ಷೇತ್ರಗಳು ಮಾತ್ರ ಟಾರ್ಗೆಟ್ ಆಗಿರೋದು ಯಾಕೆ? ಮುಂದೆ ಓದಿ.
ದಕ್ಷಿಣ ಭಾರತದಲ್ಲೂ ಬಿಜೆಪಿ ಪವರ್?
ಪ್ರಧಾನಿ ಮೋದಿ ಅವರು ತಮಿಳುನಾಡಿನ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಹಿಂದೆ ಹಲವು ರಣತಂತ್ರ ಇದೆ. ಈ ಪೈಕಿ ಪ್ರಮುಖವಾಗಿ ದಕ್ಷಿಣ ಭಾರತದ ಮೇಲೆ ಬಿಜೆಪಿ ಪ್ರಭಾವ ಬೀರುವುದಿಲ್ಲ ಎಂದು ವಿರೋಧ ಪಕ್ಷಗಳು ಹೇಳುವಾಗ ಅವರ ಲೆಕ್ಕಾಚಾರ ಉಲ್ಟ ಮಾಡಬಹುದು. ಹಾಗೇ ಮತ್ತೊಂದು ಕಡೆ ಪ್ರಧಾನಿ ಮೋದಿ ಅಂದರೆ ಉತ್ತರ ಭಾರತಕ್ಕೆ ಮಾತ್ರ ಸೀಮಿತ ಅನ್ನೋ ಆರೋಪಕ್ಕೆಡ ಅಂತ್ಯ ಹಾಡುವುದು. ಇದರ ಜೊತೆಗೇ ಬಿಜೆಪಿ ಪವರ್ ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಇದೆ ಅನ್ನೋದನ್ನೂ ಸಾಬೀತು ಮಾಡಲು ಕೇಸರಿ ಪಡೆ ಪ್ಲ್ಯಾನ್ ಮಾಡಿದೆ. ಆದರೆ ಇದು ವರ್ಕೌಟ್ ಆಗುತ್ತಾ? ಅನ್ನೋ ಅನುಮಾನ ಕೂಡ ಈಗ ಬಿಜೆಪಿ ನಾಯಕರ ಒಳಗೆ ಮೂಡಿದೆ.

ತಮಿಳುನಾಡು ಬಿಜೆಪಿ ನಾಯಕರ ರಣತಂತ್ರ!
ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಭಾರತದ ರಾಜ್ಯದಿಂದ ಸ್ಪರ್ಧೆ ಮಾಡಿದ್ರೆ ವಿಪಕ್ಷಗಳನ್ನು ಎದುರಿಸುವುದು ಸುಲಭ ಅನ್ನೋ ಲೆಕ್ಕಾಚಾರ ಕೂಡ ನಡೆಯುತ್ತಿದೆ. ಹಾಗೇ ತಮಿಳುನಾಡು ರಾಜಕೀಯದಲ್ಲಿ ಹೊಸ ಬದಲಾವಣೆ ತರಬಹುದು ಎಂಬ ಲೆಕ್ಕಾಚಾರ ಕೂಡ ನಡೀತಿದೆ. ಹೀಗಾಗಿಯೇ ತಮಿಳುನಾಡಿನ ಬಿಜೆಪಿ ನಾಯಕರು ಹೊಸ ಲೆಕ್ಕಾಚಾರ ಹಾಕುತ್ತಿದ್ದಾರೆ. ಈ ನಡುವೆ ಡಿಎಂಕೆ ಹಾಗೂ ಕಾಂಗ್ರೆಸ್ ಮೈತ್ರಿಗೂ ಠಕ್ಕರ್ ಕೊಡುವ ಐಡಿಯಾ ಕೂಡ ಇದೇ ರಣತಂತ್ರದಲ್ಲಿ ಇದೆ ಎನ್ನಲಾಗುತ್ತಿದೆ.
ಒಟ್ನಲ್ಲಿ ಪ್ರಧಾನಿ ಮೋದಿ ಅವರು ಇಷ್ಟುದಿನ ವಾರಣಸಿ ಕ್ಷೇತ್ರ
ಪ್ರತಿನಿಧಿಸುತ್ತಿದ್ದರು. ಈಗ ದಕ್ಷಿಣದ ರಾಜ್ಯದಿಂದ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇಲ್ಲಿ ತನಕ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಅಮಿತ್ ಶಾ ಅವರ ಹೇಳಿಕೆಗಳು ಕೂಡ ಇದೀಗ ಪ್ರಾಮುಖ್ಯತೆ ಪಡೆದಿವೆ. ಇನ್ನೇನು ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಅವರ ಸ್ಪರ್ಧೆ ಕುರಿತು ಅಂತಿಮ ತೀರ್ಮಾನ ಹೊರಬರುವ ಸಾಧ್ಯತೆ ಇದೆ. ಹೀಗಾಗಿ ಇಡೀ ದೇಶದ ಗಮನ ಇದೀಗ ತಮಿಳುನಾಡಿನ ಮೇಲೆ ನೆಟ್ಟಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications