ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತಗೊಳಿಸಲು ರಾಜ್ಯಗಳಿಗೆ ಪ್ರಧಾನಿ ಕರೆ

ನವದೆಹಲಿ, ಏಪ್ರಿಲ್ 27: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾಗೂ ಬೆಲೆ ಏರಿಕೆ ನಡುವೆ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆಯನ್ನು ರಾಜ್ಯ ಸರ್ಕಾರಗಳು ಕಡಿತಗೊಳಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದಾರೆ.

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಕುರಿತು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ನವೆಂಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಿತ್ತು ಹಾಗೂ ರಾಜ್ಯಗಳೂ ಕಡಿತಗೊಳಿಸುವಂತೆ ಮನವಿ ಮಾಡಿಕೊಂಡಿತ್ತು. ಆದರೆ ಕೆಲವು ರಾಜ್ಯಗಳು ತೆರಿಗೆಯನ್ನು ಕಡಿತಗೊಳಿಸಿರಲಿಲ್ಲ ಎಂದು ಹೇಳಿದರು.

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಕಡಿತಕ್ಕೆ ಮೋದಿ ಮನವಿ

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಕಡಿತಕ್ಕೆ ಮೋದಿ ಮನವಿ

ಕಳೆದ ನವೆಂಬರ್ ತಿಂಗಳಿನಲ್ಲೇ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸುವಂತೆ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಅಂದು ತೆರಿಗೆ ಕಡಿತಗೊಳಿಸದ ರಾಜ್ಯಗಳು ಈಗಾಲಾದರೂ ಆ ಕೆಲಸವನ್ನು ಮಾಡಲಿ. ನಾನು ಯಾವುದೇ ರಾಜ್ಯವನ್ನು ಟೀಕಿಸುತ್ತಿಲ್ಲ, ಬದಲಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೆಲವು ರಾಜ್ಯಗಳ ಹೆಸರು ಉಲ್ಲೇಖಿಸಿದ ಪ್ರಧಾನಿ ಮೋದಿ

ಕೆಲವು ರಾಜ್ಯಗಳ ಹೆಸರು ಉಲ್ಲೇಖಿಸಿದ ಪ್ರಧಾನಿ ಮೋದಿ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಕೇಂದ್ರ ಸರ್ಕಾರವು ಈ ಹಿಂದೆಯೇ ಒಂದು ಬಾರಿ ಇಂಧನ ದರದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಿತ್ತು. ಅಂದು ತೆರಿಗೆ ಕಡಿತಗೊಳಿಸದ ತಮಿಳುನಾಡು, ಪಶ್ಚಿಮ ಬಂಗಾಳ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ(ವ್ಯಾಟ್)ಯನ್ನು ತಗ್ಗಿಸಬೇಕು. ಆ ಮೂಲಕ ರಾಜ್ಯದ ಜನರಿಗೆ ಅನುಕೂಲ ಕಲ್ಪಿಸಿ ಕೊಡಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವೆಂಬರ್ ತಿಂಗಳಿನಲ್ಲಿ ಕೇಂದ್ರ ಕಡಿತಗೊಳಿಸಿದ ತೆರಿಗೆ?

ನವೆಂಬರ್ ತಿಂಗಳಿನಲ್ಲಿ ಕೇಂದ್ರ ಕಡಿತಗೊಳಿಸಿದ ತೆರಿಗೆ?

2021ರ ನವೆಂಬರ್ ತಿಂಗಳಿನಲ್ಲೂ ಪೆಟ್ರೋಲ್-ಡೀಸೆಲ್ ದರ ಗಗನಮುಖಿಯಾಗಿ ಏರಿಕೆಯಾಗಿತ್ತು. ಈ ಹಂತದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ತೆರಿಗೆಯನ್ನು 5 ರೂಪಾಯಿ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 10 ರೂಪಾಯಿ ಕಡಿತಗೊಳಿಸಲಾಗಿತ್ತು. ಕೇಂದ್ರ ಸರ್ಕಾರದ ನಿರ್ಧಾರದ ಬೆನ್ನಲ್ಲೇ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಇಂಧನ ದರದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದ್ದವು.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು ಕಳೆದ ಮೂರು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ರಾಜಸ್ಥಾನದ ಗಂಗಾನಗರದಲ್ಲಿ ಪೆಟ್ರೋಲ್ ಅತ್ಯಧಿಕ 122.93 ಪ್ರತಿ ಲೀಟರ್ ಹಾಗೂ ಡೀಸೆಲ್ 105.34 ರು ನಷ್ಟಿದೆ. ದೆಹಲಿಯಲ್ಲಿ ಪೆಟ್ರೋಲ್ 105.41 ಡೀಸೆಲ್ 96.67, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 111.09 ರೂಪಾಯಿ ಇದ್ದರೆ, ಡೀಸೆಲ್ ದರ 94.79 ರೂಪಾಯಿ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+