ಶಿವಕುಮಾರ ಸ್ವಾಮೀಜಿಗೆ ಟ್ವೀಟ್ ಮೂಲಕ ಮೋದಿ ಗೌರವ ನಮನ
ನವದೆಹಲಿ, ಏಪ್ರಿಲ್ 1: ಕರ್ನಾಟಕದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನದ ಪ್ರಯುಕ್ತ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಅಪ್ರತಿಮ ಸಮಾಜ ಸೇವೆಯನ್ನು ನಾವು ಸದಾ ಸ್ಮರಿಸುತ್ತೇವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
"ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ," ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
"ಆರೋಗ್ಯ ಹಾಗು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ," ಎಂದು ಕೂಡಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಟ್ವೀಟ್‌ನಲ್ಲಿ ಸೇರಿಸಿದ್ದಾರೆ.
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022
ನಡೆದಾಡುವ ದೇವರ 115 ನೇ ಜನ್ಮ ದಿನೋತ್ಸವದ ಹಿನ್ನೆಲೆ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಪಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಇಂದು ಮುಂಜಾನೆಯೇ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ಮುಂಜಾನೆಯೇ ಶ್ರೀಗಳ ಗದ್ದುಗೆಗೆ ರುದ್ರಾಭಿಷೇಕ, ಪುಷ್ಪ ವೃಷ್ಟಿ ಮತ್ತು ಅರ್ಚಕರಿಂದ ಮಂತ್ರ ಪಠಣ ಕಾರ್ಯಗಳು ನಡೆದಿದೆ. ಇನ್ನು ಸಾವಿರಾರು ಮಂದಿಗೆ ಭೋಜನದ ವ್ಯವಸ್ಥೆಯನ್ನು ಕೂಡಾ ಮಠದಲ್ಲಿ ಮಾಡಲಾಗಿದೆ. ಇದಕ್ಕಾಗಿ ಮಠದಲ್ಲಿರುವ ವಿದ್ಯಾರ್ಥಿಗಳು ಕೂಡಾ ಕೈಜೋಡಿಸಿದ್ದಾರೆ.

ಸಿದ್ಧಗಂಗಾ ಮಠದಲ್ಲಿ ಅಮಿತ್ ಶಾ
ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಅಮಿತ್ ಶಾ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ನುಡಿನಮನ ಸಲ್ಲಿಸಿದ್ದಾರೆ. "ಜೀವನದಲ್ಲಿ ಮೂರನೇ ಬಾರಿ ಸಿದ್ದಗಂಗಾ ಮಠಕ್ಕೆ ಬಂದಿದ್ದೇನೆ. ಪ್ರತಿ ಬಾರಿಯು ಹೊಸ ಚೈತ್ಯನ ಬಂದಿದೆ," ಎಂದು ಅಮಿತ್ ಶಾ ಹೇಳಿದರು.
"ಉತ್ತರ ಗಂಗಾ, ದಕ್ಷಿಣದಲ್ಲಿ ಸಿದ್ದಗಂಗಾ ಎಂದು ಅಟಾಲ್ ಜಿ ಹೇಳಿದ್ದರು. ಆದರೆ ಅದರ ನಿಜವಾದ ಅರ್ಥವನ್ನು ನಾನು ನಿಮಗೆ ಹೇಳುತ್ತೇನೆ. ಗಂಗಾದಲ್ಲಿ ಸ್ನಾನ ಮಾಡಿದರೆ ಪವಿತ್ರ, ಸಿದ್ದಗಂಗಾಕ್ಕೆ ಬಂದರೆ ಪವಿತ್ರ," ಎಂದು ಕೂಡಾ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವರಿಸಿದರು.
"ಅನ್ನ, ಆಶ್ರಯ, ಅಕ್ಷರ ಸಿದ್ದಗಂಗಾ ಮಠದ ಮಂತ್ರ. ಇದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡಾ ಪಾಲನೆ ಮಾಡುತ್ತಿದ್ದಾರೆ," ಎಂದು ಹೇಳಿದ ಅಮಿತ್ ಶಾ, "ಸಂದೇಶ ಬೇರೆ ಬೇರೆ ರೀತಿಯಲ್ಲಿ ನೀಡಬಹುದು. ಶ್ರೀಗಳು ತನ್ನ ಕಾರ್ಯದ ಮೂಲಕ ಸಂದೇಶ ನೀಡಿದ್ದಾರೆ," ಎಂದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications