PM Modi Speech: ರಾಜ್ಯಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆಯೂ ಭಾಷಣ ಮುಂದುವರೆಸಿದ ಪ್ರಧಾನಿ ಮೋದಿ
PM Modi Speech: ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ದೇಶವು ಎಲ್ಲಾ ಕ್ಷೇತ್ರಗಳಲ್ಲೂ ವೇಗವಾಗಿ ಬೆಳೆಯುತ್ತಿದೆ ಎಂದು ಹೇಳಿದರು. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದ ಆರ್ಥಿಕತೆ ಜಾಗತಿಕ ಮಟ್ಟದಲ್ಲಿ ಮೂರನೇ ಸ್ಥಾನಕ್ಕೆ ಏರಿದೆ ಎಂದು ಉಲ್ಲೇಖಿಸಿದ ಅವರು, ಪ್ರಮುಖ ಆರ್ಥಿಕ ರಾಷ್ಟ್ರಗಳ ಪೈಕಿ ಭಾರತದ ಬೆಳವಣಿಗೆ ದರ ಅತ್ಯಂತ ಗಮನಾರ್ಹವಾಗಿದೆ ಎಂದು ತಿಳಿಸಿದರು.
ಭಾಷಣದ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳನ್ನು ವಿವರಿಸಿದ ಪ್ರಧಾನಿ ಮೋದಿ ಅವರು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದರು. ಈ ನಡುವೆ ವಿಪಕ್ಷಗಳು ಸದನದಲ್ಲಿ ಗದ್ದಲ ಉಂಟುಮಾಡಿ ವಿರೋಧ ವ್ಯಕ್ತಪಡಿಸಿದವು. ಬಳಿಕ ಕೆಲ ವಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಇದರಿಂದ ರಾಜ್ಯಸಭೆಯ ವಾತಾವರಣ ಕೆಲಕಾಲ ಉದ್ವಿಗ್ನಗೊಂಡಿತು.

ಪ್ರಧಾನಿ ಮೋದಿ ಹೇಳಿದ್ದೇನು?: ನಾವು ಎಂದಿಗೂ ಸ್ಥಗಿತಗೊಳ್ಳುವುದಿಲ್ಲ, ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಅವರು, 21ನೇ ಶತಮಾನದ ಮೊದಲ ಕಾಲುಭಾಗ ಈಗಾಗಲೇ ಪೂರ್ಣಗೊಂಡಿದೆ ಎಂದು ಉಲ್ಲೇಖಿಸಿದರು. ಸ್ವಾತಂತ್ರ್ಯದ ಶತಮಾನೋತ್ಸವದೊಂದಿಗೆ ಮತ್ತೊಂದು ಪ್ರಮುಖ ಹಂತ ಆರಂಭವಾಗಲಿದೆ. ಮುಂದಿನ 21ನೇ ಶತಮಾನದ ಮತ್ತೊಂದು ಕಾಲುಭಾಗ ಸಂಪೂರ್ಣವಾಗಿ ಭಾರತದ ಅಭಿವೃದ್ಧಿಗೆ ಸಮರ್ಪಿಸಲಾಗುವುದು. ದೇಶದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದೀರ್ಘಕಾಲೀನ ಗುರಿಗಳೊಂದಿಗೆ ಮುಂದುವರೆಯುವ ಸಂಕಲ್ಪವಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಸಿಕ್ಕ ಸಮಯದಲ್ಲಿ ಭಾರತ ಜಾಗತಿಕ ಆರ್ಥಿಕತೆಯಲ್ಲಿ ಆರನೇ ಸ್ಥಾನದಲ್ಲಿತ್ತು. ನಂತರದ ಅವಧಿಯಲ್ಲಿ ದೇಶವನ್ನು ಹನ್ನೆರಡನೇ ಸ್ಥಾನಕ್ಕೆ ಇಳಿಯುವಂತೆ ಮಾಡಿದರು. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭಾರತ ಮತ್ತೆ ಮೂರನೇ ಸ್ಥಾನಕ್ಕೆ ಏರಿದೆ ಎಂದು ಹೇಳಿದರು.
ಇಂದು ಭಾರತ ಎಲ್ಲಾ ಕ್ಷೇತ್ರಗಳಲ್ಲೂ ವೇಗವಾಗಿ ವೇಗವಾಗಿ ಬೆಳೆಯುತ್ತಿದ್ದು, ಪ್ರಮುಖ ಆರ್ಥಿಕ ರಾಷ್ಟ್ರಗಳ ಪೈಕಿ ಗಮನಾರ್ಹವಾಗಿ ಬೆಳವಣಿಗೆ ಕಾಣುತ್ತಿದೆ. ಹೆಚ್ಚು ಅಭಿವೃದ್ಧಿ, ನಿಯಂತ್ರಿತ ಹಣದುಬ್ಬರ ಮತ್ತು ಬಲಿಷ್ಠ ಆರ್ಥಿಕ ವ್ಯವಸ್ಥೆ ಇವುಗಳೇ ಇಂದಿನ ಭಾರತದ ಪ್ರಮುಖ ಲಕ್ಷಣಗಳಾಗಿವೆ ಎಂದು ಅಭಿಪ್ರಾಯಪಟ್ಟರು.
ರಾಷ್ಟ್ರಪತಿ ಭಾಷಣದ ಬಗ್ಗೆ ಪ್ರತಿಕ್ರಿಯೆ: ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ದೇಶದ ಅಗತ್ಯಗಳ ಬಗ್ಗೆ ಸೂಕ್ಷ್ಮವಾಗಿ ಪ್ರತಿಬಿಂಬಿಸಿದ್ದಾರೆ. ಮಧ್ಯಮ ವರ್ಗ, ಬಡವರು, ಗ್ರಾಮೀಣ ಜನತೆ, ರೈತರು, ಮಹಿಳೆಯರು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳ ಬಗ್ಗೆ ಸಮಗ್ರವಾಗಿ ಉಲ್ಲೇಖಿಸಿರುವುದು ವಿಶೇಷತೆಯಾಗಿದೆ ಎಂದು ಹೇಳಿದರು.
ಈ ಮೂಲಕ ರಾಷ್ಟ್ರಪತಿ ಭಾಷಣವು ಎಲ್ಲಾ ವರ್ಗಗಳ ಜನರ ಬದುಕು ಹಾಗೂ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡ ಸಮತೋಲನದ ದೃಷ್ಟಿಕೋನವನ್ನು ಹೊಂದಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.
ನಿನ್ನೆ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವ ನಿರೀಕ್ಷೆ ಇದ್ದರೂ, ಸ್ಪೀಕರ್ ಓಂ ಬಿರ್ಲಾ ಅವರ ಸಲಹೆಯ ಹಿನ್ನೆಲೆ ಅವರು ಭಾಷಣ ಮಾಡಲಿಲ್ಲ. ಈ ಬೆಳವಣಿಗೆಯ ಕುರಿತು ಇಂದು ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಅಡ್ಡಿ ತರುವುದು ರಾಷ್ಟ್ರಪತಿ ಸ್ಥಾನಕ್ಕೆ ಅಪಮಾನ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.
ಇಂತಹ ವರ್ತನೆ ತೋರಿಸುವವರಿಗೆ ಸಂವಿಧಾನದ ಮೌಲ್ಯಗಳ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಸದನದ ಗೌರವ ಮತ್ತು ಸಂವಿಧಾನದ ಪರಂಪರೆಯನ್ನು ಕಾಪಾಡಬೇಕು ಎಂಬುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಅವರು ಒತ್ತಿ ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications