ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಕುಮಾರ ಸ್ವಾಮೀಜಿಗೆ ಟ್ವೀಟ್‌ ಮೂಲಕ ಮೋದಿ ಗೌರವ ನಮನ

|
Google Oneindia Kannada News

ನವದೆಹಲಿ, ಏಪ್ರಿಲ್‌ 1: ಕರ್ನಾಟಕದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನದ ಪ್ರಯುಕ್ತ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಅಪ್ರತಿಮ ಸಮಾಜ ಸೇವೆಯನ್ನು ನಾವು ಸದಾ ಸ್ಮರಿಸುತ್ತೇವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

"ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ," ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.

Amit Shah Visit to Siddaganga Mutt : ಸಿದ್ದಗಂಗಾ ಮಠದಲ್ಲಿ ಅಮಿತ್‌ ಶಾ: ಅಪ್‌ಡೇಟ್ಸ್‌‌Amit Shah Visit to Siddaganga Mutt : ಸಿದ್ದಗಂಗಾ ಮಠದಲ್ಲಿ ಅಮಿತ್‌ ಶಾ: ಅಪ್‌ಡೇಟ್ಸ್‌‌

"ಆರೋಗ್ಯ ಹಾಗು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ," ಎಂದು ಕೂಡಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಟ್ವೀಟ್‌ನಲ್ಲಿ ಸೇರಿಸಿದ್ದಾರೆ.

ನಡೆದಾಡುವ ದೇವರ 115 ನೇ ಜನ್ಮ ದಿನೋತ್ಸವದ ಹಿನ್ನೆಲೆ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಪಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಿದ್ದರು. ಇಂದು ಮುಂಜಾನೆಯೇ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ಮುಂಜಾನೆಯೇ ಶ್ರೀಗಳ ಗದ್ದುಗೆಗೆ ರುದ್ರಾಭಿಷೇಕ, ಪುಷ್ಪ ವೃಷ್ಟಿ ಮತ್ತು ಅರ್ಚಕರಿಂದ ಮಂತ್ರ ಪಠಣ ಕಾರ್ಯಗಳು ನಡೆದಿದೆ. ಇನ್ನು ಸಾವಿರಾರು ಮಂದಿಗೆ ಭೋಜನದ ವ್ಯವಸ್ಥೆಯನ್ನು ಕೂಡಾ ಮಠದಲ್ಲಿ ಮಾಡಲಾಗಿದೆ. ಇದಕ್ಕಾಗಿ ಮಠದಲ್ಲಿರುವ ವಿದ್ಯಾರ್ಥಿಗಳು ಕೂಡಾ ಕೈಜೋಡಿಸಿದ್ದಾರೆ.

PM Modi Pays Homage to Shivakumara Swamiji on His 115th Birth Anniversary

ಸಿದ್ಧಗಂಗಾ ಮಠದಲ್ಲಿ ಅಮಿತ್‌ ಶಾ

ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಅಮಿತ್‌ ಶಾ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ನುಡಿನಮನ ಸಲ್ಲಿಸಿದ್ದಾರೆ. "ಜೀವನದಲ್ಲಿ ಮೂರನೇ ಬಾರಿ ಸಿದ್ದಗಂಗಾ ಮಠಕ್ಕೆ ಬಂದಿದ್ದೇನೆ. ಪ್ರತಿ ಬಾರಿಯು ಹೊಸ ಚೈತ್ಯನ ಬಂದಿದೆ," ಎಂದು ಅಮಿತ್‌ ಶಾ ಹೇಳಿದರು.

"ಉತ್ತರ ಗಂಗಾ, ದಕ್ಷಿಣದಲ್ಲಿ ಸಿದ್ದಗಂಗಾ ಎಂದು ಅಟಾಲ್‌ ಜಿ ಹೇಳಿದ್ದರು. ಆದರೆ ಅದರ ನಿಜವಾದ ಅರ್ಥವನ್ನು ನಾನು ನಿಮಗೆ ಹೇಳುತ್ತೇನೆ. ಗಂಗಾದಲ್ಲಿ ಸ್ನಾನ ಮಾಡಿದರೆ ಪವಿತ್ರ, ಸಿದ್ದಗಂಗಾಕ್ಕೆ ಬಂದರೆ ಪವಿತ್ರ," ಎಂದು ಕೂಡಾ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿವರಿಸಿದರು.

"ಅನ್ನ, ಆಶ್ರಯ, ಅಕ್ಷರ ಸಿದ್ದಗಂಗಾ ಮಠದ ಮಂತ್ರ. ಇದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡಾ ಪಾಲನೆ ಮಾಡುತ್ತಿದ್ದಾರೆ," ಎಂದು ಹೇಳಿದ ಅಮಿತ್‌ ಶಾ, "ಸಂದೇಶ ಬೇರೆ ಬೇರೆ ರೀತಿಯಲ್ಲಿ ನೀಡಬಹುದು. ಶ್ರೀಗಳು ತನ್ನ ಕಾರ್ಯದ ಮೂಲಕ ಸಂದೇಶ ನೀಡಿದ್ದಾರೆ," ಎಂದರು.

English summary
PM Modi Pays Homage to Shivakumara Swamiji on His 115th Birth Anniversary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X